ಹೆಣ್ಣು ಮಕ್ಕಳ ರಕ್ಷಣೆ ಪ್ರತಿಯೊಬ್ಬ ನಾಗರೀಕರ ಕರ್ತವ್ಯ : ನೆರೆಗಲ್‍

ಸಸಿ ನೆಡವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು

ಹೆಣ್ಣು ಮಕ್ಕಳ ರಕ್ಷಣೆ ಪ್ರತಿಯೊಬ್ಬ ನಾಗರೀಕರ ಕರ್ತವ್ಯ : ನೆರೆಗಲ್‍

kodatageri express News

 

ಗಜೇಂದ್ರಗಡ : ಹೆಣ್ಣು ಜಗದ ಕಣ್ಣು , ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರದಂತೆ ಎಂಬ ಗಾದೆ ಎಂತೆ ಸಮಾಜದಲ್ಲಿ ಹೆಣ್ಣು ಮಕ್ಕಳನ್ನು ರಕ್ಷಣೆ ಮಾಡುವದು . ಮತ್ತು ಅವರನ್ನು ಗೌರವಿಸುವದು ಪ್ರತಿಯೊಬ್ಬರ ಕರ್ತವ್ಯವಾಗಿ ಎಂದು ಗ್ರಾ.ಪಂ ಅಭಿವೃದ್ದಿ ಅಧಿಕಾರಿಯಾದ ಶರಣಪ್ಪ ನೆರೆಗಲ್ ಹೇಳಿದರು ಅವರು ಸರಕಾರಿ ಪ್ರೌಢ ಶಾಲೆ ಗೋಗೇರಿಯಲ್ಲಿ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಬೇಟಿ ಬಚ್ಚಾವೋ ಬೇಟಿ ಪಡಾವೋ . ಮಗಳನ್ನು ರಕ್ಷಿಸಿ ಮಗಳನ್ನು ಓದಿಸಿ ಕಾರ್ಯಕ್ರಮದಲ್ಲಿ ಸಸಿಗಳನ್ನು ನೆಡವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಮಕ್ಕಳಿಗೆ ಶಿಕ್ಷಣ ನೀಡಲು ಮೊದಲು ತಾಯಿ ಶಿಕ್ಷಣವಂತಳಾಗಿರಬೇಕು ಆಗ ತನ್ನ ಮಕ್ಕಳಿಗೆ ಶಿಕ್ಷಣ ಕೊಡಿಸುತ್ತಾಳೆ ಆದ್ದರಿಂದ ಹೆಣ್ಣು ಮಕ್ಕಳು ಹೆಚ್ಚು ಹೆಚ್ಚು ವಿದ್ಯಾವಂತರಾಗಬೇಕು ಆಗ ಮಾತ್ರ ಸಮಾನತೆ ಕಾಣಲು ಸಾಧ್ಯವಾಗುತ್ತದೆ ಎಂದ ಅವರು. ಇತ್ತಿಚಿಗೆ ನಾವು ಮುಂದೆ ವರೆದಿದ್ದೇವೆ ಎಂದರು ಕೂಡ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿವೆ ಎಂತಹ ಬೀಗುವಿನ ಕಾನೂನು ಜಾರಿಗೆ ತಂದರು ಕೂಡ ಅದನ್ನು ದೌರ್ಜನ್ಯ ತಡೆಗಟ್ಟಲು ಸಾಧ್ಯವಾಗುತ್ತಿಲ್ಲಾ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಮಾಡುವ ಘಾತುಕ ಶಕ್ತಿಗಳಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದರು.

