July 4, 2026

ಜಕ್ಕಲಿಯಲ್ಲಿ ಅಂದಾನಪ್ಪ ದೊಡ್ಡಮೇಟಿ ಸ್ಮಾರಕ ಭವನ ನಿರ್ಮಾಣ: ಜುಲೈ 5ರಂದು ಶಾಸಕ ಜಿ.ಎಸ್. ಪಾಟೀಲರಿಂದ ಭೂಮಿ ಪೂಜೆ

ಜಕ್ಕಲಿಯಲ್ಲಿ ಅಂದಾನಪ್ಪ ದೊಡ್ಡಮೇಟಿ ಸ್ಮಾರಕ ಭವನ ನಿರ್ಮಾಣ: ಜುಲೈ 5ರಂದು ಶಾಸಕ ಜಿ.ಎಸ್. ಪಾಟೀಲರಿಂದ ಭೂಮಿ ಪೂಜೆ

ಕೊಡತಗೇರಿ ಎಕ್ಸಪ್ರೆಸ್ ಡಿಜಿಟಲ್ ಹೌಸ್

ಗದಗ: ಕರ್ನಾಟಕ ಏಕೀಕರಣದ ಪ್ರಮುಖ ರೂವಾರಿಗಳಲ್ಲಿ ಒಬ್ಬರಾದ ದಿ. ಶ್ರೀ ಅಂದಾನಪ್ಪ ದೊಡ್ಡಮೇಟಿಯವರ ಸ್ಮರಣಾರ್ಥ, ಗದಗ ಜಿಲ್ಲೆಯ ರೋಣ ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ನಿರ್ಮಾಣಗೊಳ್ಳಲಿರುವ ‘ಅಂದಾನಪ್ಪ ದೊಡ್ಡಮೇಟಿ ಸ್ಮಾರಕ ಭವನ’ದ ಭೂಮಿ ಪೂಜೆ ಸಮಾರಂಭವು ಜುಲೈ 5, 2026ರ ಭಾನುವಾರ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.

​ರೋಣ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಜಿ.ಎಸ್. ಪಾಟೀಲರು ಈ ಭವನದ ಭೂಮಿ ಪೂಜಾ ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ.

​ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆಯ ಸಹಯೋಗದಲ್ಲಿ ಈ ಭವನವನ್ನು ನಿರ್ಮಿಸಲಾಗುತ್ತಿದ್ದು, ಯೋಜನೆಗಾಗಿ ಸುಮಾರು ₹3 ಕೋಟಿ (300 ಲಕ್ಷ ರೂ.) ವೆಚ್ಚವನ್ನು ಅಂದಾಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಆತ್ಮೀಯ ಸ್ವಾಗತ ಕೋರಲಾಗಿದೆ.