ಬೆಂಗಳೂರು: ಸಾರಿಗೆ ಬಸ್ಸುಗಳಲ್ಲಿ ಮಹಿಳೆಯರ ಉಚಿತ ಪ್ರಯಾಣ ಕಲ್ಪಿಸುವಂತ ಶಕ್ತಿ ಯೋಜನೆ ಆರಂಭಗೊಂಡಿದೆ. ಈ ಬೆನ್ನಲ್ಲೆ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ ಮುಂಗಡ ಟಿಕೆಟ್ ಕಾಯ್ದಿರಿಸುವ ಸೌಲಭ್ಯವನ್ನು ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಕಲ್ಪಿಸಿದೆ.
ಇದಲ್ಲದೆ ಎಷ್ಟು ಬಸ್ಸುಗಳಲ್ಲಿ ಮಹಿಳೆಯರು ಓಡಾಡಬಹುದು ಎನ್ನುವ ಬಗ್ಗೆ ಮುಂದೆ ಓದಿ.
ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಹಿಳಾ ಸಬಲೀಕರಣದತ್ತ ದಿಟ್ಟ ಹೆಜ್ಜೆಯ ಶಕ್ತಿ ಯೋಜನೆಗೆ ( Shakti Scheme ) ಚಾಲನೆ ನೀಡಿರುವ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಗೆ ಚಾಲನೆ ನೀಡಿದರು ಎಂದು ತಿಳಿಸಿದೆ.
ಯೋಜನೆಯ ಪ್ರಮುಖ ಅಂಶಗಳು
ಕರ್ನಾಟಕ ರಾಜ್ಯದ ಎಲ್ಲಾ ಮಹಿಳೆಯರು ಈ ಸೌಲಭ್ಯ ಪಡೆಯಲು ಅರ್ಹರು. ಶಕ್ತಿ ಯೋಜನೆಯ ಸೌಲಭ್ಯವನ್ನು ಪ್ರತಿನಿತ್ಯ ರಾಜ್ಯದ 41.81 ಲಕ್ಷ ಮಹಿಳೆಯರು ( 11.58 ಲಕ್ಷ ಪಾಸ್ ಪ್ರಯಾಣಿಕರು ಸೇರಿದಂತೆ) ಪಡೆಯುವವರು ಎಂದು ಅಂದಾಜಿಸಲಾಗಿದೆ.
ರಾಜ್ಯದೊಳಗಿನ ಪ್ರಯಾಣಕ್ಕೆ ಮಾತ್ರ ಅನ್ವಯಿಸಲಿದೆ. ಅಂತರರಾಜ್ಯ ಪ್ರಯಾಣಕ್ಕೆ ಅವಕಾಶವಿಲ್ಲ. ಆದಾಗ್ಯೂ ಅಂತರರಾಜ್ಯ ಮಾರ್ಗಗಳಲ್ಲಿ ಆಚರಣೆಯಾಗುತ್ತಿರುವ Enclave and Solitary Routes ಸಾರಿಗೆಗಳಲ್ಲಿ ರಾಜ್ಯದೊಳಗೆ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣ ಸೌಲಭ್ಯ ಒದಗಿಸಲಾಗಿದೆ.
ಎಷ್ಟು ಬಸ್ಸುಗಳಲ್ಲಿ ಮಹಿಳೆಯರು ಪ್ರಯಾಣಿಸಲು ಅವಕಾಶ ಗೊತ್ತಾ?
ರಾಜ್ಯದ 6308 ನಗರ, 5958 ಸಾಮಾನ್ಯ ಹಾಗೂ 3943 ವೇಗದೂತ ಬಸ್ಸುಗಳು ಸೇರಿದಂತೆ ಒಟ್ಟು 18,609 ಬಸ್ಸುಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬುಹುದು. ಐಷಾರಾಮಿ ಸಾರಿಗೆಗಳಲ್ಲಿ ಈ ಸೌಲಭ್ಯ ಇರುವುದಿಲ್ಲ.
ಇಟಿಎಂ ತಂತ್ರಾಂಶದಲ್ಲಿ ಉಚಿತ ಟಿಕೆಟ್ ವಿತರಣೆಗೆ ಅಗತ್ಯ ಮಾರ್ಪಾಡುಗಳನ್ನು ಮಾಡಿದ್ದು, ಸಿಬ್ಬಂದಿಗಳಿಗೆ ತರಬೇತಿಯನ್ನು ನೀಡಲಾಗಿದೆ
ಗುರುತಿನ ಚೀಟಿ ಪರಿಶೀಲನೆ ನಡೆಸಿ, ಶೂನ್ಯ ಟಿಕೆಟ್ ವಿತರಿಸಲಾಗುವುದು. ಅನಿವಾರ್ಯ ಸಂದರ್ಭಗಳಲ್ಲಿ ಇಟಿಎಂ ನಲ್ಲಿ ತಾಂತ್ರಿಕ ದೋಷ ಕಂಡುಬಂದಲ್ಲಿ ಮ್ಯಾನುಯಲ್ ರೀತ್ಯಾ ಪಿಂಕ್ ಟಿಕೆಟ್ ವಿತರಿಸಲು ಕ್ರಮ ವಹಿಸಲಾಗುವುದು.
ಯೋಜನೆಯ ವೆಚ್ಚವನ್ನು ಇಟಿಎಂಗಳಿಂದ ವಿತರಿಸಲಾದ ಶೂನ್ಯ ಟಿಕೆಟ್, ಶಕ್ತಿ ಸ್ಮಾರ್ಟ್ ಕಾರ್ಡ್ ದತ್ತಾಂಶವನ್ನು ಆಧರಿಸಿ, ನಿಗಮಗಳಿಗೆ ಭರಿಸಲಾಗುವುದು.
ಸೇವಾಸಿಂಧು ತಂತ್ರಾಂಶದ ಮೂಲಕ ಜೂನ್.15ರಿಂದ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ಮುಂದಿನ ಮೂರು ತಿಂಗಳೊಳಗೆ ಶಕ್ತಿ ಸ್ಮಾರ್ಟ್ ಕಾರ್ಡ್ ಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಲಿದೆ.
ಶಕ್ತಿ ಸ್ಮಾರ್ಟ್ ಕಾರ್ಡ್ ವಿತರಣೆವರೆಗೂ ಗುರುತಿನ ಚೀಟಿ ತೋರಿಸಿ ಮಹಿಳೆಯರು ಸಾರಿಗೆ ಬಸ್ಸುಗಳಲ್ಲಿ ಪ್ರಯಾಣಿಸಬಹುದಾಗಿದೆ.
ಶಕ್ತಿ ಯೋಜನೆಯಡಿ ಮುಂಗಡ ಟಿಕೆಟ್ ಬುಕ್ಕಿಂಗ್ ಗೂ ಅವಕಾಶ
ಇನ್ನೂ ಇಂದು ಚಾಲನೆಗೊಂಡ ಶಕ್ತಿ ಯೋಜನೆಯ ಅಡಿಯಲ್ಲಿ ಮಹಿಳೆಯರು ಮುಂಗಡವಾಗಿ ಟಿಕೆಟ್ ಬುಕ್ಕಿಂಗ್ ಮಾಡಿ, ಪ್ರಯಾಣಿಸುವುದಕ್ಕೂ ಅವಕಾಶ ನೀಡಲಾಗಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ KSRTC ಮುಂಗಡ ಬುಕ್ಕಿಂಗ್ ಸೌಲಭ್ಯವಿರುವ ಬಸ್ಸುಗಳಲ್ಲಿ ಮಹಿಳೆಯರಿಗೆ ಮುಂಗಡ ಆಸನ ಕಾಯ್ದಿರಿಸಲು ಅವಕಾಶ ಕಲ್ಪಿಸಿ, ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದೆ.