ನಂತರ ಶಾಲೆಯ ಮುಖ್ಯೋಪಧ್ಯಾಯರಾದ ಶ್ರೀಮತಿ ನಾಗನೂರ ಅವರು ಮಾತನಾಡಿ ಹೆಣ್ಣು ಮಕ್ಕಳು ಸಮಾನತೆಯಿಂದ ಬಾಳಬೇಕಾದರೆ ಮೊದಲು ಶಿಕ್ಷಣವಂತೆಯಾಗಬೇಕು ಆದ್ದರಿಂದ ಎಲ್ಲಾ ಹೆಣ್ಣುಮಕ್ಕಳು ಮೊದಲು ಉನ್ನತ ಮಟ್ಟದ ಶಿಕ್ಷಣ ಪಡೆಯಿರಿ , ಎಕೆಂದರೆ ನಾವು ಗ್ರಾಮೀಣ ಮಟ್ಟದಲ್ಲಿ ಇದ್ದೇವೆ ಇಲ್ಲಿ ನಮ್ಮ ಹೆಣ್ಣು ಮಕ್ಕಳನ್ನು ಬೇಗನೆ ಮದುವೆ ಮಾಡಿಕೊಡುತ್ತಾರೆ ಆದ್ದರಿಂದ ಅವರು ಶಿಕ್ಷಣದಿಂದ ವಂಚಿತರಾಗುತ್ತಾರೆ . ನಮ್ಮ ದೇಶದಲ್ಲಿ ಹೆಣ್ಣುಮಕ್ಕಳ ಸಾಕ್ಷರತೆ ನಿಗದಿತ ಮಟ್ಟಕ್ಕೆ ತಲುಪಿಲ್ಲ. ಶೇ.100 ರಲ್ಲಿ ಶೇ.62  ರಷ್ಟು ಮಾತ್ರ ಮಹಿಳೆಯರು ಶಿಕ್ಷಣ ಪಡೆಯುತ್ತಿದ್ದು ಉಳಿದವರು ಶಾಲೆಯಿಂದ ಹೊರಗೆ ಉಳಿಯುತ್ತಿದ್ದಾರೆ.ಉಳಿದ ಶೇ.38 ಹೆಣ್ಣುಮಕ್ಕಳನ್ನು ಶಾಲೆಗೆ ಕರೆದುಕೊಂಡು ಬರುವ ಕೆಲಸ ಆಗಬೇಕಿಗೆ. ಇದಕ್ಕೆ ಪ್ರತಿಯೊಬ್ಬರು ಶ್ರಮೀಸಬೇಕು.ಎಲ್ಲಿಯವರೆಗೆ ನಮ್ಮ ಮನಸ್ಥಿತಿ ಬದಲಾವಣೆ ಆಗುವುದಿಲ್ಲವೋ ಅಲ್ಲಿಯವರೆಗೆ ನಮ್ಮ ದೇಶದಲ್ಲಿ ಪೂರ್ಣ ಪ್ರಮಾಣದಲ್ಲಿ ಹೆಣ್ಣಿನ ಶಿಕ್ಷಣ ದೊರೆಯುವುದಿಲ್ಲ ಎಂದರು.ಭ್ರೂಣಹತ್ಯೆ ನಿಷೇಧ ಕಾನೂನು ಜಾರಿ ಆಗಿದೆ. ಇತ್ತೀಚೆಗೆ  ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ಕಡಿಮೆ ಆಗಿದೆ ಆದರೆ ಇದರ ಬಗ್ಗೆ ಜಾಗೃತಿ ಅರಿವು ಅಗತ್ಯವಾಗಿದೆ.   ನೈತಕತೆ ಎಂಬುದು ಪ್ರತಿಯೊಬ್ಬರಲ್ಲೂ ಇರಬೇಕು. ಹೆಣ್ಣಿಗೆ ನಾವು ಸಾಧಿಸಲು ಅವಕಾಶ ನೀಡಿಲ್ಲ. ಆಕೆಯಲ್ಲಿ ಕೂಡ ಸಾಧಿಸು ಬಲವಿದೆ ಹಾಗೂ ಈಗಿರುವ ಕಾನೂನಿನ ಅಡಿ ಎಲ್ಲರಿಗೂ ಸಮಾನ ಅವಕಾಶ ಇದೆ.ನಿಮ್ಮ ಹಕ್ಕುಗಳು ಉಲ್ಲಂಘನೆ ಆದ ಸಂದರ್ಭದಲ್ಲಿ ಅದನ್ನು ಕೇಳಿ ಪಡೆವುದು ನಿಮ್ಮ ಹಕ್ಕು ಆಗಿದೆ ಮಹಿಳೆಯರ ರಕ್ಷಣೆಗೆ ಕಾನೂನುಗಳಿವೆ ಅದರ ಬಗ್ಗೆ ಎಲ್ಲರಲ್ಲಿ ಅರಿವು ಇರುವುದು ಅಗತ್ಯವಾಗಿದೆ. ಎಂದರು . ನಂತರ ಕಾರ್ಯಕ್ರಮದಲ್ಲಿ ಕೆ.ಎಸ್.ಕೊಡತಗೇರಿ . ಮಲ್ಲಿಕಾರ್ಜುನ ಗಾರಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ  ಮುತ್ತಣ್ಣ ಲ್ಯಾವಕ್ಕಿ ,ಗ್ರಾ.ಪಂ ಸದಸ್ಯ ಶಂಕ್ರಪ್ಪ ಗುರಿಕಾರ, ಹನುಮಂತ ಮಾದರ ಬಸವರಾಜ ಮಾದರ, ಶಿಕ್ಷರಾದ ಬಳಿಗೇರ, ಶಿಕ್ಷಕಿಯರಾದ ಗೋಗೇರಿ,  ಹಾಗೂ ಗ್ರಾ.ಪಂ. ಸಿಬ್ಬಿಂದಿ ಗಳಾದ ನಬಿಸಾಬ ಬಾಗವಾನ, ದಸ್ತಗಿರಸಾಬ ವಾಲಿಕಾರ, ಕುಮಾರ ಮಾದರ, ಅಂಗನವಾಡಿ ಶಿಕ್ಷಕಿಯರಾದ ದ್ರಾಕ್ಷೀಯಿಣಿ ಗುಂಡೆ, ಕಳಕವ್ವ ಸೂಡಿ, ಸುಶಿಲಾ ಭೋಸಲೆ , ಸರೋಜಾ ಭೋಸಲೆ ಸೇರಿದಂತೆ ವಿದ್ಯಾರ್ಥಿನೀಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಹೆಣ್ಣು ಮಗಳನ್ನು ರಕ್ಷಸಿ ಹೆಣ್ಣು ಮಗಳನ್ನು ಓದಿಸಿ ಬಿತ್ತಿ ಪತ್ರವನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮದ ಮೊದಲು ಶಾಲೆಯ ಆವರಣದಲ್ಲಿ ತೆಂಗಿನ ಸಸಿಗಳನ್ನು ನೆಡಲಾಯಿತು.

