ಜಾತಿನಿಂದನೆ ಪ್ರಕರಣ: 98 ದೋಷಿಗಳಿಗೆ ಜೀವಾವಧಿ ಶಿಕ್ಷೆ ಮಹತ್ವದ ತೀರ್ಪು

Appointment of Kodatageri as KDP Quarterly Committee Member

ಶಾಸಕ ಜನಾರ್ಧನ ರೆಡ್ಡಿ ವಿರುದ್ಧ ಕ್ರಮಕ್ಕೆ-  ಕುಬೇರ ಮಜ್ಜಿಗಿ ಅಗ್ರಹ

ವಿಚ್ಚೇದನ ಪ್ರಕರಣಗಳಲ್ಲಿ ಮಠಾಧೀಶರ ಮಧ್ಯಸ್ಥೀಕೆ ಎಷ್ಟು ಸರಿ?’.

ಸೆಕೆಂಡ್​ ಹ್ಯಾಂಡ್​​ ಮೊಬೈಲ್ ಬಗ್ಗೆ ಎಚ್ಚರ!: ಬೆಂಗಳೂರಿನಲ್ಲಿ ​6 ತಿಂಗಳಲ್ಲಿ 2,350 ಅಕೌಂಟ್​ಗೆ ಕನ್ನ..!

ಸೆ, 19 ರಂದು ಭಾಗ್ಯನಗರದಲ್ಲಿ ಕೌದಿ ನಾಟಕ ಪ್ರದರ್ಶನ

ಶಾಲೆಗಾಗಿ ಪಡೆದ ಸಿಎ ಸೈಟ್‌ನಲ್ಲಿ ಧಮ್ ಬಿರಿಯಾನಿ ಹೋಟೆಲ್‌! ಛಲವಾದಿ ನಾರಾಯಣ ಸ್ವಾಮಿ ವಿರುದ್ಧ ಆರೋಪ

ವಿಪ್ ಉಲ್ಲಂಘನೆ ಕಾನೂನು ಕ್ರಮ ಒತ್ತಾಯಿಸಿ ಬಿಜೆಪಿ ದೂರು

ಸ್ನೇಹಮಯಿ ಕೃಷ್ಣ ರೌಡಿಶೀಟರ್: ಸಿಎಂ ಕೇಸ್ ನಲ್ಲಿ ಅವರ ಕಡೆಯವರು 100 ಕೋಟಿ ಡೀಲ್ ಗೆ ಬಂದಿದ್ರು -ಎಂ.ಲಕ್ಷ್ಮಣ್

ಜಾತಿ ನಿಂದನೆ ಉದ್ದೇಶವಿದ್ದರೆ ಮಾತ್ರ ಅಟ್ರಾಸಿಟಿ ಕಾಯ್ದೆ ಅನ್ವಯ- ಸುಪ್ರೀಂಕೋರ್ಟ್

ಕಾನೂನು ಮಹಾವಿದ್ಯಾಲಯ ಅಡಿಗಲ್ಲು ಪೂಜೆ

ಯುವಕರ ಧ್ವನಿಯಾಗಿ ಕೆಲಸ ಮಾಡಿವೆ : ಅಕ್ಷಯ ಪಾಟೀಲ

ಮಗಳು ಮೃತಪಟ್ಟಿದ್ದರೂ ಆಸ್ತಿ ಹಕ್ಕು

ಬಿಜೆಪಿ ಪಕ್ಷದ ಜಿಲ್ಲಾ ಪ್ರಕೋಷ್ಠ ಸಾಂಸ್ಕೃತಿಕ ಸಹ ಸಂಚಾಲಕರಾಗಿ ಕಲಾವಿದೆ ಗೀತಾ ಚಿಂತಾಕಲ್ ನೇಮಕ

ಖಾಸಗಿ ಕಂಪನಿಗಳಲ್ಲಿಯು ಕನ್ನಡಿಗರಿಗೆ ಮೀಸಲಾತಿ ನೀಡಬೇಕು ಸ ಶರಣಪ್ಪ ಪಾಟೀಲ

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಶತ ಶತಮಾನದ ಮೊಹರಂಗೆ ಕಳೆ ತುಂಬಿದ ಭಾರತ 

