ಬಿಸಿ ಊಟ, ಪೌಷ್ಟಿಕ ಆಹಾರ ನೀಡದಕ್ಕೆ ಮಕ್ಕಳು ಶಾಲೆಗೆ ಬೀಗ ಜಡಿದು ಪ್ರತಿಭಟನೆ.

ಬಿಸಿ ಊಟ, ಪೌಷ್ಟಿಕ ಆಹಾರ ನೀಡದಕ್ಕೆ ಮಕ್ಕಳು ಶಾಲೆಗೆ ಬೀಗ ಜಡಿದು ಪ್ರತಿಭಟನೆ.

ಕೊಡತಗೇರಿ Express ಸುದ್ದಿ

ಗಜೇಂದ್ರಗಡ:

ಮಕ್ಕಳು ಅಪೌಷ್ಟಿಕತೆ ಯಿಂದ ಬಳಲಬಾರದು ಎಂದು ಸರಕಾರ ಗುಣಮಟ್ಟದ ಆಹಾರವನ್ನು ಶಾಲೆಯ ಮಕ್ಕಳಿಗೆ ಪೂರೈಸುತ್ತದೆ. ಆದರೆ ಶಾಲೆಯ ಕೇಲವು ಶಿಕ್ಷಕರ ತಾತ್ಸರದಿಂದ ಮಕ್ಕಳಿಗೆ ಗುಣಮಟ್ಟದ ಆಹಾರ ಸಿಗದೆ ಅಪೌಷ್ಟಿಕತೆಯಿಂದ ಇನ್ನೂ ಬಳಲುತ್ತಿದ್ದಾರೆ ಅಂತಹದೇ ಘಟನೆ ಸಮೀಪದ ಲಕ್ಕಲಕಟ್ಟಿ ಗ್ರಾಮದಲ್ಲಿ ನೆಡದಿದೆ.

ಹೌದು ಬಿಸಿ ಊಟ, ಪೌಷ್ಟಿಕ ಆಹಾರ ನೀಡದಕ್ಕೆ ಮಕ್ಕಳು ಶಾಲೆಗೆ ಬೀಗ ಜಡಿದು ಪ್ರತಿಭಟನೆ ಮಾಡಿ ಅಕ್ರೋಶ ವ್ಯಕ್ತ ಪಡಿಸಿದ್ದಾರೆ.

ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೀಗ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯ ಶಿಕ್ಷಕಿ ಎ.ಎಸ್ ರಾಠೋಡ ವಿರುದ್ಧ ಮಕ್ಕಳು ಆಕ್ರೋಶ ವ್ಯಕ್ತಪಡಿಸಿದರು.

ಕಳೆದ 15 ದಿನಗಳಿಂದ ಮಕ್ಕಳಿ‌ ಮೊಟ್ಟೆ, ಶೇಂಗಾ ಚಕ್ಕೆ, ಬಾಳೆ ಹಣ್ಣು ಪೌಷ್ಟಿಕ ಆಹಾರ ನೀಡ್ತಿಲ್ಲ. ಇನ್ನು ಮಧ್ಯಾಹ್ನ ಬಿಸಿ ಊಟ ಎಲ್ಲಾ ಮಕ್ಕಳಿಗೂ ಸಮರ್ಪಕವಾಗಿ ಕೊಡ್ತಿಲ್ಲ ಎಂಬ ಆರೋಪ ಮಕ್ಕಳದ್ದಾಗಿದೆ. ಇಲ್ಲಿ 1 ರಿಂದ 7ನೇ ತರಗತಿ ವರೆಗೆ 441 ಮಕ್ಕಳು ವ್ಯಾಸಂಗ ಮಾಡ್ತಿದ್ದಾರೆ. ಅವರಿಗೆ ಮಧ್ಯಾಹ್ನ 2:30 ರಿಂದ 3 ಗಂಟೆಗೆ ತಡವಾಗಿ ಬಿಸಿ ಊಟ ನೀಡುತ್ತಾರೆ. ಜೊತೆಗೆ ಕೇವಲ ಒಂದೆರಡು ಕೆಜಿ ತರಕಾರಿಯಲ್ಲಿ 441 ಮಕ್ಕಳಿಗೆ ಬಿಸಿ ಊಟ ಹಂಚಿಕೆ ಮಾಡ್ತಾರೆ. ಧ್ಯಾನಗಳಿಲ್ಲದ ತಿಳಿ ಸಾಂಬಾರು, ಹುಳು ಹತ್ತಿದ, ಬಲಿತ, ಕೊಳೆತ ತರಕಾರಿ ತಂದು ಊಟ ತಯಾರಿಸುತ್ತಾರೆ. ಆದ್ರೆ ಲೆಕ್ಕ ಪುಸ್ತಕದಲ್ಲಿ ಎಲ್ಲವನ್ನೂ ದಾಖಲು ಮಾಡಿರುತ್ತಾರೆ ಎಂಬ ಆರೋಪ ಮಕ್ಕಳದ್ದಾಗಿದೆ.

