ಜಿ.ಪಂ- ತಾ.ಪಂ ಚುನಾವಣೆ ಸರಕಾರಕ್ಕೆ ಅಂತಿಮ ಗಡವು ನೀಡಿದ ಹೈ ಕೋರ್ಟ್
ಕೊಡತಗೇರಿ ಎಕ್ಸಪ್ರೆಸ್ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಗಳ ಚುನಾವಣೆಗಾಗಿ ಕ್ಷೇತ್ರಗಳ ಪುನರ್ ವಿಂಗಡಣೆ(Redistribution of constituencies) ಹಾಗೂ ಮೀಸಲಾತಿ ನಿಗದಿ(Make a reservation) ಪ್ರಕ್ರಿಯೆಗೆ ಹೈಕೋರ್ಟ್(Highcourt) ನಾಲ್ಕು ವಾರ ಅಂತಿಮ ಕಾಲಾವಕಾಶ ನೀಡಿದೆ ಎಂದು ಗುರುವಾರ ಕಾಂಗ್ರೆಸ್ ಸರ್ಕಾರಕ್ಕೆ ಸೂಚಿಸಿದೆ.ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ (Electioncommisssion) ವಾಪಸ್ ಪಡೆದು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ‘ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯಿದೆ’ಗೆ ತಿದ್ದುಪಡಿ ತಂದಿರುವುದನ್ನು ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳ ಮತ್ತು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿ ಮುಂದಿನ ವಿಚಾರಣೆಯನ್ನು ಡಿಸೆಂಬರ್ 19ಕ್ಕೆ ಮುಂದೂಡಿತು. ಮುಂದಿನ ಒಂದು ತಿಂಗಳಲ್ಲಿ ಪೂರ್ಣಗೊಳಿಸಿ ಅಧಿಸೂಚನೆ ಹೊರಡಿಸಲು ಕೊನೆಯ ಬಾರಿಗೆ ರಾಜ್ಯ ಸರ್ಕಾರಕ್ಕೆ ಕಾಲಾವಕಾಶ ನೀಡುತ್ತಿರುವುದಾಗಿ ಪೀಠ ತಿಳಿಸಿತು.
More Stories
ಇಂದು ಕುವೆಂಪು ಸಿರಿಕನ್ನಡ ದತ್ತಿ ಪ್ರಶಸ್ತಿಗೆ ಕನ್ನಡಪರ ಹೋರಾಟಗಾರ ಪ್ರವೀಣ್ ಕುಮಾರ್ ಶೆಟ್ಟಿ
ಸೆಕೆಂಡ್ ಹ್ಯಾಂಡ್ ಮೊಬೈಲ್ ಬಗ್ಗೆ ಎಚ್ಚರ!: ಬೆಂಗಳೂರಿನಲ್ಲಿ 6 ತಿಂಗಳಲ್ಲಿ 2,350 ಅಕೌಂಟ್ಗೆ ಕನ್ನ..!
ಶಾಲೆಗಾಗಿ ಪಡೆದ ಸಿಎ ಸೈಟ್ನಲ್ಲಿ ಧಮ್ ಬಿರಿಯಾನಿ ಹೋಟೆಲ್! ಛಲವಾದಿ ನಾರಾಯಣ ಸ್ವಾಮಿ ವಿರುದ್ಧ ಆರೋಪ