ಜಮೀನು ಮಾರಾಟ ವಂಚನೆ ಪ್ರಕರಣ: ವಕೀಲರ ಸಹಿತ 14 ಮಂದಿ ಮೇಲೆ FIR ದಾಖಲು

ಚಂದನ್‌-ನಿವೇದಿತಾ ಡಿವೋರ್ಸ್‌

ಗದಗ RTO ಅಧಿಕಾರಿ ಲಕ್ಷ್ಮೀಕಾಂತ ರಿಂದ ಸರಕಾರಿ ವಾಹನ ದುರುಪಯೋಗ ಕ್ರಮಕ್ಕೆ ಅಗ್ರಹ

ಕಪ್ಪತ್ತಗುಡ್ಡದಲ್ಲಿ ಹೆಚ್ಚಿದ ವನ್ಯಜೀವಿಗಳ ಸಂತತಿ

ಅರಣ್ಯ ಇಲಾಖೆ ನಡೆಸಿದ ಸಮೀಕ್ಷೆಯಲ್ಲಿ ಬಹಿರಂಗ: ಪರಿಸರಪ್ರಿಯರಿಗೆ ಸಂತಸ

ಕೊಡತಗೇರಿ ಎಕ್ಸ್‌ಪ್ರೆಸ್‌

ಕಪ್ಪತ್ತಗುಡ್ಡದಲ್ಲಿ ಹೆಚ್ಚಿದ ವನ್ಯಜೀವಿಗಳ ಸಂತತಿ

ಗದಗ: ಉತ್ತರ ಕರ್ನಾಟಕದ ಸಹ್ಯಾದ್ರಿ ಎನಿಸಿರುವ ಕಪ್ಪತ್ತಗುಡ್ಡದಲ್ಲಿ ವನ್ಯಜೀವಿಗಳ ಸಂಖ್ಯೆ ವೃದ್ಧಿಸಿರುವುದು, ಅರಣ್ಯ ಇಲಾಖೆ ನಡೆಸಿದ ಸಮೀಕ್ಷೆಯಿಂದ ತಿಳಿದುಬಂದಿದೆ. ಇದೇ ಮೊದಲಬಾರಿಗೆ ಅತಿ ಅಪರೂಪದ ಪ್ರಾಣಿಗಳಾದ ಚಿಂಕಾರ ಹಾಗೂ ರೆಸ್ಟಿ ಸ್ಪಾಟೆಡ್‌ ಬೆಕ್ಕುಗಳು ಕಪ್ಪತ್ತಗುಡ್ಡಲ್ಲಿ ಕಂಡು ಬಂದಿವೆ.

ಕಪ್ಪತ್ತಗುಡ್ಡ ವನ್ಯಜೀವಿಧಾಮವು ಗದಗ, ಮುಂಡರಗಿ ಹಾಗೂ ಶಿರಹಟ್ಟಿ ತಾಲ್ಲೂಕಿನಲ್ಲಿ ಸುಮಾರು 65 ಕಿ.ಮೀ. ಉದ್ದಕ್ಕೆ ಚಾಚಿಕೊಂಡಿದೆ. ಕಪ್ಪತ್ತಗುಡ್ಡವನ್ನು ವನ್ಯಜೀವಿಧಾಮ ಎಂದು ಘೋಷಣೆ ಮಾಡಿದ ನಂತರ ಇಲ್ಲಿ ಸಸ್ಯ ಹಾಗೂ ವನ್ಯಜೀವಿಗಳ ಸಂತತಿ ನಿಧಾನವಾಗಿ ವೃದ್ಧಿಸುತ್ತಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

‘ಕಪ್ಪತ್ತಗುಡ್ಡದಲ್ಲಿರುವ ಸಸ್ಯಾಹಾರಿ ಮತ್ತು ಮಾಂಸಾಹಾರಿ ಪ್ರಾಣಿಗಳ ನೆಲೆ ಕಂಡುಹಿಡಿಯಲು ಈವರೆಗೆ ಯಾವುದೇ ವೈಜ್ಞಾನಿಕ ಅಧ್ಯಯನ ನಡೆದಿರಲಿಲ್ಲ. ಈ ಹಿನ್ನಲೆಯಲ್ಲಿ ಡೆಹರಾಡೂನ್‌ನ ಭಾರತೀಯ ವನ್ಯಜೀವಿ ಸಂಸ್ಥೆ, ದಾಂಡೇಲಿಯ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ವನ್ಯಜೀವಿ ಘಟಕದ ಸಿಬ್ಬಂದಿ ನೆರವಿನಿಂದ ಮೇ 07ರಿಂದ ಜುಲೈ 15ರವರೆಗೆ ಕಪ್ಪತ್ತಗುಡ್ಡ ವನ್ಯಜೀವಿಧಾಮದಲ್ಲಿ ಪ್ರಾಥಮಿಕ ಅಧ್ಯನ ನಡೆಸಲಾಗಿದೆ. ಇದರಿಂದ ನಮಗೆ ಅಚ್ಚರಿಯ ಫಲಿತಾಂಶ ಲಭಿಸಿದ್ದು, ಕಪ್ಪತ್ತಗುಡ್ಡದಲ್ಲಿ ಎಷ್ಟೆಲ್ಲಾ ವೈವಿಧ್ಯದ ಪ್ರಾಣಿಗಳಿವೆ ಎಂಬುದು ಆಶ್ಚರ್ಯ ತರಿಸಿದೆ’ ಎಂದು ಡಿಸಿಎಫ್‌ ದೀಪಿಕಾ ಬಾಜಪೇಯಿ ತಿಳಿಸಿದ್ದಾರೆ.

‘ಸೈನ್‌ ಸರ್ವೆ ವಿಧಾನದಲ್ಲಿ 128 ಕಿ.ಮೀ. ಸಂಚರಿಸಿ ಪ್ರಾಣಿಗಳ ಮಲದ ನಮೂನೆ, ಮರ ಮತ್ತು ಅರಣ್ಯ ಪ್ರದೇಶದಲ್ಲಿ ಪ್ರಾಣಿಗಳು ಪರಚಿದ ಗುರುತುಗಳನ್ನು ವೀಕ್ಷಿಸಲಾಗಿದೆ. ಲೈನ್ಸ್‌ ಟ್ರಾನ್ಸಕ್ಟ್‌ ವಿಧಾನದಲ್ಲಿ ಪ್ರಾಣಿಗಳ ಸಂಚಾರ ಮಾರ್ಗ ಗಮನಿಸಲಾಗಿದೆ. ಜತೆಗೆ ಕ್ಯಾಮೆರಾ ಟ್ರ್ಯಾಪ್‌ ವಿಧಾನದಲ್ಲಿ ಕಪ್ಪತ್ತಗುಡ್ಡದಲ್ಲಿ 98 ಕ್ಯಾಮೆರಾ ಅಳವಡಿಸಿ 30 ದಿನಗಳ ಕಾಲ ನಿರಂತರ ವೀಕ್ಷಣೆ ಮಾಡಲಾಗಿದೆ. ಈ ಮೂರು ವಿಧಾನಗಳಿಂದ ಪ್ರಾಣಿಗಳ ಸಂತತಿ ಸಂಖ್ಯೆ, ಅವುಗಳ ನೆಲೆ ಹಾಗೂ ಆಹಾರ ಪದ್ಧತಿಯನ್ನು ಅಧ್ಯಯನ ಮಾಡಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

‘ಕಪ್ಪತ್ತಗುಡ್ಡದಲ್ಲಿ ಹಿಂದೆ ಎಷ್ಟು ಸಂಖ್ಯೆಯಲ್ಲಿ ಪ್ರಾಣಿಗಳಿದ್ದವು ಎಂಬುದಕ್ಕೆ ಮೂಲ ದಾಖಲೆಗಳಿಲ್ಲ. ಸಮೀಕ್ಷೆಗಳು ನಡೆದಿಲ್ಲ. ಆದರೆ, ಕಪ್ಪತ್ತಗುಡ್ಡ ವನ್ಯಜೀವಿಧಾಮ ಎಂದು ಘೋಷಣೆಯಾದ ನಂತರ ಹೆಚ್ಚಿನ ಅನುದಾನ ಸಿಗುತ್ತಿರುವುದು, ಕಾಡಿನ ರಕ್ಷಣೆಗೆ ಸಿಬ್ಬಂದಿ ಸಂಖ್ಯೆ ಹೆಚ್ಚಿಸಿರುವುದು, ಕುಡಿಯುವ ನೀರಿನ ಹೊಂಡಗಳ ನಿರ್ಮಾಣ, ಕಾಡ್ಗಿಚ್ಚಿನಿಂದ ಅರಣ್ಯ ರಕ್ಷಣೆಗೆ ಒತ್ತು ನೀಡಿರುವುದು, ಕಳ್ಳೆಬೇಟೆ ನಿಯಂತ್ರಣ ಮೊದಲಾದ ಕಾರಣಗಳಿಂದ ಪ್ರಾಣಿಗಳ ಸಂತತಿ ಹೆಚ್ಚಿದೆ. ಮುಂದಿನ ಐದತ್ತು ವರ್ಷಗಳಲ್ಲಿ ಪ್ರಾಣಿಗಳ ಸಂಖ್ಯೆ ಇನ್ನೂ ಹೆಚ್ಚಳವಾಗುವ ನಿರೀಕ್ಷೆ ಇದೆ’ ಎಂದು ಡಿಸಿಎಫ್‌ ದೀಪಿಕಾ ಬಾಜಪೇಯಿ ತಿಳಿಸಿದ್ದಾರೆ.