ಮುಖ್ಯ ಶಿಕ್ಷಕಿ ಎ.ಎಸ್ ರಾಠೋಡ ಬೇಡವೇ ಬೇಡ, ಮಕ್ಕಳ ಹಿತ ಕಾಪಾಡದ ಶಿಕ್ಷಕಿ ನಮ್ಮೂರ ಶಾಲೆಗೆ ಬೇಡ ಅಂತ ಪಟ್ಟು ಹಿಡಿದಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ, ಶಿಕ್ಷಣಾಧಿಕಾರಿಗಳು ಬರುವಂತೆ ಮಕ್ಕಳು ಪಟ್ಟು ಹಿಡದಿದ್ದಾರೆ. ಶಿಕ್ಷಕಿ ವರ್ಗಾವಣೆ ಆಗುವ ವರೆಗೆ ಶಾಲೆಗೆ ಬರೋದಿಲ್ಲ ಅಂತ ಮಕ್ಕಳು ಪಟ್ಟು ಹಿಡದಿದ್ದಾರೆ.

ಬಾಕ್ಸ್.೧)
ನಮ್ಮ ಶಾಲೆ ಹೆಡ್ ಮಾಸ್ಟರ್ ನಮ್ಮಗ ಸರಿಯಾಗಿ ಊಟ,ತತ್ತಿ, ಶೇಂಗಾ ಚಿಕ್ಕಿ, ಇವು ಯಾವೂ ಕೊಡಗಿಲ್ಲ ರೀ, ಪಾಠ ಮಾಡಕ್ಕಾ ಚಾಪೀಸ್ ಕೇಳಿದ್ರ ರೊಕ್ಕಯಾರು ನಿಮ್ಮಪ್ಪ ಕೊಡತ್ತಾನ ಏನು ಅಂತಾ ಬೈತಾರೀ. ಪೌಯಖಾನೆ, ಕ್ಲಾಸ್ , ಗ್ರೌಂಡ್ ಎಲ್ಲಾ ನಮ್ಮ ಕಡೆಯಿಂದನೆ ಕ್ಲೀನ ಮಾಡಸ್ತಾರೀ ಅದಕ್ಕೆ ನಮ್ಮಗ ಈ ಹೆಡ್ ಮಾಸ್ತರ ಬ್ಯಾಡರೀ.
……..
ನೀಲಮ್ಮ- 7ನೇ ತರಗತಿ ವಿದ್ಯಾರ್ಥಿನಿ

  1. ಬಾಕ್ಸ.೨)
    ಸರ್ಕಾರವೂ ಸೂಕ್ತವಾಗಿ ಮಕ್ಕಳಿಗೆ ಸೇರಬೇಕಾದ ಪೌಷ್ಟಿಕಾಂಶಯುಳ್ಳ ಆಹಾರಗಳನ್ನು ನಿಗದಿತ ಸಮಯಕ್ಕೆ ನೀಡಬೇಕಾಗಿದ್ದು ಎಲ್ಲರ ಕರ್ತವ್ಯವಾಗಿದೆ.ಲಕ್ಕಲಕಟ್ಟಿ ಗ್ರಾಮದಲ್ಲಿನ ಘಟನೆ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸ್ಥಳಕ್ಕೆ ಬೇಟಿ ನೀಡಿ ಮಾಹಿತಿ ನೀಡುವಂತೆ ಸೂಚನೆ ನೀಡಿದ್ದೇನೆ. ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವೆ.
    …………………
    ಎಮ್.ಎ.ರೆಡ್ಡೇರ
    ಡಿಡಿಪಿಐ ಗದಗ.

