ಖಾಸಗಿ ಕಂಪನಿಗಳಲ್ಲಿಯು ಕನ್ನಡಿಗರಿಗೆ ಮೀಸಲಾತಿ ನೀಡಬೇಕು ಸ ಶರಣಪ್ಪ ಪಾಟೀಲ

ಖಾಸಗಿ ಕಂಪನಿಗಳಲ್ಲಿಯು ಕನ್ನಡಿಗರಿಗೆ ಮೀಸಲಾತಿ ನೀಡಬೇಕು ಸ ಶರಣಪ್ಪ ಪಾಟೀಲ

ಕೊಡತಗೇರಿ ಎಕ್ಸ್‌ಪ್ರೆಸ್‌ ಸುದ್ದಿ ಯಲಬುರ್ಗಾ:

ರಾಜ್ಯದಲ್ಲಿ ಖಾಸಗಿ-ಅರೆಕಾಸಗಿ ಕಂಪನಿಗಳಲ್ಲಿ ಮೂಲ ಸ್ಥಳೀಯ ಕನ್ನಡಿಗರಿಗೆ ಶೇ.75ರಷ್ಟು ಉದ್ಯೋಗ ಮೀಸಲಾತಿ ನೀಡಬೇಕು ಎಂದು ಕನ್ನಡ ಪರ ಹೋರಾಟಗಾರ ಸ ಶರಣಪ್ಪ ಪಾಟೀಲ ಹೇಳಿದರು

ಅವರು ಸ್ಥಳಿಯ ಪಟ್ಟಣದ ಚನ್ನಮ್ಮ ವೃತ್ತದಲ್ಲಿ ಕರವೇ ಪ್ರವೀಣ ಶೇಟ್ಟಿ ಬಣ ತಾಲೂಕ ಘಟಕದಿಂದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಸರಕಾರ ಕೂಡಲೇ ಕನ್ನಡಿಗರಿಗೆ ಮೀಸಲಾತಿಯನ್ನು ಕಲ್ಪಸಿಕೊಡಬೇಕು ಖಾಸಗಿ ವಲಯದಲ್ಲಿ ಎಂದು ಒತ್ತಾಯಿಸಿದರು .ಪಟ್ಟಣದ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಬಳಿಕ ಉಪತಶೀಲ್ದಾರ ವಿಜಯಕುಮಾರ ಗುಂಡೂರು ಅವರು ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಕರವೇ ಅಧ್ಯಕ್ಷ ಶಿವಕುಮಾರ ನಾಗನಗೌಡ್ರ ಮಾತನಾಡಿ, ಕಾರ್ಮಿಕ ಇಲಾಖೆಯಿಂದ ರಾಜ್ಯದ ಕೈಗಾರಿಕೆ, ಕಾರ್ಖಾನೆ ಮತ್ತು ಇತರೆ ಹುದ್ದೆಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗ ವಿಧೆಯಕ 2024 ಮಂಡನೆ ಮಾಡಿ ಒಪ್ಪಿಗೆ ಪಡೆಯಲಾಗಿತ್ತು, ಆದರೆ ಕೇವಲ ಸಿ-ಡಿ. ದರ್ಜೆ ಉದ್ಯೋಗಳಲ್ಲಿ ಶೇ100 ರಷ್ಟು ಸ್ಥಳೀಯರಿಗೆ ಮೀಸಲು ಕಲ್ಪಿಸಬೇಕು.

ಇದನ್ನು ನಿರ್ವಹಣೆ ಮಾಡಲು ನೋಡಲ್ ಏಜೆನ್ಸಿ ಸ್ಥಾಪಿಸಬೇಕೆಂದು ಸಹ ಹೇಳಿರುವದಾಗಿ ಮೂಲಗಳು ಮೂಲಕ ತಿಳಿದಿದ್ದು ಕರಡು ವಿಧೇಯಕ ಪ್ರತಿಯಲ್ಲಿ ತಡೆ ಸೂಪರ್ ವೈಜರ, ವ್ಯವಸ್ಥಾಪಕಿ, ಟೆಕ್ನಿಕಲ್, ಆಡಳಿತ ಸೇರಿ ಆಡಳಿತ್ಮಾಕ (ಮಾನೇಜಮೆಂಟ್) ಹುದ್ದೆಗಳಲ್ಲಿ ಶೇ50 ರಷ್ಟು ಹಾಗೂ ಕ್ಲರ್ಕ. ಕೌಶಲ್ಯ, ರಹಿತ ಅರೇಕೌಶಲ್ಯ, ಗುತ್ತಿಗೆ ನೌಕರಂತಹ ಆಡಳಿತ್ಮಾಕವಲ್ಲ ( ನಾನ್

