ಚಂದನ್‌-ನಿವೇದಿತಾ ಡಿವೋರ್ಸ್‌

ಚಂದನ್‌-ನಿವೇದಿತಾ ಡಿವೋರ್ಸ್‌

ಕೊಡತಗೇರಿ ಎಕ್ಸ್‌ಪ್ರೆಸ್‌ ಸುದ್ದಿ

ಸ್ಯಾಂಡಲ್ ವುಡ್Niveditha Gowda: ಚಂದನ್‌-ನಿವೇದಿತಾ ಡಿವೋರ್ಸ್‌ ಬಗ್ಗೆ ಅಸಲಿ ಸತ್ಯ ಬಯಲು ಮಾಡಿದ ವಕೀಲೆ!
Niveditha Gowda: ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್‌ ಶೆಟ್ಟಿ ಅವರು ನಿವೇದಿತಾ ಗೌಡ ಪ್ರಪೋಸ್‌ ಮಾಡಿದ್ದೂ ವಿವಾದಕ್ಕೆ ಕಾರಣವಾಗಿತ್ತು. ಸಾಕಷ್ಟು ಮಂದಿ ಇದಕ್ಕೆ ಟೀಕೆ ವ್ಯಕ್ತಪಡಿಸಿದ್ದರು. ಬಿಗ್‌ ಬಾಸ್‌ ಐದನೇ ಸೀಸನ್‌ನಲ್ಲಿ ಚಂದನ್‌ ಗೌಡ ಹಾಗೂ ನಿವೇದಿತಾ ಗೌಡ ಮೊದಲ ಬಾರಿಗೆ ಭೇಟಿಯಾಗಿದ್ದರು. ಮೊದಲಿಗೆ ಬಿಗ್‌ಬಾಸ್‌ನಲ್ಲಿ ನಿವೇದಿತಾಳನ್ನು ತನ್ನ ತಂಗಿ ಎಂದೇ ಹೇಳುತ್ತಿದ್ದ ಚಂದನ್‌ ಗೌಡ ಬಳಿಕ ಮದುವೆಯಾಗಿದ್ದರು.


ಸ್ಯಾಂಡಲ್ ವುಡ್Niveditha Gowda: ಚಂದನ್‌-ನಿವೇದಿತಾ ಡಿವೋರ್ಸ್‌ ಬಗ್ಗೆ ಅಸಲಿ ಸತ್ಯ ಬಯಲು ಮಾಡಿದ ವಕೀಲೆ!
Niveditha Gowda: ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್‌ ಶೆಟ್ಟಿ ಅವರು ನಿವೇದಿತಾ ಗೌಡ ಪ್ರಪೋಸ್‌ ಮಾಡಿದ್ದೂ ವಿವಾದಕ್ಕೆ ಕಾರಣವಾಗಿತ್ತು. ಸಾಕಷ್ಟು ಮಂದಿ ಇದಕ್ಕೆ ಟೀಕೆ ವ್ಯಕ್ತಪಡಿಸಿದ್ದರು. ಬಿಗ್‌ ಬಾಸ್‌ ಐದನೇ ಸೀಸನ್‌ನಲ್ಲಿ ಚಂದನ್‌ ಗೌಡ ಹಾಗೂ ನಿವೇದಿತಾ ಗೌಡ ಮೊದಲ ಬಾರಿಗೆ ಭೇಟಿಯಾಗಿದ್ದರು. ಮೊದಲಿಗೆ ಬಿಗ್‌ಬಾಸ್‌ನಲ್ಲಿ ನಿವೇದಿತಾಳನ್ನು ತನ್ನ ತಂಗಿ ಎಂದೇ ಹೇಳುತ್ತಿದ್ದ ಚಂದನ್‌ ಗೌಡ ಬಳಿಕ ಮದುವೆಯಾಗಿದ್ದರು.

 

ಬೆಂಗಳೂರು: ಚಂದನ್‌ ಹಾಗೂ ನಿವೇದಿತಾ (Niveditha Gowda) ಅವರು ಡಿವೋರ್ಸ್‌ ಪಡೆದ ಕಾರಣಗಳ ಬಗ್ಗೆ ಹಲವು ವದಂತಿಗಳು ಹಬ್ಬಿವೆ. ಈಗ ಚಂದನ್ ಹಾಗೂ ನಿವೇದಿತಾ ಪರ ವಕೀಲರಾದ ಅನಿತಾ ಅವರು ಇವರ ವಿಚ್ಛೇದನಕ್ಕೆ ಕಾರಣ ಏನು ಎಂಬುದನ್ನು ರಿವೀಲ್ ಮಾಡಿದ್ದಾರೆ. `ಒಂದು ವರ್ಷಗಳ ಹಿಂದೆಯೇ ಇವರು ವಿಚ್ಛೇದನಕ್ಕೆ ನಿರ್ಧರಿಸಿದ್ದರು’ ಎಂದು ಹೇಳಿಕೆ ನೀಡಿದ್ದಾರೆ.