You may have missed

ಸಿದ್ದರಾಮಯ್ಯ: ಅರಸು ದಾಖಲೆ ಸರಿಗಟ್ಟಿದ ‘ಅಹಿಂದ’ ಚಾಣಕ್ಯ – ಜನಪರ ಆಡಳಿತದ ಹೊಸ ಪರ್ವ ​ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ದೀರ್ಘಕಾಲ ಮುಖ್ಯಮಂತ್ರಿಯಾಗಿ ರಾಜ್ಯವಾಳಿದ ಕೀರ್ತಿ ಈವರೆಗೆ ದಿವಂಗತ ಡಿ. ದೇವರಾಜ ಅರಸು (7 ವರ್ಷ 239 ದಿನಗಳು) ಅವರಿಗೆ ಸಲ್ಲುತ್ತಿತ್ತು. ಆದರೆ, ಜನವರಿ 7, 2026ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಐತಿಹಾಸಿಕ ದಾಖಲೆಯನ್ನು ಮುರಿದು, ಕರ್ನಾಟಕದ ಇತಿಹಾಸದಲ್ಲಿ ಅತಿ ಸುದೀರ್ಘ ಕಾಲ ಆಡಳಿತ ನಡೆಸಿದ ನಾಯಕನಾಗಿ ಹೊರಹೊಮ್ಮಿದ್ದಾರೆ. ಇದು ಕೇವಲ ಅಂಕಿ-ಅಂಶಗಳ ಸಾಧನೆಯಲ್ಲ, ಬದಲಿಗೆ ಅವರ ಅಚಲ ಸಿದ್ಧಾಂತ ಮತ್ತು ಜನಪ್ರಿಯತೆಯ ಪ್ರತೀಕವಾಗಿದೆ. ​ಅರಸು ಮತ್ತು ಸಿದ್ದರಾಮಯ್ಯ: ಸಮಾಜಮುಖಿ ಹೋಲಿಕೆ ​ದೇವರಾಜ ಅರಸು ಅವರು ಹೇಗೆ ಭೂ ಸುಧಾರಣೆ ಮತ್ತು ಹಿಂದುಳಿದ ವರ್ಗಗಳ ಸಬಲೀಕರಣದ ಮೂಲಕ ‘ಕರ್ನಾಟಕದ ಕ್ರಾಂತಿಕಾರಿ ನಾಯಕ’ ಎನಿಸಿಕೊಂಡರೋ, ಸಿದ್ದರಾಮಯ್ಯನವರು ‘ಅಹಿಂದ’ (ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ) ವರ್ಗಗಳ ಧ್ವನಿಯಾಗಿ ಅದೇ ಹಾದಿಯಲ್ಲಿ ಮುನ್ನಡೆದಿದ್ದಾರೆ. ಮೈಸೂರು ಮಣ್ಣಿನ ಈ ಇಬ್ಬರು ನಾಯಕರು ಶೋಷಿತ ಸಮುದಾಯಗಳಿಗೆ ರಾಜಕೀಯ ಅಸ್ತಿತ್ವ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ​ಉತ್ತಮ ಆಡಳಿತದ ಪ್ರಮುಖ ಮೈಲಿಗಲ್ಲುಗಳು ​ಸಿದ್ದರಾಮಯ್ಯನವರ ಆಡಳಿತವನ್ನು ಶ್ಲಾಘಿಸಲು ಮುಖ್ಯ ಕಾರಣ ಅವರ ‘ಜನಪರ ಯೋಜನೆಗಳು’. ಅವರ ಆಡಳಿತ ವೈಖರಿಯಲ್ಲಿ ಆರ್ಥಿಕ ಶಿಸ್ತು ಮತ್ತು ಸಾಮಾಜಿಕ ಭದ್ರತೆಯ ಸುಂದರ ಸಮನ್ವಯವಿದೆ: ​ಭಾಗ್ಯಗಳ ಸರಣಿ: ಮೊದಲ ಅವಧಿಯಲ್ಲಿ (2013-18) ಜಾರಿಗೆ ತಂದ ‘ಅನ್ನಭಾಗ್ಯ’, ‘ಕ್ಷೀರಭಾಗ್ಯ’, ‘ಇಂದಿರಾ ಕ್ಯಾಂಟೀನ್’ನಂತಹ ಯೋಜನೆಗಳು ಬಡವರ ಹಸಿವು ನೀಗಿಸುವಲ್ಲಿ ಮೈಲಿಗಲ್ಲಾದವು. ​ಪಂಚ ಗ್ಯಾರಂಟಿಗಳು: ಎರಡನೇ ಅವಧಿಯಲ್ಲಿ ಜಾರಿಗೆ ತಂದ ಐದು ಗ್ಯಾರಂಟಿಗಳು (ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ) ಇಂದು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಆಸರೆಯಾಗಿವೆ. ​ಆರ್ಥಿಕ ತಜ್ಞತೆ: ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ಅಂದರೆ 16 ಬಾರಿ ಬಜೆಟ್ ಮಂಡಿಸಿದ ಹೆಗ್ಗಳಿಕೆ ಇವರದು. ಆರ್ಥಿಕ ಕೊರತೆಯನ್ನು ಹತೋಟಿಯಲ್ಲಿಟ್ಟುಕೊಂಡು ಅಭಿವೃದ್ಧಿ ಕೆಲಸಗಳಿಗೆ ಹಣ ಮೀಸಲಿಡುವ ಇವರ ಚಾಣಕ್ಯತನ ಮೆಚ್ಚುವಂತದ್ದು. ​ನುಡಿದಂತೆ ನಡೆದ ಸರ್ಕಾರ: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಅವರು ತೋರಿದ ಬದ್ಧತೆ ಮತದಾರರಲ್ಲಿ ಅವರ ಮೇಲಿನ ವಿಶ್ವಾಸವನ್ನು ಹೆಚ್ಚಿಸಿದೆ. ​ತಳಮಟ್ಟದ ನಾಯಕತ್ವ ​ಸಿದ್ದರಾಮಯ್ಯನವರು ಯಾವುದೇ ‘ಹೈಕಮಾಂಡ್’ ನೆರಳಿನಲ್ಲದೆ, ಹಳ್ಳಿ ಹಳ್ಳಿಯ ಜನರೊಂದಿಗೆ ಬೆರೆತು ಬೆಳೆದ ನಾಯಕ. ಅವರ ನೇರ ನುಡಿ, ತರ್ಕಬದ್ಧ ಮಾತುಗಳು ಮತ್ತು ಸಂವಿಧಾನದ ಮೇಲಿನ ಗೌರವ ಅವರನ್ನು ಶ್ರೇಷ್ಠ ಸಂಸದೀಯ ಪಟುವನ್ನಾಗಿ ಮಾಡಿದೆ. ​”ಅಧಿಕಾರ ಎನ್ನುವುದು ಕೇವಲ ಕುರ್ಚಿಯಲ್ಲ, ಅದು ಬಡವರ ಕಣ್ಣೀರು ಒರೆಸುವ ಅವಕಾಶ” ಎಂಬ ಸಿದ್ಧಾಂತದೊಂದಿಗೆ ಅವರು ಮುನ್ನಡೆಯುತ್ತಿರುವುದು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ. ​ಸಮಾರೋಪ ​ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಸಿದ್ದರಾಮಯ್ಯನವರು, ಕರ್ನಾಟಕದ ಸಾಮಾಜಿಕ ನಕ್ಷೆಯಲ್ಲಿ ತಮ್ಮದೇ ಆದ ಅಳಿಸಲಾಗದ ಛಾಪನ್ನು ಒತ್ತಿದ್ದಾರೆ. ಅವರ ಈ ಪಯಣ ಕೇವಲ ಸುದೀರ್ಘ ಅವಧಿಯದ್ದಷ್ಟೇ ಅಲ್ಲದೆ, ‘ಸಮ ಸಮಾಜ’ದ ನಿರ್ಮಾಣದ ಹಾದಿಯಲ್ಲಿ ಒಂದು ಭರವಸೆಯ ನಡಿಗೆಯಾಗಿದೆ.

error: Content is protected !!