ಜಕ್ಕಲಿಯಲ್ಲಿ ಅಂದಾನಪ್ಪ ದೊಡ್ಡಮೇಟಿ ಸ್ಮಾರಕ ಭವನ ನಿರ್ಮಾಣ: ಜುಲೈ 5ರಂದು ಶಾಸಕ ಜಿ.ಎಸ್. ಪಾಟೀಲರಿಂದ ಭೂಮಿ ಪೂಜೆ
ಕೊಡತಗೇರಿ ಎಕ್ಸಪ್ರೆಸ್ ಡಿಜಿಟಲ್ ಹೌಸ್
ಗದಗ: ಕರ್ನಾಟಕ ಏಕೀಕರಣದ ಪ್ರಮುಖ ರೂವಾರಿಗಳಲ್ಲಿ ಒಬ್ಬರಾದ ದಿ. ಶ್ರೀ ಅಂದಾನಪ್ಪ ದೊಡ್ಡಮೇಟಿಯವರ ಸ್ಮರಣಾರ್ಥ, ಗದಗ ಜಿಲ್ಲೆಯ ರೋಣ ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ನಿರ್ಮಾಣಗೊಳ್ಳಲಿರುವ ‘ಅಂದಾನಪ್ಪ ದೊಡ್ಡಮೇಟಿ ಸ್ಮಾರಕ ಭವನ’ದ ಭೂಮಿ ಪೂಜೆ ಸಮಾರಂಭವು ಜುಲೈ 5, 2026ರ ಭಾನುವಾರ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.
ರೋಣ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಜಿ.ಎಸ್. ಪಾಟೀಲರು ಈ ಭವನದ ಭೂಮಿ ಪೂಜಾ ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ.
ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆಯ ಸಹಯೋಗದಲ್ಲಿ ಈ ಭವನವನ್ನು ನಿರ್ಮಿಸಲಾಗುತ್ತಿದ್ದು, ಯೋಜನೆಗಾಗಿ ಸುಮಾರು ₹3 ಕೋಟಿ (300 ಲಕ್ಷ ರೂ.) ವೆಚ್ಚವನ್ನು ಅಂದಾಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಆತ್ಮೀಯ ಸ್ವಾಗತ ಕೋರಲಾಗಿದೆ.


More Stories
ಗಜೇಂದ್ರಗಡ-ರೋಣ ಭಾಗದಲ್ಲಿ ಪವನ ವಿದ್ಯುತ್ ಯಂತ್ರಗಳ ಹಾವಳಿ: ಕಂಗೆಟ್ಟ ರೈತರು, ಆತಂಕದಲ್ಲಿ ಜನಸಾಮಾನ್ಯರು
ಮಹಿಳೆಯನ್ನು ಸುಟ್ಟ ಕೊಂದ ಆರೋಪಿ ಅಂದರ್
ಶಾಸಕ ಜಿ.ಎಸ್. ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಹುಲಿಗೆಮ್ಮ ದೇವಿ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