 

ಈ ಬಗ್ಗೆ ವಕೀಲರಾದ ಅನಿತಾ ಮಾತನಾಡಿ ʻʻಇವರಿಬ್ಬರ ಬಗ್ಗೆ ಮಾಧ್ಯಮದಲ್ಲಿ ತಪ್ಪಾಗಿ ತೋರಿಸಲಾಗುತ್ತಿದೆ. ಮೊದಲು ವಿಚ್ಛೇದನ ಅರ್ಜಿ ಸಲ್ಲಿಸಿದ ಬಳಿಕ ಆರು ತಿಂಗಳ ಸಮಯಾವಕಾಶ ಇರುತ್ತಿತ್ತು. ಈಗ ಹಾಗಿಲ್ಲ. ತಕ್ಷಣಕ್ಕೆ ವಿಚ್ಛೇದನ ಪಡೆಯಬಹುದು. ದೊಡ್ಡವರು ಸಂಧಾನ ಮಾಡಲು ಪ್ರಯತ್ನಿಸಿದರು. ಆದರೆ, ಅದು ಆಗಿಲ್ಲ. ಮಗು ಹೊಂದಲು ನಿವೇದಿತಾ ಒಪ್ಪಿಲ್ಲ, ಇದಕ್ಕೆ ವಿಚ್ಛೇದನ ಪಡೆದರು ಎನ್ನುವುದು ಸುಳ್ಳು. ಇಬ್ಬರ ಆಲೋಚನೆ ಬೇರೆ ಇದೆ. ಒಬ್ಬರಿಗೊಬ್ಬರು ತೆಗೆದುಕೊಂಡ ನಿರ್ಧಾರವನ್ನು ಗೌರವಿಸುತ್ತಾರೆ. ಅವರ ಖಾಸಗಿತನಕ್ಕೆ ನಾವು ಗೌರವ ಕೊಡಬೇಕು. ಒಬ್ಬರನ್ನೊಬ್ಬರು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ. ನಿನ್ನೆಯೇ ಡಿವೋರ್ಸ್‌ ಆಗಿದೆ. ಅವರಿಬ್ಬರಲ್ಲಿ ಒಳ್ಳೆಯ ಮಾನವೀಯತೆ ಇದೆ. ತುಂಬ ಮೆಚ್ಯೂರ್‌ ಆಗಿದ್ದಾರೆʼʼ ಎಂದರು.

“ಇಬ್ಬರೂ ಡಿಫೆಂಡ್ ಆಗುವ ಪರಿಸ್ಥಿಯಲ್ಲಿಯೂ ಅವರು ಇಲ್ಲ. ಯಾವುದೇ ಜೀವನಾಂಶ ಕೂಡ ಕೇಳಿಲ್ಲ. ಗಂಡ ಹೆಂಡತಿ ಮಧ್ಯೆ ಭಿನ್ನವಾದ ಸಂಬಂಧ ಇರುತ್ತದೆ. ಎಷ್ಟೋ ಜನ ಗಂಡ ಹೆಂಡತಿಯರು ಹೆದರಿಕೊಂಡು ಡಿವೋರ್ಸ್ ಹಂತಕ್ಕೆ ಬರುವುದಿಲ್ಲ. ಇನ್ನೂ ಕೆಲವರು ತುಂಬ ಜಗಳ ಮಾಡುತ್ತಾರೆ. ಆದರೆ ತುಂಬ ಒಬ್ಬರಿಗೊಬ್ಬರು ಪ್ರೀತಿಸುತ್ತಾರೆ. ಆದರೆ ಇವರ ಕೇಸ್‌ನಲ್ಲಿ ಬೇರೆಯಾಗಬೇಕು ಎಂದು ಅವರು ಆಗಲೇ ನಿರ್ಧಾರ ಮಾಡಿದ್ದರು. ಫ್ಯಾಮಿಲಿ ಜತೆ ಕೂಡ ಚರ್ಚಿಸಿದ್ದರು. ಇದೀಗ ಅಧಿಕೃತವಾಗಿ ಡಿವೋರ್ಸ್ ಪಡೆದಿದ್ದಾರೆ” ಎಂದರು