ಮ್ಯಾನೇಜ್ ಮಂಟೆ) ಹುದ್ದೆಗಳಲ್ಲಿ ಶೇ75% ನ್ನೂ ಸ್ಥಳಿಯರಿಗೆ ಮೀಸಲಿಡಬೇಕು, ಎಂದು ಹೇಳಲಾಗಿತ್ತು. ಒಂದು ವೆಚ್ಚ ಕನ್ನಡಿಗ ಉದ್ಯೋಗಿಗಳ ಆಲಭ್ಯತೆ ಇದ್ದರೆ, ನೋಡಿಲ್ ಏಜನ್ಸಿಯಿಂದ ಕನ್ನಡೇತರನ್ನು ನೇಮಿಸಿಕೊಳ್ಳಲು ಸಂಸ್ಥೆಗಳು ಅನುಮತಿ ಪಡೆಯಬೇಕೆಂದು ಎಂದು ತಿಳಿಸಲಾಗಿತ್ತು,

ಆದರೆ ಇದುಯಾವದನ್ನು ಗಮನಕ್ಕೆ ತೆಗೆದುಕೊಳ್ಳದೆ ಮುಖ್ಯಮಂತ್ರಿಗಳು ವಿದಯಕಕ್ಕೆ ತಾತ್ಕಲಿಕವಾಗಿ ನೀಡಿರುತ್ತಾರೆ. ಮುಂದುವರಿದು ಖಾಸಗಿ ಕಂಪನಿಯ ಕೆಲವು ಮಾಲಿಕರು ಕರ್ನಾಟಕದ ಮೂಲ ಸೌಲಭ್ಯಗಳನ್ನು ಪಡೆದುಕೊಂಡು ಇಲ್ಲಿಯ ಗಾಳಿ, ಬೆಳಕು, ಭೂಮಿಗಳನ್ನು ತೆ- ಗೆದುಕೊಂಡು ಸ್ಥಳೀಯ ಕನ್ನಡಿಗರ ಉದ್ಯೋಗ ನೀಡುವಲ್ಲಿ ತಾರತಮ್ಯ ಮಾಡುತ್ತಿದ್ದಾರೆ.

ಇಂತಹ ಕಂಪನಿಯಯಾಗಲಿ ಮಾಲಿಕರು, ಕಾರ್ಖಾನೆಗಳು, ಕರ್ನಾಟಕದಲ್ಲಿ ಬೇಡವೇ ಬೇಡೆ, ಈ ಬಗ್ಗೆ ಮುಖ್ಯಮಂತ್ರಿಗಳು ಯಾವುದೆ ಒತ್ತಾಯಕ್ಕೆ ಮಣಿಯದೆ ಮತ್ತು ಕೇಲವು ಸಂಪುಟ ಸಂಚಿವರ ಒತ್ತಾಯಕ್ಕೆ ಮಣಿಯದೆ ಕನ್ನಡಿಗರ ಶೇ.75% ನ್ನೂ ಉದ್ಯೋಗ ಮೀಸಲಾತಿಯನ್ನು ಕೋಡಲೆ ಜಾರಿಗೆ ತರಬೇಕು ಒತ್ತಾಯಿಸಿದರು.

ಕನ್ನಡಪರ ಹೋರಾಟಗಾರ ಸ್ವಶರಣಪ್ಪ ಪಾಟೀಲ್ ಮಾತನಾಡಿದರು. ಈ ವೇಳೆ ಪದಾಧಿಕಾರಿಗಳಾದ ಭೀಮೇಶ ಬಂಡಿವಡ್ಡರ, ರಾಮನಗೌಡ ಪಾಟೀಲ್, ಶಿವಕುಮಾರ ನಿಡಗುಂದಿ, ಶ್ರೀಧರ ಸುರ- ಕೋಡ, ಮಂಜುನಾಥ ಕೆ. ವೀರೇಶ ಬಳಗೇರಿ, ಮಂಜುನಾಥ ಕಮ್ಮಾರ ಇದ್ದರು.