ಮಾನವ ಹಸ್ತಕ್ಷೇಪ ಕಡಿಮೆ ಆಗಿದ್ದರಿಂದ ಕಾಡು ಬೆಳೆದಿದೆ. ಕಾಡು ವೃದ್ಧಿಸುತ್ತಿರುವುದರಿಂದ ಪ್ರಾಣಿಗಳ ಸಂಖ್ಯೆ ಹೆಚ್ಚುತ್ತಿದೆ. ಅರಣ್ಯ ಇಲಾಖೆಯವರು ಜನರ ಸಹಕಾರ ಪಡೆದು ಕಪ್ಪತ್ತಗುಡ್ಡಕ್ಕೆ ಇನ್ನೂ ಹೆಚ್ಚಿನ ಕಾವಲು ಹಾಕಬೇಕು. ಕಾಳಜಿ ಮಾಡಬೇಕು.
-ಶಿವಕುಮಾರ ಸ್ವಾಮೀಜಿ, ನಂದಿವೇರಿ ಮಠ

ವೈಜ್ಞಾನಿಕ ಸಮೀಕ್ಷೆಯಿಂದ ಕಪ್ಪತ್ತಗುಡ್ಡ ಪ್ರದೇಶದಲ್ಲಿ ಕತ್ತೆಕಿರುಬ, ಚಿರತೆ, ನರಿ, ತೋಳ, ಕಾಡುಬೆಕ್ಕು, ಚುಕ್ಕೆ ಜಿಂಕೆ, ಕೃಷ್ಣಮೃಗ, ಮೂರು ಜಾತಿಯ ಹುಲ್ಲೆಗಳು ಸೇರಿದಂತೆ ಹಲವು ಜಾತಿಯ ಪ್ರಾಣಿಗಳು ಹಾಗೂ ಪಕ್ಷಿಗಳು, ಸರಿಸೃಪಗಳು ಕಂಡುಬಂದಿವೆ
-ದೀಪಿಕಾ ಬಾಜಪೇಯಿ, ಡಿಸಿಎಫ್‌, ಗದಗ

 
ಜಾತಿನಿಂದನೆ ಪ್ರಕರಣ: 98 ದೋಷಿಗಳಿಗೆ ಜೀವಾವಧಿ ಶಿಕ್ಷೆ ಮಹತ್ವದ ತೀರ್ಪು - Appointment of Kodatageri as KDP Quarterly Committee Member - ಶಾಸಕ ಜನಾರ್ಧನ ರೆಡ್ಡಿ ವಿರುದ್ಧ ಕ್ರಮಕ್ಕೆ-  ಕುಬೇರ ಮಜ್ಜಿಗಿ ಅಗ್ರಹ - ವಿಚ್ಚೇದನ ಪ್ರಕರಣಗಳಲ್ಲಿ ಮಠಾಧೀಶರ ಮಧ್ಯಸ್ಥೀಕೆ ಎಷ್ಟು ಸರಿ?'. - ಸೆಕೆಂಡ್​ ಹ್ಯಾಂಡ್​​ ಮೊಬೈಲ್ ಬಗ್ಗೆ ಎಚ್ಚರ!: ಬೆಂಗಳೂರಿನಲ್ಲಿ ​6 ತಿಂಗಳಲ್ಲಿ 2,350 ಅಕೌಂಟ್​ಗೆ ಕನ್ನ..! - ಸೆ, 19 ರಂದು ಭಾಗ್ಯನಗರದಲ್ಲಿ ಕೌದಿ ನಾಟಕ ಪ್ರದರ್ಶನ - ಶಾಲೆಗಾಗಿ ಪಡೆದ ಸಿಎ ಸೈಟ್‌ನಲ್ಲಿ ಧಮ್ ಬಿರಿಯಾನಿ ಹೋಟೆಲ್‌! ಛಲವಾದಿ ನಾರಾಯಣ ಸ್ವಾಮಿ ವಿರುದ್ಧ ಆರೋಪ - ವಿಪ್ ಉಲ್ಲಂಘನೆ ಕಾನೂನು ಕ್ರಮ ಒತ್ತಾಯಿಸಿ ಬಿಜೆಪಿ ದೂರು - ಸ್ನೇಹಮಯಿ ಕೃಷ್ಣ ರೌಡಿಶೀಟರ್: ಸಿಎಂ ಕೇಸ್ ನಲ್ಲಿ ಅವರ ಕಡೆಯವರು 100 ಕೋಟಿ ಡೀಲ್ ಗೆ ಬಂದಿದ್ರು -ಎಂ.ಲಕ್ಷ್ಮಣ್ - ಜಾತಿ ನಿಂದನೆ ಉದ್ದೇಶವಿದ್ದರೆ ಮಾತ್ರ ಅಟ್ರಾಸಿಟಿ ಕಾಯ್ದೆ ಅನ್ವಯ- ಸುಪ್ರೀಂಕೋರ್ಟ್
error: Content is protected !!