ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಡತಗೇರಿ ಎಕ್ಸ್‌ಪ್ರೆಸ್‌ ಸುದ್ದಿ
ಕೊಪ್ಪಳ ಜುಲೈ 18 ಗಂಗಾವತಿಯ ಆರ್‌ಎನ್‌ಎಸ್ ಕಂಪನಿಯಲ್ಲಿ ಸೆಕ್ಯೂರಿಟಿಯಾಗಿ ಕಾರ್ಯನಿರ್ವಹಿಸುತ್ತಿದ್ದ ತೆಲಂಗಾಣ ರಾಜ್ಯದ ವನಪರ್ತಿ ಜಿಲ್ಲೆಯ ಪಾನಗಲ್ ಮಂಡಲ ತಾಲ್ಲೂಕಿನ ಕೇತಪಲ್ಲಿ ಗ್ರಾಮದ ನಿವಾಸಿ ಗಾಲಿಗಲ್ಲ ಬೊಜ್ಜಣ್ಣ ಎಂಬ 60 ವರ್ಷದ ವ್ಯಕ್ತಿಯು 2024ರ ಮೇ 12 ರಿಂದ ಕಾಣೆಯಾಗಿದ್ದು, ಈವರೆಗೂ ಪತ್ತೆಯಾಗಿರುವುದಿಲ್ಲ. ಈ ಬಗ್ಗೆ ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ:81/2024 ಕಲಂ ಮನುಷ್ಯ ಕಾಣೆ ಅಡಿ ಪ್ರಕರಣ ದಾಖಲಾಗಿದೆ.
ಕಾಣೆಯಾದ ವ್ಯಕ್ತಿಯ ಚಹರೆ:
ವ್ಯಕ್ತಿಯು 5.5 ಅಡಿ ಎತ್ತರವಿದ್ದು, ದುಂಡು ಮುಖ, ಸಾದಾ ಕಪ್ಪು ಮೈಬಣ್ಣ, ಸದೃಢ ಮೈಕಟ್ಟು ಹೊಂದಿದ್ದಾರೆ. ಕಾಣೆಯಾದಾಗ ಬಿಳಿ ಅಂಗಿ, ಬಿಳಿ ಲುಂಗಿ ಮತ್ತು ಟವೇಲ್ ಧರಿಸಿದ್ದರು. ತೆಲುಗು ಭಾಷೆ ಮಾತನಾಡುತ್ತಾರೆ.
ಮೇಲ್ಕಂಡ ಚಹರೆಯ ವ್ಯಕ್ತಿಯ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದಲ್ಲಿ ಅಥವಾ ದೊರೆತಲ್ಲಿ ಗಂಗಾವತಿ ನಗರ ಪೋಲಿಸ್ ಠಾಣೆ ಪಿಐ ದೂ.ಸಂ: 08533-230633, 9480803752 ಗಂಗಾವತಿ ಡಿವೈಎಸ್‌ಪಿ: 08533-230853, 9480803721 ಎಸ್‌ಪಿ ಕಚೇರಿ: 08539-230111 ಗೆ ಸಂಪರ್ಕಿಸಿ ಮಾಹಿತಿ ನೀಡಬೇಕು ಎಂದು ಪೊಲೀಸ್ ಠಾಣೆ ಪ್ರಕಟಣೆ ತಿಳಿಸಿದೆ.