You may have missed

ಸಿದ್ದರಾಮಯ್ಯ: ಅರಸು ದಾಖಲೆ ಸರಿಗಟ್ಟಿದ ‘ಅಹಿಂದ’ ಚಾಣಕ್ಯ – ಜನಪರ ಆಡಳಿತದ ಹೊಸ ಪರ್ವ ​ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ದೀರ್ಘಕಾಲ ಮುಖ್ಯಮಂತ್ರಿಯಾಗಿ ರಾಜ್ಯವಾಳಿದ ಕೀರ್ತಿ ಈವರೆಗೆ ದಿವಂಗತ ಡಿ. ದೇವರಾಜ ಅರಸು (7 ವರ್ಷ 239 ದಿನಗಳು) ಅವರಿಗೆ ಸಲ್ಲುತ್ತಿತ್ತು. ಆದರೆ, ಜನವರಿ 7, 2026ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಐತಿಹಾಸಿಕ ದಾಖಲೆಯನ್ನು ಮುರಿದು, ಕರ್ನಾಟಕದ ಇತಿಹಾಸದಲ್ಲಿ ಅತಿ ಸುದೀರ್ಘ ಕಾಲ ಆಡಳಿತ ನಡೆಸಿದ ನಾಯಕನಾಗಿ ಹೊರಹೊಮ್ಮಿದ್ದಾರೆ. ಇದು ಕೇವಲ ಅಂಕಿ-ಅಂಶಗಳ ಸಾಧನೆಯಲ್ಲ, ಬದಲಿಗೆ ಅವರ ಅಚಲ ಸಿದ್ಧಾಂತ ಮತ್ತು ಜನಪ್ರಿಯತೆಯ ಪ್ರತೀಕವಾಗಿದೆ. ​ಅರಸು ಮತ್ತು ಸಿದ್ದರಾಮಯ್ಯ: ಸಮಾಜಮುಖಿ ಹೋಲಿಕೆ ​ದೇವರಾಜ ಅರಸು ಅವರು ಹೇಗೆ ಭೂ ಸುಧಾರಣೆ ಮತ್ತು ಹಿಂದುಳಿದ ವರ್ಗಗಳ ಸಬಲೀಕರಣದ ಮೂಲಕ ‘ಕರ್ನಾಟಕದ ಕ್ರಾಂತಿಕಾರಿ ನಾಯಕ’ ಎನಿಸಿಕೊಂಡರೋ, ಸಿದ್ದರಾಮಯ್ಯನವರು ‘ಅಹಿಂದ’ (ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ) ವರ್ಗಗಳ ಧ್ವನಿಯಾಗಿ ಅದೇ ಹಾದಿಯಲ್ಲಿ ಮುನ್ನಡೆದಿದ್ದಾರೆ. ಮೈಸೂರು ಮಣ್ಣಿನ ಈ ಇಬ್ಬರು ನಾಯಕರು ಶೋಷಿತ ಸಮುದಾಯಗಳಿಗೆ ರಾಜಕೀಯ ಅಸ್ತಿತ್ವ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ​ಉತ್ತಮ ಆಡಳಿತದ ಪ್ರಮುಖ ಮೈಲಿಗಲ್ಲುಗಳು ​ಸಿದ್ದರಾಮಯ್ಯನವರ ಆಡಳಿತವನ್ನು ಶ್ಲಾಘಿಸಲು ಮುಖ್ಯ ಕಾರಣ ಅವರ ‘ಜನಪರ ಯೋಜನೆಗಳು’. ಅವರ ಆಡಳಿತ ವೈಖರಿಯಲ್ಲಿ ಆರ್ಥಿಕ ಶಿಸ್ತು ಮತ್ತು ಸಾಮಾಜಿಕ ಭದ್ರತೆಯ ಸುಂದರ ಸಮನ್ವಯವಿದೆ: ​ಭಾಗ್ಯಗಳ ಸರಣಿ: ಮೊದಲ ಅವಧಿಯಲ್ಲಿ (2013-18) ಜಾರಿಗೆ ತಂದ ‘ಅನ್ನಭಾಗ್ಯ’, ‘ಕ್ಷೀರಭಾಗ್ಯ’, ‘ಇಂದಿರಾ ಕ್ಯಾಂಟೀನ್’ನಂತಹ ಯೋಜನೆಗಳು ಬಡವರ ಹಸಿವು ನೀಗಿಸುವಲ್ಲಿ ಮೈಲಿಗಲ್ಲಾದವು. ​ಪಂಚ ಗ್ಯಾರಂಟಿಗಳು: ಎರಡನೇ ಅವಧಿಯಲ್ಲಿ ಜಾರಿಗೆ ತಂದ ಐದು ಗ್ಯಾರಂಟಿಗಳು (ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ) ಇಂದು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಆಸರೆಯಾಗಿವೆ. ​ಆರ್ಥಿಕ ತಜ್ಞತೆ: ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ಅಂದರೆ 16 ಬಾರಿ ಬಜೆಟ್ ಮಂಡಿಸಿದ ಹೆಗ್ಗಳಿಕೆ ಇವರದು. ಆರ್ಥಿಕ ಕೊರತೆಯನ್ನು ಹತೋಟಿಯಲ್ಲಿಟ್ಟುಕೊಂಡು ಅಭಿವೃದ್ಧಿ ಕೆಲಸಗಳಿಗೆ ಹಣ ಮೀಸಲಿಡುವ ಇವರ ಚಾಣಕ್ಯತನ ಮೆಚ್ಚುವಂತದ್ದು. ​ನುಡಿದಂತೆ ನಡೆದ ಸರ್ಕಾರ: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಅವರು ತೋರಿದ ಬದ್ಧತೆ ಮತದಾರರಲ್ಲಿ ಅವರ ಮೇಲಿನ ವಿಶ್ವಾಸವನ್ನು ಹೆಚ್ಚಿಸಿದೆ. ​ತಳಮಟ್ಟದ ನಾಯಕತ್ವ ​ಸಿದ್ದರಾಮಯ್ಯನವರು ಯಾವುದೇ ‘ಹೈಕಮಾಂಡ್’ ನೆರಳಿನಲ್ಲದೆ, ಹಳ್ಳಿ ಹಳ್ಳಿಯ ಜನರೊಂದಿಗೆ ಬೆರೆತು ಬೆಳೆದ ನಾಯಕ. ಅವರ ನೇರ ನುಡಿ, ತರ್ಕಬದ್ಧ ಮಾತುಗಳು ಮತ್ತು ಸಂವಿಧಾನದ ಮೇಲಿನ ಗೌರವ ಅವರನ್ನು ಶ್ರೇಷ್ಠ ಸಂಸದೀಯ ಪಟುವನ್ನಾಗಿ ಮಾಡಿದೆ. ​”ಅಧಿಕಾರ ಎನ್ನುವುದು ಕೇವಲ ಕುರ್ಚಿಯಲ್ಲ, ಅದು ಬಡವರ ಕಣ್ಣೀರು ಒರೆಸುವ ಅವಕಾಶ” ಎಂಬ ಸಿದ್ಧಾಂತದೊಂದಿಗೆ ಅವರು ಮುನ್ನಡೆಯುತ್ತಿರುವುದು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ. ​ಸಮಾರೋಪ ​ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಸಿದ್ದರಾಮಯ್ಯನವರು, ಕರ್ನಾಟಕದ ಸಾಮಾಜಿಕ ನಕ್ಷೆಯಲ್ಲಿ ತಮ್ಮದೇ ಆದ ಅಳಿಸಲಾಗದ ಛಾಪನ್ನು ಒತ್ತಿದ್ದಾರೆ. ಅವರ ಈ ಪಯಣ ಕೇವಲ ಸುದೀರ್ಘ ಅವಧಿಯದ್ದಷ್ಟೇ ಅಲ್ಲದೆ, ‘ಸಮ ಸಮಾಜ’ದ ನಿರ್ಮಾಣದ ಹಾದಿಯಲ್ಲಿ ಒಂದು ಭರವಸೆಯ ನಡಿಗೆಯಾಗಿದೆ.

error: Content is protected !!