ಜಾತಿ ನಿಂದನೆ ಉದ್ದೇಶವಿದ್ದರೆ ಮಾತ್ರ ಅಟ್ರಾಸಿಟಿ ಕಾಯ್ದೆ ಅನ್ವಯ- ಸುಪ್ರೀಂಕೋರ್ಟ್

ಜಾತಿ ನಿಂದನೆ ಉದ್ದೇಶವಿದ್ದರೆ ಮಾತ್ರ ಅಟ್ರಾಸಿಟಿ ಕಾಯ್ದೆ ಅನ್ವಯ- ಸುಪ್ರೀಂಕೋರ್ಟ್

ಕೊಡತಗೇರಿ ಎಕ್ಸ್‌ಪ್ರೆಸ್‌ ಸುದ್ದಿ

ನವದೆಹಲಿ,: ಜಾತಿ ನಿಂದನೆಯ ಉದ್ದೇಶವಿದ್ದರೆ ಮಾತ್ರ ಅಟ್ರಾಸಿಟಿ ಕಾಯ್ದೆ ಅನ್ವಯವಾಗುತ್ತದೆ. ಜಾತಿಯ ಆಧಾರದಲ್ಲಿ ಅವಮಾನ ಮಾಡುವ ಉದ್ದೇಶವಿಲ್ಲದೆ ದೂರುದಾರ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದ್ದ ಮಾತ್ರಕ್ಕೆ ಪ್ರಕರಣವನ್ನು ಎಸ್ಸಿ, ಎಸ್ಡಿ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಿಸಿಕೊಳ್ಳಲಾಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಶಾಸಕ ಪಿ.ವಿ.ಶ್ರೀನಿಜಿನ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಮಲಯಾಳಂ ಯೂಟ್ಯೂಬ್ ಸುದ್ದಿ ವಾಹಿನಿ ‘ಮರುನಾಡನ್ ಮಲಯಾಳಿ’ ಸಂಪಾದಕ ಶಾಜನ್ ಸ್ಕರಿಯಾ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ನ್ಯಾಯಮೂರ್ತಿ ಜೆ.ಬಿ.ಪರ್ಡಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರ ನ್ಯಾಯಪೀಠ ಈ ಆದೇಶ ನೀಡಿದೆ.
ಶಾಸಕ ಪಿ.ವಿ. ಶ್ರೀನಿಜನ್ ತಮ್ಮ ಮೇಲೆ ದಾಖಲಿಸಿದ್ದ ಎಸ್ಸಿ ಎಸ್ಡಿ ದೌರ್ಜನ್ಯ ಕಾಯ್ದೆ ದುರುದ್ಧೇಶಪೂರಿತವಾಗಿದೆ. ನನ್ನ ಮೇಲೆ ಸುಳ್ಳು ಆರೋಪ ಹೊರಿಸಲಾಗಿದೆ ಎ೦ದು ಯೂಟ್ಯೂಬರ್, ಮರುನಾಡನ್ ಮಲಯಾಳಿ ಸಂಪಾದಕ ಶಾಜನ್ ಸ್ಕಾರಿಯಾ ಈ ಹಿಂದೆ ಕೇರಳ ಹೈಕೋರ್ಟ್ ಮೊರೆ ಹೋಗಿದ್ದು, ಹೈಕೋರ್ಟ್ ಜಾಮೀನು ತಿರಸ್ಕರಿಸಿದ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಇದೀಗ ಶಾಜನ್ ಸ್ಕಾರಿಯಾ ಜಾಮೀನು ಮಂಜೂರು ಮಾಡಿರುವ ನ್ಯಾಯಪೀಠ, ಜಾತಿಯ ಆಧಾರದಲ್ಲಿ ಅವಮಾನ ಮಾಡುವ ಉದ್ದೇಶ ಇರದೇ ದೂರುದಾರ ಪರಿಶಿಷ್ಟ ಜಾತಿ (ಎಸ್ಸಿ) ಅಥವಾ ಪರಿಶಿಷ್ಟ ಪಂಗಡ (ಎಸ್ಟಿ) ಸದಸ್ಯರನ್ನು ಅವಮಾನಿಸುವುದು ಎಸ್ಸಿ ಮತ್ತು ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆ, 1989 ರ ಅಡಿಯಲ್ಲಿ ಅಪರಾಧವಲ್ಲ. ಅಸ್ಪೃಶ್ಯತೆ, ಜಾತಿ ತಾರತಮ್ಯ, ಪಾವಿತ್ಯತೆಗಳ ಆಧಾರದಲ್ಲಿ ಉದ್ದೇಶಪೂರ್ವಕವಾಗಿ ಅವಮಾನವಾಗಿದ್ದಲ್ಲಿ1989ರ ಕಾಯ್ದೆಯಡಿ ಪರಿಗಣಿಸಬಹುದು ಎಂದು ತಿಳಿಸಿದೆ.

