ಕೆ.ಎಸ್.ಕೊಡತಗೇರಿ ಅವರಿಗೆ ರಾಜ್ಯಮಟ್ಟದ ಡಿ.ವಿ. ಗುಂಡಪ್ಪ ಪ್ರಶಸ್ತಿ ಪ್ರಧಾನ

 

ಕೆ.ಎಸ್.ಕೊಡತಗೇರಿ ಅವರಿಗೆ ರಾಜ್ಯಮಟ್ಟದ ಡಿ.ವಿ. ಗುಂಡಪ್ಪ ಪ್ರಶಸ್ತಿ ಪ್ರಧಾನ

ಕೊಡತಗೇರಿ ಎಕ್ಸ್‌ಪ್ರೆಸ್‌ ಸುದ್ದಿ

ಕೊಪ್ಪಳ : ಕರವೇ ಯುವಸೈನ್ಯ ರಾಜ್ಯಾಧ್ಯಕ್ಷ ಹಾಗೂ ನ್ಯಾಯವಾದಿಗಳು ಕೆ.ಎಸ್.ಕೊಡತಗೇರಿ ಅವರಿಗೆ ಧ್ರುವನ್ಯೂಸ್ ವಾರಪತ್ರಿಕೆ ವತಿಯಿಂದ ಕೊಪ್ಪಳದ ತಾಲೂಕ ಪಂಚಾಯಿತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ರಾಜ್ಯಮಟ್ಟದ ಡಿ.ವಿ. ಗುಂಡಪ್ಪ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪತ್ರಿಕಾ ರಂಗದ ಸೇವೆ, ಹಾಗೂ ಸಮಾಜ ಸೇವೆಯನ್ನು ಗುರುತಿಸಿ ಕೆ.ಎಸ್.ಕೊಡತಗೇರಿ ಅವರಿಗೆ ರಾಜ್ಯಮಟ್ಟದ ಡಿ.ವಿ. ಗುಂಡಪ್ಪ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಈ ಸಂದರ್ಭದಲ್ಲಿ ಹೆಬ್ಬಾಳ ಸಂಸ್ಥಾನ ಮಠದ ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು, ಸುವರ್ಣ ಕರ್ನಾಟಕ ರಕ್ಷಣಾ ಸೈನ್ಯದ ಅಧ್ಯಕ್ಷರಾದ ಟಿಕ್ಯಾ ನಾಯಕ, ನವ ನಿರ್ಮಾಣ ವೇದಿಕೆಯ ರಾಜ್ಯ ಸಂಚಾಲಕರಾದ ವಿಜಯಕುಮಾರ ಕವಲೂರು, ಪತ್ರಕರ್ತರಾದ ಎಚ್. ಎಸ್. ಹರೀಶ, ಎಂ. ಸಾಧಿಕಲಿ, ಜಿ.ಎಸ್. ಗೋನಾಳ ಕೆ.ಎಸ್. ಕೊಡತಗೇರಿ ಕರವೇ ರಾಜ್ಯ ಅದ್ಯಕ್ಷರು.ಸಾವಿತ್ರಿ ಮುಜುಮದಾರ, ಹಿರಿಯರಾದ ಯಮನೂರಪ್ಪ ಸಿಂಗನಾಳ, ಸಿದ್ದು ಹಿರೇಮಠ, ಬಿ.ಎಂ.ಹಿರೇಮಠ, ಎಂ.ಎನ್. ಕುಂದಗೋಳ, ಎಂ. ಆರ್ .ಹಿರೇಮನಿ, ಶರಣಯ್ಯಸ್ವಾಮಿ ಮರಳಿಮಠ, ಪಂಪಯ್ಯಸ್ವಾಮಿ ಹಿರೇಮಠ, ಹಿರಿಯರಾದ ವೀರೇಶ ಹಿರೇಮಠ, ಗೋವಿಂದರಾಜ ಬೂದಗುಂಪಾ ಜಿ.ಎಂ. ಶಿವಪುರ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕೊಪ್ಪಳ :

