ಅಶ್ಲೀಲ ಪದಗಳಿಂದ ನಿಂದನೆ: ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು
ಕೊಡತಗೇರಿ ಎಕ್ಸ್ ಪ್ರೆಸ್ ಸುದ್ದಿ
ಸಾಮಾಜಿಕ ಮಾಧ್ಯಮಗಳಲ್ಲಿ ಕಾಂಗ್ರೆಸ್ ನಾಯಕರನ್ನು ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದಲ್ಲಿ ಇದ್ರೀಸ್ ಪಾಷಾ ಕೊಲೆ ಪ್ರಕರಣದ ಆರೋಪಿ ಹಾಗೂ ಹಿಂದುತ್ವ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿಯ ವಿರುದ್ಧ ತುಮಕೂರಿನ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತೇಜಸ್ ಗೌಡ ಎಂಬವರು ಹೆಣ್ಣೂರು ಪೊಲೀಸ್ ಠಾಣೆಗೆ ಈ ದೂರು ನೀಡಿದ್ದಾರೆ. ದೂರಿನಲ್ಲಿ, ”ಪುನೀತ್ ಕೆರೆಹಳ್ಳಿ ಎಂಬ ವ್ಯಕ್ತಿಯು ವಕೀಲರು ಮತ್ತು ಕೆಪಿಸಿಸಿ ವಕ್ತಾರರಾಗಿರುವ ಸೂರ್ಯ ಮುಕುಂದರಾಜ್ ಅವರನ್ನು ಮತ್ತು ಅವರ ಸಹೋದ್ಯೋಗಿಗಳ ಬಗ್ಗೆ ಅವಹೇಳನಕಾರಿಯಾಗಿ, ಅವಾಚ್ಯ ಪದಗಳನ್ನು ಬಳಸಿ ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದಾನೆ. ಪುನೀತ್ ಕೆರೆಹಳ್ಳಿಯ ಬೆಂಬಲಿಗರು ನಕಲಿ ಖಾತೆಗಳ ಮೂಲಕ ಬಂದು ಈ ಪೋಸ್‌ಗೆ ಕೆಟ್ಟದ್ದಾಗಿ ಕಮೆಂಟ್ ಮಾಡಿರುತ್ತಾರೆ. ಪುನೀತ್ ಕೆರೆಹಳ್ಳಿಯು ವಕೀಲಿ ವೃತ್ತಿಗೆ ಅವಮಾನ ಮಾಡಿದ್ದಾರೆ. ಆದ್ದರಿಂದ ಆತನ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು” ಎಂದು ಹೇಳಿದ್ದಾರೆ.
”ಪುನೀತ್ ಕೆರೆಹಳ್ಳಿಯ ಫೇಸ್ ಬುಕ್ ಖಾತೆಯನ್ನು ನಿರ್ಭಂಧಿಸಿ ನ್ಯಾಯ ಒದಗಿಸಿಕೊಡಬೇಕು” ಎಂದು ದೂರಿನಲ್ಲಿ ತಿಳಿಸಲಾಗಿದೆ.
ತೇಜಸ್ ಗೌಡ ಎಂಬುವವರು ನೀಡಿದ ದೂರಿನ ಮೇರೆಗೆ ಐಪಿಸಿ ಸೆಕ್ಷನ್ 504ರ ಅಡಿಯಲ್ಲಿ ಪುನೀತ್ ಕೆರೆಹಳ್ಳಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
More Stories
ಇಂದು ಕುವೆಂಪು ಸಿರಿಕನ್ನಡ ದತ್ತಿ ಪ್ರಶಸ್ತಿಗೆ ಕನ್ನಡಪರ ಹೋರಾಟಗಾರ ಪ್ರವೀಣ್ ಕುಮಾರ್ ಶೆಟ್ಟಿ
ಸೆಕೆಂಡ್ ಹ್ಯಾಂಡ್ ಮೊಬೈಲ್ ಬಗ್ಗೆ ಎಚ್ಚರ!: ಬೆಂಗಳೂರಿನಲ್ಲಿ 6 ತಿಂಗಳಲ್ಲಿ 2,350 ಅಕೌಂಟ್ಗೆ ಕನ್ನ..!
ಶಾಲೆಗಾಗಿ ಪಡೆದ ಸಿಎ ಸೈಟ್‌ನಲ್ಲಿ ಧಮ್ ಬಿರಿಯಾನಿ ಹೋಟೆಲ್! ಛಲವಾದಿ ನಾರಾಯಣ ಸ್ವಾಮಿ ವಿರುದ್ಧ ಆರೋಪ