More Stories
ಗ್ರಾಮ ಪಂಚಾಯಿತಿಗಳಲ್ಲಿ ಇನ್ನು ಆಡಳಿತಾಧಿಕಾರಿ ಪಾರುಪತ್ಯ: ಸರ್ಕಾರದ ಅಧಿಕೃತ ಆದೇಶ
ಸಿದ್ದರಾಮಯ್ಯ: ಅರಸು ದಾಖಲೆ ಸರಿಗಟ್ಟಿದ ‘ಅಹಿಂದ’ ಚಾಣಕ್ಯ – ಜನಪರ ಆಡಳಿತದ ಹೊಸ ಪರ್ವ ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ದೀರ್ಘಕಾಲ ಮುಖ್ಯಮಂತ್ರಿಯಾಗಿ ರಾಜ್ಯವಾಳಿದ ಕೀರ್ತಿ ಈವರೆಗೆ ದಿವಂಗತ ಡಿ. ದೇವರಾಜ ಅರಸು (7 ವರ್ಷ 239 ದಿನಗಳು) ಅವರಿಗೆ ಸಲ್ಲುತ್ತಿತ್ತು. ಆದರೆ, ಜನವರಿ 7, 2026ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಐತಿಹಾಸಿಕ ದಾಖಲೆಯನ್ನು ಮುರಿದು, ಕರ್ನಾಟಕದ ಇತಿಹಾಸದಲ್ಲಿ ಅತಿ ಸುದೀರ್ಘ ಕಾಲ ಆಡಳಿತ ನಡೆಸಿದ ನಾಯಕನಾಗಿ ಹೊರಹೊಮ್ಮಿದ್ದಾರೆ. ಇದು ಕೇವಲ ಅಂಕಿ-ಅಂಶಗಳ ಸಾಧನೆಯಲ್ಲ, ಬದಲಿಗೆ ಅವರ ಅಚಲ ಸಿದ್ಧಾಂತ ಮತ್ತು ಜನಪ್ರಿಯತೆಯ ಪ್ರತೀಕವಾಗಿದೆ. ಅರಸು ಮತ್ತು ಸಿದ್ದರಾಮಯ್ಯ: ಸಮಾಜಮುಖಿ ಹೋಲಿಕೆ ದೇವರಾಜ ಅರಸು ಅವರು ಹೇಗೆ ಭೂ ಸುಧಾರಣೆ ಮತ್ತು ಹಿಂದುಳಿದ ವರ್ಗಗಳ ಸಬಲೀಕರಣದ ಮೂಲಕ ‘ಕರ್ನಾಟಕದ ಕ್ರಾಂತಿಕಾರಿ ನಾಯಕ’ ಎನಿಸಿಕೊಂಡರೋ, ಸಿದ್ದರಾಮಯ್ಯನವರು ‘ಅಹಿಂದ’ (ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ) ವರ್ಗಗಳ ಧ್ವನಿಯಾಗಿ ಅದೇ ಹಾದಿಯಲ್ಲಿ ಮುನ್ನಡೆದಿದ್ದಾರೆ. ಮೈಸೂರು ಮಣ್ಣಿನ ಈ ಇಬ್ಬರು ನಾಯಕರು ಶೋಷಿತ ಸಮುದಾಯಗಳಿಗೆ ರಾಜಕೀಯ ಅಸ್ತಿತ್ವ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಉತ್ತಮ ಆಡಳಿತದ ಪ್ರಮುಖ ಮೈಲಿಗಲ್ಲುಗಳು ಸಿದ್ದರಾಮಯ್ಯನವರ ಆಡಳಿತವನ್ನು ಶ್ಲಾಘಿಸಲು ಮುಖ್ಯ ಕಾರಣ ಅವರ ‘ಜನಪರ ಯೋಜನೆಗಳು’. ಅವರ ಆಡಳಿತ ವೈಖರಿಯಲ್ಲಿ ಆರ್ಥಿಕ ಶಿಸ್ತು ಮತ್ತು ಸಾಮಾಜಿಕ ಭದ್ರತೆಯ ಸುಂದರ ಸಮನ್ವಯವಿದೆ: ಭಾಗ್ಯಗಳ ಸರಣಿ: ಮೊದಲ ಅವಧಿಯಲ್ಲಿ (2013-18) ಜಾರಿಗೆ ತಂದ ‘ಅನ್ನಭಾಗ್ಯ’, ‘ಕ್ಷೀರಭಾಗ್ಯ’, ‘ಇಂದಿರಾ ಕ್ಯಾಂಟೀನ್’ನಂತಹ ಯೋಜನೆಗಳು ಬಡವರ ಹಸಿವು ನೀಗಿಸುವಲ್ಲಿ ಮೈಲಿಗಲ್ಲಾದವು. ಪಂಚ ಗ್ಯಾರಂಟಿಗಳು: ಎರಡನೇ ಅವಧಿಯಲ್ಲಿ ಜಾರಿಗೆ ತಂದ ಐದು ಗ್ಯಾರಂಟಿಗಳು (ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ) ಇಂದು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಆಸರೆಯಾಗಿವೆ. ಆರ್ಥಿಕ ತಜ್ಞತೆ: ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ಅಂದರೆ 16 ಬಾರಿ ಬಜೆಟ್ ಮಂಡಿಸಿದ ಹೆಗ್ಗಳಿಕೆ ಇವರದು. ಆರ್ಥಿಕ ಕೊರತೆಯನ್ನು ಹತೋಟಿಯಲ್ಲಿಟ್ಟುಕೊಂಡು ಅಭಿವೃದ್ಧಿ ಕೆಲಸಗಳಿಗೆ ಹಣ ಮೀಸಲಿಡುವ ಇವರ ಚಾಣಕ್ಯತನ ಮೆಚ್ಚುವಂತದ್ದು. ನುಡಿದಂತೆ ನಡೆದ ಸರ್ಕಾರ: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಅವರು ತೋರಿದ ಬದ್ಧತೆ ಮತದಾರರಲ್ಲಿ ಅವರ ಮೇಲಿನ ವಿಶ್ವಾಸವನ್ನು ಹೆಚ್ಚಿಸಿದೆ. ತಳಮಟ್ಟದ ನಾಯಕತ್ವ ಸಿದ್ದರಾಮಯ್ಯನವರು ಯಾವುದೇ ‘ಹೈಕಮಾಂಡ್’ ನೆರಳಿನಲ್ಲದೆ, ಹಳ್ಳಿ ಹಳ್ಳಿಯ ಜನರೊಂದಿಗೆ ಬೆರೆತು ಬೆಳೆದ ನಾಯಕ. ಅವರ ನೇರ ನುಡಿ, ತರ್ಕಬದ್ಧ ಮಾತುಗಳು ಮತ್ತು ಸಂವಿಧಾನದ ಮೇಲಿನ ಗೌರವ ಅವರನ್ನು ಶ್ರೇಷ್ಠ ಸಂಸದೀಯ ಪಟುವನ್ನಾಗಿ ಮಾಡಿದೆ. ”ಅಧಿಕಾರ ಎನ್ನುವುದು ಕೇವಲ ಕುರ್ಚಿಯಲ್ಲ, ಅದು ಬಡವರ ಕಣ್ಣೀರು ಒರೆಸುವ ಅವಕಾಶ” ಎಂಬ ಸಿದ್ಧಾಂತದೊಂದಿಗೆ ಅವರು ಮುನ್ನಡೆಯುತ್ತಿರುವುದು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ. ಸಮಾರೋಪ ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಸಿದ್ದರಾಮಯ್ಯನವರು, ಕರ್ನಾಟಕದ ಸಾಮಾಜಿಕ ನಕ್ಷೆಯಲ್ಲಿ ತಮ್ಮದೇ ಆದ ಅಳಿಸಲಾಗದ ಛಾಪನ್ನು ಒತ್ತಿದ್ದಾರೆ. ಅವರ ಈ ಪಯಣ ಕೇವಲ ಸುದೀರ್ಘ ಅವಧಿಯದ್ದಷ್ಟೇ ಅಲ್ಲದೆ, ‘ಸಮ ಸಮಾಜ’ದ ನಿರ್ಮಾಣದ ಹಾದಿಯಲ್ಲಿ ಒಂದು ಭರವಸೆಯ ನಡಿಗೆಯಾಗಿದೆ.
ಸಾಧಕ ಶಿವು ಸಣ್ಣಗೌಡ್ರಿಗೆ ರಾಜ್ಯಮಟ್ಟದ ‘ಕನ್ನಡ ಕವಿರತ್ನ’ ಪ್ರಶಸ್ತಿ ಗೌರವ