You may have missed

ಸಿದ್ದರಾಮಯ್ಯ: ಅರಸು ದಾಖಲೆ ಸರಿಗಟ್ಟಿದ ‘ಅಹಿಂದ’ ಚಾಣಕ್ಯ – ಜನಪರ ಆಡಳಿತದ ಹೊಸ ಪರ್ವ ​ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ದೀರ್ಘಕಾಲ ಮುಖ್ಯಮಂತ್ರಿಯಾಗಿ ರಾಜ್ಯವಾಳಿದ ಕೀರ್ತಿ ಈವರೆಗೆ ದಿವಂಗತ ಡಿ. ದೇವರಾಜ ಅರಸು (7 ವರ್ಷ 239 ದಿನಗಳು) ಅವರಿಗೆ ಸಲ್ಲುತ್ತಿತ್ತು. ಆದರೆ, ಜನವರಿ 7, 2026ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಐತಿಹಾಸಿಕ ದಾಖಲೆಯನ್ನು ಮುರಿದು, ಕರ್ನಾಟಕದ ಇತಿಹಾಸದಲ್ಲಿ ಅತಿ ಸುದೀರ್ಘ ಕಾಲ ಆಡಳಿತ ನಡೆಸಿದ ನಾಯಕನಾಗಿ ಹೊರಹೊಮ್ಮಿದ್ದಾರೆ. ಇದು ಕೇವಲ ಅಂಕಿ-ಅಂಶಗಳ ಸಾಧನೆಯಲ್ಲ, ಬದಲಿಗೆ ಅವರ ಅಚಲ ಸಿದ್ಧಾಂತ ಮತ್ತು ಜನಪ್ರಿಯತೆಯ ಪ್ರತೀಕವಾಗಿದೆ. ​ಅರಸು ಮತ್ತು ಸಿದ್ದರಾಮಯ್ಯ: ಸಮಾಜಮುಖಿ ಹೋಲಿಕೆ ​ದೇವರಾಜ ಅರಸು ಅವರು ಹೇಗೆ ಭೂ ಸುಧಾರಣೆ ಮತ್ತು ಹಿಂದುಳಿದ ವರ್ಗಗಳ ಸಬಲೀಕರಣದ ಮೂಲಕ ‘ಕರ್ನಾಟಕದ ಕ್ರಾಂತಿಕಾರಿ ನಾಯಕ’ ಎನಿಸಿಕೊಂಡರೋ, ಸಿದ್ದರಾಮಯ್ಯನವರು ‘ಅಹಿಂದ’ (ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ) ವರ್ಗಗಳ ಧ್ವನಿಯಾಗಿ ಅದೇ ಹಾದಿಯಲ್ಲಿ ಮುನ್ನಡೆದಿದ್ದಾರೆ. ಮೈಸೂರು ಮಣ್ಣಿನ ಈ ಇಬ್ಬರು ನಾಯಕರು ಶೋಷಿತ ಸಮುದಾಯಗಳಿಗೆ ರಾಜಕೀಯ ಅಸ್ತಿತ್ವ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ​ಉತ್ತಮ ಆಡಳಿತದ ಪ್ರಮುಖ ಮೈಲಿಗಲ್ಲುಗಳು ​ಸಿದ್ದರಾಮಯ್ಯನವರ ಆಡಳಿತವನ್ನು ಶ್ಲಾಘಿಸಲು ಮುಖ್ಯ ಕಾರಣ ಅವರ ‘ಜನಪರ ಯೋಜನೆಗಳು’. ಅವರ ಆಡಳಿತ ವೈಖರಿಯಲ್ಲಿ ಆರ್ಥಿಕ ಶಿಸ್ತು ಮತ್ತು ಸಾಮಾಜಿಕ ಭದ್ರತೆಯ ಸುಂದರ ಸಮನ್ವಯವಿದೆ: ​ಭಾಗ್ಯಗಳ ಸರಣಿ: ಮೊದಲ ಅವಧಿಯಲ್ಲಿ (2013-18) ಜಾರಿಗೆ ತಂದ ‘ಅನ್ನಭಾಗ್ಯ’, ‘ಕ್ಷೀರಭಾಗ್ಯ’, ‘ಇಂದಿರಾ ಕ್ಯಾಂಟೀನ್’ನಂತಹ ಯೋಜನೆಗಳು ಬಡವರ ಹಸಿವು ನೀಗಿಸುವಲ್ಲಿ ಮೈಲಿಗಲ್ಲಾದವು. ​ಪಂಚ ಗ್ಯಾರಂಟಿಗಳು: ಎರಡನೇ ಅವಧಿಯಲ್ಲಿ ಜಾರಿಗೆ ತಂದ ಐದು ಗ್ಯಾರಂಟಿಗಳು (ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ) ಇಂದು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಆಸರೆಯಾಗಿವೆ. ​ಆರ್ಥಿಕ ತಜ್ಞತೆ: ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ಅಂದರೆ 16 ಬಾರಿ ಬಜೆಟ್ ಮಂಡಿಸಿದ ಹೆಗ್ಗಳಿಕೆ ಇವರದು. ಆರ್ಥಿಕ ಕೊರತೆಯನ್ನು ಹತೋಟಿಯಲ್ಲಿಟ್ಟುಕೊಂಡು ಅಭಿವೃದ್ಧಿ ಕೆಲಸಗಳಿಗೆ ಹಣ ಮೀಸಲಿಡುವ ಇವರ ಚಾಣಕ್ಯತನ ಮೆಚ್ಚುವಂತದ್ದು. ​ನುಡಿದಂತೆ ನಡೆದ ಸರ್ಕಾರ: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಅವರು ತೋರಿದ ಬದ್ಧತೆ ಮತದಾರರಲ್ಲಿ ಅವರ ಮೇಲಿನ ವಿಶ್ವಾಸವನ್ನು ಹೆಚ್ಚಿಸಿದೆ. ​ತಳಮಟ್ಟದ ನಾಯಕತ್ವ ​ಸಿದ್ದರಾಮಯ್ಯನವರು ಯಾವುದೇ ‘ಹೈಕಮಾಂಡ್’ ನೆರಳಿನಲ್ಲದೆ, ಹಳ್ಳಿ ಹಳ್ಳಿಯ ಜನರೊಂದಿಗೆ ಬೆರೆತು ಬೆಳೆದ ನಾಯಕ. ಅವರ ನೇರ ನುಡಿ, ತರ್ಕಬದ್ಧ ಮಾತುಗಳು ಮತ್ತು ಸಂವಿಧಾನದ ಮೇಲಿನ ಗೌರವ ಅವರನ್ನು ಶ್ರೇಷ್ಠ ಸಂಸದೀಯ ಪಟುವನ್ನಾಗಿ ಮಾಡಿದೆ. ​”ಅಧಿಕಾರ ಎನ್ನುವುದು ಕೇವಲ ಕುರ್ಚಿಯಲ್ಲ, ಅದು ಬಡವರ ಕಣ್ಣೀರು ಒರೆಸುವ ಅವಕಾಶ” ಎಂಬ ಸಿದ್ಧಾಂತದೊಂದಿಗೆ ಅವರು ಮುನ್ನಡೆಯುತ್ತಿರುವುದು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ. ​ಸಮಾರೋಪ ​ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಸಿದ್ದರಾಮಯ್ಯನವರು, ಕರ್ನಾಟಕದ ಸಾಮಾಜಿಕ ನಕ್ಷೆಯಲ್ಲಿ ತಮ್ಮದೇ ಆದ ಅಳಿಸಲಾಗದ ಛಾಪನ್ನು ಒತ್ತಿದ್ದಾರೆ. ಅವರ ಈ ಪಯಣ ಕೇವಲ ಸುದೀರ್ಘ ಅವಧಿಯದ್ದಷ್ಟೇ ಅಲ್ಲದೆ, ‘ಸಮ ಸಮಾಜ’ದ ನಿರ್ಮಾಣದ ಹಾದಿಯಲ್ಲಿ ಒಂದು ಭರವಸೆಯ ನಡಿಗೆಯಾಗಿದೆ.

error: Content is protected !!