You may have missed

ಸಿದ್ದರಾಮಯ್ಯ: ಅರಸು ದಾಖಲೆ ಸರಿಗಟ್ಟಿದ ‘ಅಹಿಂದ’ ಚಾಣಕ್ಯ – ಜನಪರ ಆಡಳಿತದ ಹೊಸ ಪರ್ವ ​ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ದೀರ್ಘಕಾಲ ಮುಖ್ಯಮಂತ್ರಿಯಾಗಿ ರಾಜ್ಯವಾಳಿದ ಕೀರ್ತಿ ಈವರೆಗೆ ದಿವಂಗತ ಡಿ. ದೇವರಾಜ ಅರಸು (7 ವರ್ಷ 239 ದಿನಗಳು) ಅವರಿಗೆ ಸಲ್ಲುತ್ತಿತ್ತು. ಆದರೆ, ಜನವರಿ 7, 2026ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಐತಿಹಾಸಿಕ ದಾಖಲೆಯನ್ನು ಮುರಿದು, ಕರ್ನಾಟಕದ ಇತಿಹಾಸದಲ್ಲಿ ಅತಿ ಸುದೀರ್ಘ ಕಾಲ ಆಡಳಿತ ನಡೆಸಿದ ನಾಯಕನಾಗಿ ಹೊರಹೊಮ್ಮಿದ್ದಾರೆ. ಇದು ಕೇವಲ ಅಂಕಿ-ಅಂಶಗಳ ಸಾಧನೆಯಲ್ಲ, ಬದಲಿಗೆ ಅವರ ಅಚಲ ಸಿದ್ಧಾಂತ ಮತ್ತು ಜನಪ್ರಿಯತೆಯ ಪ್ರತೀಕವಾಗಿದೆ. ​ಅರಸು ಮತ್ತು ಸಿದ್ದರಾಮಯ್ಯ: ಸಮಾಜಮುಖಿ ಹೋಲಿಕೆ ​ದೇವರಾಜ ಅರಸು ಅವರು ಹೇಗೆ ಭೂ ಸುಧಾರಣೆ ಮತ್ತು ಹಿಂದುಳಿದ ವರ್ಗಗಳ ಸಬಲೀಕರಣದ ಮೂಲಕ ‘ಕರ್ನಾಟಕದ ಕ್ರಾಂತಿಕಾರಿ ನಾಯಕ’ ಎನಿಸಿಕೊಂಡರೋ, ಸಿದ್ದರಾಮಯ್ಯನವರು ‘ಅಹಿಂದ’ (ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ) ವರ್ಗಗಳ ಧ್ವನಿಯಾಗಿ ಅದೇ ಹಾದಿಯಲ್ಲಿ ಮುನ್ನಡೆದಿದ್ದಾರೆ. ಮೈಸೂರು ಮಣ್ಣಿನ ಈ ಇಬ್ಬರು ನಾಯಕರು ಶೋಷಿತ ಸಮುದಾಯಗಳಿಗೆ ರಾಜಕೀಯ ಅಸ್ತಿತ್ವ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ​ಉತ್ತಮ ಆಡಳಿತದ ಪ್ರಮುಖ ಮೈಲಿಗಲ್ಲುಗಳು ​ಸಿದ್ದರಾಮಯ್ಯನವರ ಆಡಳಿತವನ್ನು ಶ್ಲಾಘಿಸಲು ಮುಖ್ಯ ಕಾರಣ ಅವರ ‘ಜನಪರ ಯೋಜನೆಗಳು’. ಅವರ ಆಡಳಿತ ವೈಖರಿಯಲ್ಲಿ ಆರ್ಥಿಕ ಶಿಸ್ತು ಮತ್ತು ಸಾಮಾಜಿಕ ಭದ್ರತೆಯ ಸುಂದರ ಸಮನ್ವಯವಿದೆ: ​ಭಾಗ್ಯಗಳ ಸರಣಿ: ಮೊದಲ ಅವಧಿಯಲ್ಲಿ (2013-18) ಜಾರಿಗೆ ತಂದ ‘ಅನ್ನಭಾಗ್ಯ’, ‘ಕ್ಷೀರಭಾಗ್ಯ’, ‘ಇಂದಿರಾ ಕ್ಯಾಂಟೀನ್’ನಂತಹ ಯೋಜನೆಗಳು ಬಡವರ ಹಸಿವು ನೀಗಿಸುವಲ್ಲಿ ಮೈಲಿಗಲ್ಲಾದವು. ​ಪಂಚ ಗ್ಯಾರಂಟಿಗಳು: ಎರಡನೇ ಅವಧಿಯಲ್ಲಿ ಜಾರಿಗೆ ತಂದ ಐದು ಗ್ಯಾರಂಟಿಗಳು (ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ) ಇಂದು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಆಸರೆಯಾಗಿವೆ. ​ಆರ್ಥಿಕ ತಜ್ಞತೆ: ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ಅಂದರೆ 16 ಬಾರಿ ಬಜೆಟ್ ಮಂಡಿಸಿದ ಹೆಗ್ಗಳಿಕೆ ಇವರದು. ಆರ್ಥಿಕ ಕೊರತೆಯನ್ನು ಹತೋಟಿಯಲ್ಲಿಟ್ಟುಕೊಂಡು ಅಭಿವೃದ್ಧಿ ಕೆಲಸಗಳಿಗೆ ಹಣ ಮೀಸಲಿಡುವ ಇವರ ಚಾಣಕ್ಯತನ ಮೆಚ್ಚುವಂತದ್ದು. ​ನುಡಿದಂತೆ ನಡೆದ ಸರ್ಕಾರ: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಅವರು ತೋರಿದ ಬದ್ಧತೆ ಮತದಾರರಲ್ಲಿ ಅವರ ಮೇಲಿನ ವಿಶ್ವಾಸವನ್ನು ಹೆಚ್ಚಿಸಿದೆ. ​ತಳಮಟ್ಟದ ನಾಯಕತ್ವ ​ಸಿದ್ದರಾಮಯ್ಯನವರು ಯಾವುದೇ ‘ಹೈಕಮಾಂಡ್’ ನೆರಳಿನಲ್ಲದೆ, ಹಳ್ಳಿ ಹಳ್ಳಿಯ ಜನರೊಂದಿಗೆ ಬೆರೆತು ಬೆಳೆದ ನಾಯಕ. ಅವರ ನೇರ ನುಡಿ, ತರ್ಕಬದ್ಧ ಮಾತುಗಳು ಮತ್ತು ಸಂವಿಧಾನದ ಮೇಲಿನ ಗೌರವ ಅವರನ್ನು ಶ್ರೇಷ್ಠ ಸಂಸದೀಯ ಪಟುವನ್ನಾಗಿ ಮಾಡಿದೆ. ​”ಅಧಿಕಾರ ಎನ್ನುವುದು ಕೇವಲ ಕುರ್ಚಿಯಲ್ಲ, ಅದು ಬಡವರ ಕಣ್ಣೀರು ಒರೆಸುವ ಅವಕಾಶ” ಎಂಬ ಸಿದ್ಧಾಂತದೊಂದಿಗೆ ಅವರು ಮುನ್ನಡೆಯುತ್ತಿರುವುದು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ. ​ಸಮಾರೋಪ ​ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಸಿದ್ದರಾಮಯ್ಯನವರು, ಕರ್ನಾಟಕದ ಸಾಮಾಜಿಕ ನಕ್ಷೆಯಲ್ಲಿ ತಮ್ಮದೇ ಆದ ಅಳಿಸಲಾಗದ ಛಾಪನ್ನು ಒತ್ತಿದ್ದಾರೆ. ಅವರ ಈ ಪಯಣ ಕೇವಲ ಸುದೀರ್ಘ ಅವಧಿಯದ್ದಷ್ಟೇ ಅಲ್ಲದೆ, ‘ಸಮ ಸಮಾಜ’ದ ನಿರ್ಮಾಣದ ಹಾದಿಯಲ್ಲಿ ಒಂದು ಭರವಸೆಯ ನಡಿಗೆಯಾಗಿದೆ.

error: Content is protected !!