ನಿವೇದಿತಾ ಗೌಡ ಪೋಸ್ಟ್‌
ಈ ದಿನ., ಚಂದನ್ ಶೆಟ್ಟಿ ಮತ್ತು ನಾನು, ನಮ್ಮ ದಾಂಪತ್ಯ ಜೀವನವನ್ನ ಕಾನೂನುಬದ್ಧವಾಗಿ ಪರಸ್ಪರ ಒಪ್ಪಿಗೆಯಿಂದ ಕೊನೆಗೂಳಿಸಿದ್ದೇವೆ. ನಮ್ಮ ನಿರ್ಧಾರವನ್ನು ಮತ್ತು ನಮ್ಮ ಜೀವನದ ಖಾಸಗಿತನವನ್ನು ಗೌರವಿಸಲು ಕೋರುತ್ತೇವೆ. ಪ್ರತಿ ಸಂದರ್ಭದಲ್ಲಿ ನಮ್ಮೊಂದಿಗೆ ನಿಂತ ಮಾಧ್ಯಮ ಮಿತ್ರರು ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ನಾವು ಎಂದಿನಂತೆ ಬೆಂಬಲವನ್ನು ಕೋರುತ್ತೇವೆ. ನಾವು ನಮ್ಮ ಪ್ರತ್ಯೇಕ ಮಾರ್ಗ ಅನುಸರಿಸಿದರೂ ಪರಸ್ಪರ ಒಬ್ಬರನ್ನು ಒಬ್ಬರು ಗೌರವಿಸುತ್ತೇವೆ. ಸೂಕ್ಷ್ಮ ಪರಿಗಣೆಗಾಗಿ ಎಲ್ಲರಿಗೂ ಧನ್ಯವಾದಗಳು ಎಂದು ನಿವೇದಿತಾ ಗೌಡ ಬರೆದುಕೊಂಡಿದ್ದಾರೆ.

You may have missed

ಸಿದ್ದರಾಮಯ್ಯ: ಅರಸು ದಾಖಲೆ ಸರಿಗಟ್ಟಿದ ‘ಅಹಿಂದ’ ಚಾಣಕ್ಯ – ಜನಪರ ಆಡಳಿತದ ಹೊಸ ಪರ್ವ ​ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ದೀರ್ಘಕಾಲ ಮುಖ್ಯಮಂತ್ರಿಯಾಗಿ ರಾಜ್ಯವಾಳಿದ ಕೀರ್ತಿ ಈವರೆಗೆ ದಿವಂಗತ ಡಿ. ದೇವರಾಜ ಅರಸು (7 ವರ್ಷ 239 ದಿನಗಳು) ಅವರಿಗೆ ಸಲ್ಲುತ್ತಿತ್ತು. ಆದರೆ, ಜನವರಿ 7, 2026ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಐತಿಹಾಸಿಕ ದಾಖಲೆಯನ್ನು ಮುರಿದು, ಕರ್ನಾಟಕದ ಇತಿಹಾಸದಲ್ಲಿ ಅತಿ ಸುದೀರ್ಘ ಕಾಲ ಆಡಳಿತ ನಡೆಸಿದ ನಾಯಕನಾಗಿ ಹೊರಹೊಮ್ಮಿದ್ದಾರೆ. ಇದು ಕೇವಲ ಅಂಕಿ-ಅಂಶಗಳ ಸಾಧನೆಯಲ್ಲ, ಬದಲಿಗೆ ಅವರ ಅಚಲ ಸಿದ್ಧಾಂತ ಮತ್ತು ಜನಪ್ರಿಯತೆಯ ಪ್ರತೀಕವಾಗಿದೆ. ​ಅರಸು ಮತ್ತು ಸಿದ್ದರಾಮಯ್ಯ: ಸಮಾಜಮುಖಿ ಹೋಲಿಕೆ ​ದೇವರಾಜ ಅರಸು ಅವರು ಹೇಗೆ ಭೂ ಸುಧಾರಣೆ ಮತ್ತು ಹಿಂದುಳಿದ ವರ್ಗಗಳ ಸಬಲೀಕರಣದ ಮೂಲಕ ‘ಕರ್ನಾಟಕದ ಕ್ರಾಂತಿಕಾರಿ ನಾಯಕ’ ಎನಿಸಿಕೊಂಡರೋ, ಸಿದ್ದರಾಮಯ್ಯನವರು ‘ಅಹಿಂದ’ (ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ) ವರ್ಗಗಳ ಧ್ವನಿಯಾಗಿ ಅದೇ ಹಾದಿಯಲ್ಲಿ ಮುನ್ನಡೆದಿದ್ದಾರೆ. ಮೈಸೂರು ಮಣ್ಣಿನ ಈ ಇಬ್ಬರು ನಾಯಕರು ಶೋಷಿತ ಸಮುದಾಯಗಳಿಗೆ ರಾಜಕೀಯ ಅಸ್ತಿತ್ವ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ​ಉತ್ತಮ ಆಡಳಿತದ ಪ್ರಮುಖ ಮೈಲಿಗಲ್ಲುಗಳು ​ಸಿದ್ದರಾಮಯ್ಯನವರ ಆಡಳಿತವನ್ನು ಶ್ಲಾಘಿಸಲು ಮುಖ್ಯ ಕಾರಣ ಅವರ ‘ಜನಪರ ಯೋಜನೆಗಳು’. ಅವರ ಆಡಳಿತ ವೈಖರಿಯಲ್ಲಿ ಆರ್ಥಿಕ ಶಿಸ್ತು ಮತ್ತು ಸಾಮಾಜಿಕ ಭದ್ರತೆಯ ಸುಂದರ ಸಮನ್ವಯವಿದೆ: ​ಭಾಗ್ಯಗಳ ಸರಣಿ: ಮೊದಲ ಅವಧಿಯಲ್ಲಿ (2013-18) ಜಾರಿಗೆ ತಂದ ‘ಅನ್ನಭಾಗ್ಯ’, ‘ಕ್ಷೀರಭಾಗ್ಯ’, ‘ಇಂದಿರಾ ಕ್ಯಾಂಟೀನ್’ನಂತಹ ಯೋಜನೆಗಳು ಬಡವರ ಹಸಿವು ನೀಗಿಸುವಲ್ಲಿ ಮೈಲಿಗಲ್ಲಾದವು. ​ಪಂಚ ಗ್ಯಾರಂಟಿಗಳು: ಎರಡನೇ ಅವಧಿಯಲ್ಲಿ ಜಾರಿಗೆ ತಂದ ಐದು ಗ್ಯಾರಂಟಿಗಳು (ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ) ಇಂದು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಆಸರೆಯಾಗಿವೆ. ​ಆರ್ಥಿಕ ತಜ್ಞತೆ: ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ಅಂದರೆ 16 ಬಾರಿ ಬಜೆಟ್ ಮಂಡಿಸಿದ ಹೆಗ್ಗಳಿಕೆ ಇವರದು. ಆರ್ಥಿಕ ಕೊರತೆಯನ್ನು ಹತೋಟಿಯಲ್ಲಿಟ್ಟುಕೊಂಡು ಅಭಿವೃದ್ಧಿ ಕೆಲಸಗಳಿಗೆ ಹಣ ಮೀಸಲಿಡುವ ಇವರ ಚಾಣಕ್ಯತನ ಮೆಚ್ಚುವಂತದ್ದು. ​ನುಡಿದಂತೆ ನಡೆದ ಸರ್ಕಾರ: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಅವರು ತೋರಿದ ಬದ್ಧತೆ ಮತದಾರರಲ್ಲಿ ಅವರ ಮೇಲಿನ ವಿಶ್ವಾಸವನ್ನು ಹೆಚ್ಚಿಸಿದೆ. ​ತಳಮಟ್ಟದ ನಾಯಕತ್ವ ​ಸಿದ್ದರಾಮಯ್ಯನವರು ಯಾವುದೇ ‘ಹೈಕಮಾಂಡ್’ ನೆರಳಿನಲ್ಲದೆ, ಹಳ್ಳಿ ಹಳ್ಳಿಯ ಜನರೊಂದಿಗೆ ಬೆರೆತು ಬೆಳೆದ ನಾಯಕ. ಅವರ ನೇರ ನುಡಿ, ತರ್ಕಬದ್ಧ ಮಾತುಗಳು ಮತ್ತು ಸಂವಿಧಾನದ ಮೇಲಿನ ಗೌರವ ಅವರನ್ನು ಶ್ರೇಷ್ಠ ಸಂಸದೀಯ ಪಟುವನ್ನಾಗಿ ಮಾಡಿದೆ. ​”ಅಧಿಕಾರ ಎನ್ನುವುದು ಕೇವಲ ಕುರ್ಚಿಯಲ್ಲ, ಅದು ಬಡವರ ಕಣ್ಣೀರು ಒರೆಸುವ ಅವಕಾಶ” ಎಂಬ ಸಿದ್ಧಾಂತದೊಂದಿಗೆ ಅವರು ಮುನ್ನಡೆಯುತ್ತಿರುವುದು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ. ​ಸಮಾರೋಪ ​ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಸಿದ್ದರಾಮಯ್ಯನವರು, ಕರ್ನಾಟಕದ ಸಾಮಾಜಿಕ ನಕ್ಷೆಯಲ್ಲಿ ತಮ್ಮದೇ ಆದ ಅಳಿಸಲಾಗದ ಛಾಪನ್ನು ಒತ್ತಿದ್ದಾರೆ. ಅವರ ಈ ಪಯಣ ಕೇವಲ ಸುದೀರ್ಘ ಅವಧಿಯದ್ದಷ್ಟೇ ಅಲ್ಲದೆ, ‘ಸಮ ಸಮಾಜ’ದ ನಿರ್ಮಾಣದ ಹಾದಿಯಲ್ಲಿ ಒಂದು ಭರವಸೆಯ ನಡಿಗೆಯಾಗಿದೆ.

error: Content is protected !!