You may have missed

ಸಿದ್ದರಾಮಯ್ಯ: ಅರಸು ದಾಖಲೆ ಸರಿಗಟ್ಟಿದ ‘ಅಹಿಂದ’ ಚಾಣಕ್ಯ – ಜನಪರ ಆಡಳಿತದ ಹೊಸ ಪರ್ವ ​ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ದೀರ್ಘಕಾಲ ಮುಖ್ಯಮಂತ್ರಿಯಾಗಿ ರಾಜ್ಯವಾಳಿದ ಕೀರ್ತಿ ಈವರೆಗೆ ದಿವಂಗತ ಡಿ. ದೇವರಾಜ ಅರಸು (7 ವರ್ಷ 239 ದಿನಗಳು) ಅವರಿಗೆ ಸಲ್ಲುತ್ತಿತ್ತು. ಆದರೆ, ಜನವರಿ 7, 2026ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಐತಿಹಾಸಿಕ ದಾಖಲೆಯನ್ನು ಮುರಿದು, ಕರ್ನಾಟಕದ ಇತಿಹಾಸದಲ್ಲಿ ಅತಿ ಸುದೀರ್ಘ ಕಾಲ ಆಡಳಿತ ನಡೆಸಿದ ನಾಯಕನಾಗಿ ಹೊರಹೊಮ್ಮಿದ್ದಾರೆ. ಇದು ಕೇವಲ ಅಂಕಿ-ಅಂಶಗಳ ಸಾಧನೆಯಲ್ಲ, ಬದಲಿಗೆ ಅವರ ಅಚಲ ಸಿದ್ಧಾಂತ ಮತ್ತು ಜನಪ್ರಿಯತೆಯ ಪ್ರತೀಕವಾಗಿದೆ. ​ಅರಸು ಮತ್ತು ಸಿದ್ದರಾಮಯ್ಯ: ಸಮಾಜಮುಖಿ ಹೋಲಿಕೆ ​ದೇವರಾಜ ಅರಸು ಅವರು ಹೇಗೆ ಭೂ ಸುಧಾರಣೆ ಮತ್ತು ಹಿಂದುಳಿದ ವರ್ಗಗಳ ಸಬಲೀಕರಣದ ಮೂಲಕ ‘ಕರ್ನಾಟಕದ ಕ್ರಾಂತಿಕಾರಿ ನಾಯಕ’ ಎನಿಸಿಕೊಂಡರೋ, ಸಿದ್ದರಾಮಯ್ಯನವರು ‘ಅಹಿಂದ’ (ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ) ವರ್ಗಗಳ ಧ್ವನಿಯಾಗಿ ಅದೇ ಹಾದಿಯಲ್ಲಿ ಮುನ್ನಡೆದಿದ್ದಾರೆ. ಮೈಸೂರು ಮಣ್ಣಿನ ಈ ಇಬ್ಬರು ನಾಯಕರು ಶೋಷಿತ ಸಮುದಾಯಗಳಿಗೆ ರಾಜಕೀಯ ಅಸ್ತಿತ್ವ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ​ಉತ್ತಮ ಆಡಳಿತದ ಪ್ರಮುಖ ಮೈಲಿಗಲ್ಲುಗಳು ​ಸಿದ್ದರಾಮಯ್ಯನವರ ಆಡಳಿತವನ್ನು ಶ್ಲಾಘಿಸಲು ಮುಖ್ಯ ಕಾರಣ ಅವರ ‘ಜನಪರ ಯೋಜನೆಗಳು’. ಅವರ ಆಡಳಿತ ವೈಖರಿಯಲ್ಲಿ ಆರ್ಥಿಕ ಶಿಸ್ತು ಮತ್ತು ಸಾಮಾಜಿಕ ಭದ್ರತೆಯ ಸುಂದರ ಸಮನ್ವಯವಿದೆ: ​ಭಾಗ್ಯಗಳ ಸರಣಿ: ಮೊದಲ ಅವಧಿಯಲ್ಲಿ (2013-18) ಜಾರಿಗೆ ತಂದ ‘ಅನ್ನಭಾಗ್ಯ’, ‘ಕ್ಷೀರಭಾಗ್ಯ’, ‘ಇಂದಿರಾ ಕ್ಯಾಂಟೀನ್’ನಂತಹ ಯೋಜನೆಗಳು ಬಡವರ ಹಸಿವು ನೀಗಿಸುವಲ್ಲಿ ಮೈಲಿಗಲ್ಲಾದವು. ​ಪಂಚ ಗ್ಯಾರಂಟಿಗಳು: ಎರಡನೇ ಅವಧಿಯಲ್ಲಿ ಜಾರಿಗೆ ತಂದ ಐದು ಗ್ಯಾರಂಟಿಗಳು (ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ) ಇಂದು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಆಸರೆಯಾಗಿವೆ. ​ಆರ್ಥಿಕ ತಜ್ಞತೆ: ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ಅಂದರೆ 16 ಬಾರಿ ಬಜೆಟ್ ಮಂಡಿಸಿದ ಹೆಗ್ಗಳಿಕೆ ಇವರದು. ಆರ್ಥಿಕ ಕೊರತೆಯನ್ನು ಹತೋಟಿಯಲ್ಲಿಟ್ಟುಕೊಂಡು ಅಭಿವೃದ್ಧಿ ಕೆಲಸಗಳಿಗೆ ಹಣ ಮೀಸಲಿಡುವ ಇವರ ಚಾಣಕ್ಯತನ ಮೆಚ್ಚುವಂತದ್ದು. ​ನುಡಿದಂತೆ ನಡೆದ ಸರ್ಕಾರ: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಅವರು ತೋರಿದ ಬದ್ಧತೆ ಮತದಾರರಲ್ಲಿ ಅವರ ಮೇಲಿನ ವಿಶ್ವಾಸವನ್ನು ಹೆಚ್ಚಿಸಿದೆ. ​ತಳಮಟ್ಟದ ನಾಯಕತ್ವ ​ಸಿದ್ದರಾಮಯ್ಯನವರು ಯಾವುದೇ ‘ಹೈಕಮಾಂಡ್’ ನೆರಳಿನಲ್ಲದೆ, ಹಳ್ಳಿ ಹಳ್ಳಿಯ ಜನರೊಂದಿಗೆ ಬೆರೆತು ಬೆಳೆದ ನಾಯಕ. ಅವರ ನೇರ ನುಡಿ, ತರ್ಕಬದ್ಧ ಮಾತುಗಳು ಮತ್ತು ಸಂವಿಧಾನದ ಮೇಲಿನ ಗೌರವ ಅವರನ್ನು ಶ್ರೇಷ್ಠ ಸಂಸದೀಯ ಪಟುವನ್ನಾಗಿ ಮಾಡಿದೆ. ​”ಅಧಿಕಾರ ಎನ್ನುವುದು ಕೇವಲ ಕುರ್ಚಿಯಲ್ಲ, ಅದು ಬಡವರ ಕಣ್ಣೀರು ಒರೆಸುವ ಅವಕಾಶ” ಎಂಬ ಸಿದ್ಧಾಂತದೊಂದಿಗೆ ಅವರು ಮುನ್ನಡೆಯುತ್ತಿರುವುದು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ. ​ಸಮಾರೋಪ ​ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಸಿದ್ದರಾಮಯ್ಯನವರು, ಕರ್ನಾಟಕದ ಸಾಮಾಜಿಕ ನಕ್ಷೆಯಲ್ಲಿ ತಮ್ಮದೇ ಆದ ಅಳಿಸಲಾಗದ ಛಾಪನ್ನು ಒತ್ತಿದ್ದಾರೆ. ಅವರ ಈ ಪಯಣ ಕೇವಲ ಸುದೀರ್ಘ ಅವಧಿಯದ್ದಷ್ಟೇ ಅಲ್ಲದೆ, ‘ಸಮ ಸಮಾಜ’ದ ನಿರ್ಮಾಣದ ಹಾದಿಯಲ್ಲಿ ಒಂದು ಭರವಸೆಯ ನಡಿಗೆಯಾಗಿದೆ.

error: Content is protected !!