ಸೆಕ್ಷನ್ 3 (1) (ಆರ್) ಅಡಿಯಲ್ಲಿ “ಅವಮಾನಿಸುವ ಉದ್ದೇಶ” (ಸಾರ್ವಜನಿಕ ದೃಷ್ಟಿಕೋನದಲ್ಲಿ ಎಸ್ಸಿ / ಎಸ್ಟಿ ಸದಸ್ಯರನ್ನು ಅವಮಾನಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ ಅಥವಾ ಬೆದರಿಕೆ) ಎಂಬ ಪದಗುಚ್ಛವು ಉದ್ದೇಶಪೂರ್ವಕ ಅವಮಾನ ಅಥವಾ ಬೆದರಿಕೆಗೆ ಒಳಗಾದ ವ್ಯಕ್ತಿಯ ಜಾತಿ ಗುರುತಿನೊಂದಿಗೆ ನಿಕಟ ಸಂಬಂಧ ಹೊಂದಿದೆ ಎಂದು ನ್ಯಾಯಾಲಯ ವಿವರಿಸಿದೆ.

ಕೃಪೆ

ಲಾಗೈಡ್ ಕಾನೂನು ಮಾಸಪತ್ರಿಕೆ

You may have missed

ಸಿದ್ದರಾಮಯ್ಯ: ಅರಸು ದಾಖಲೆ ಸರಿಗಟ್ಟಿದ ‘ಅಹಿಂದ’ ಚಾಣಕ್ಯ – ಜನಪರ ಆಡಳಿತದ ಹೊಸ ಪರ್ವ ​ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ದೀರ್ಘಕಾಲ ಮುಖ್ಯಮಂತ್ರಿಯಾಗಿ ರಾಜ್ಯವಾಳಿದ ಕೀರ್ತಿ ಈವರೆಗೆ ದಿವಂಗತ ಡಿ. ದೇವರಾಜ ಅರಸು (7 ವರ್ಷ 239 ದಿನಗಳು) ಅವರಿಗೆ ಸಲ್ಲುತ್ತಿತ್ತು. ಆದರೆ, ಜನವರಿ 7, 2026ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಐತಿಹಾಸಿಕ ದಾಖಲೆಯನ್ನು ಮುರಿದು, ಕರ್ನಾಟಕದ ಇತಿಹಾಸದಲ್ಲಿ ಅತಿ ಸುದೀರ್ಘ ಕಾಲ ಆಡಳಿತ ನಡೆಸಿದ ನಾಯಕನಾಗಿ ಹೊರಹೊಮ್ಮಿದ್ದಾರೆ. ಇದು ಕೇವಲ ಅಂಕಿ-ಅಂಶಗಳ ಸಾಧನೆಯಲ್ಲ, ಬದಲಿಗೆ ಅವರ ಅಚಲ ಸಿದ್ಧಾಂತ ಮತ್ತು ಜನಪ್ರಿಯತೆಯ ಪ್ರತೀಕವಾಗಿದೆ. ​ಅರಸು ಮತ್ತು ಸಿದ್ದರಾಮಯ್ಯ: ಸಮಾಜಮುಖಿ ಹೋಲಿಕೆ ​ದೇವರಾಜ ಅರಸು ಅವರು ಹೇಗೆ ಭೂ ಸುಧಾರಣೆ ಮತ್ತು ಹಿಂದುಳಿದ ವರ್ಗಗಳ ಸಬಲೀಕರಣದ ಮೂಲಕ ‘ಕರ್ನಾಟಕದ ಕ್ರಾಂತಿಕಾರಿ ನಾಯಕ’ ಎನಿಸಿಕೊಂಡರೋ, ಸಿದ್ದರಾಮಯ್ಯನವರು ‘ಅಹಿಂದ’ (ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ) ವರ್ಗಗಳ ಧ್ವನಿಯಾಗಿ ಅದೇ ಹಾದಿಯಲ್ಲಿ ಮುನ್ನಡೆದಿದ್ದಾರೆ. ಮೈಸೂರು ಮಣ್ಣಿನ ಈ ಇಬ್ಬರು ನಾಯಕರು ಶೋಷಿತ ಸಮುದಾಯಗಳಿಗೆ ರಾಜಕೀಯ ಅಸ್ತಿತ್ವ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ​ಉತ್ತಮ ಆಡಳಿತದ ಪ್ರಮುಖ ಮೈಲಿಗಲ್ಲುಗಳು ​ಸಿದ್ದರಾಮಯ್ಯನವರ ಆಡಳಿತವನ್ನು ಶ್ಲಾಘಿಸಲು ಮುಖ್ಯ ಕಾರಣ ಅವರ ‘ಜನಪರ ಯೋಜನೆಗಳು’. ಅವರ ಆಡಳಿತ ವೈಖರಿಯಲ್ಲಿ ಆರ್ಥಿಕ ಶಿಸ್ತು ಮತ್ತು ಸಾಮಾಜಿಕ ಭದ್ರತೆಯ ಸುಂದರ ಸಮನ್ವಯವಿದೆ: ​ಭಾಗ್ಯಗಳ ಸರಣಿ: ಮೊದಲ ಅವಧಿಯಲ್ಲಿ (2013-18) ಜಾರಿಗೆ ತಂದ ‘ಅನ್ನಭಾಗ್ಯ’, ‘ಕ್ಷೀರಭಾಗ್ಯ’, ‘ಇಂದಿರಾ ಕ್ಯಾಂಟೀನ್’ನಂತಹ ಯೋಜನೆಗಳು ಬಡವರ ಹಸಿವು ನೀಗಿಸುವಲ್ಲಿ ಮೈಲಿಗಲ್ಲಾದವು. ​ಪಂಚ ಗ್ಯಾರಂಟಿಗಳು: ಎರಡನೇ ಅವಧಿಯಲ್ಲಿ ಜಾರಿಗೆ ತಂದ ಐದು ಗ್ಯಾರಂಟಿಗಳು (ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ) ಇಂದು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಆಸರೆಯಾಗಿವೆ. ​ಆರ್ಥಿಕ ತಜ್ಞತೆ: ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ಅಂದರೆ 16 ಬಾರಿ ಬಜೆಟ್ ಮಂಡಿಸಿದ ಹೆಗ್ಗಳಿಕೆ ಇವರದು. ಆರ್ಥಿಕ ಕೊರತೆಯನ್ನು ಹತೋಟಿಯಲ್ಲಿಟ್ಟುಕೊಂಡು ಅಭಿವೃದ್ಧಿ ಕೆಲಸಗಳಿಗೆ ಹಣ ಮೀಸಲಿಡುವ ಇವರ ಚಾಣಕ್ಯತನ ಮೆಚ್ಚುವಂತದ್ದು. ​ನುಡಿದಂತೆ ನಡೆದ ಸರ್ಕಾರ: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಅವರು ತೋರಿದ ಬದ್ಧತೆ ಮತದಾರರಲ್ಲಿ ಅವರ ಮೇಲಿನ ವಿಶ್ವಾಸವನ್ನು ಹೆಚ್ಚಿಸಿದೆ. ​ತಳಮಟ್ಟದ ನಾಯಕತ್ವ ​ಸಿದ್ದರಾಮಯ್ಯನವರು ಯಾವುದೇ ‘ಹೈಕಮಾಂಡ್’ ನೆರಳಿನಲ್ಲದೆ, ಹಳ್ಳಿ ಹಳ್ಳಿಯ ಜನರೊಂದಿಗೆ ಬೆರೆತು ಬೆಳೆದ ನಾಯಕ. ಅವರ ನೇರ ನುಡಿ, ತರ್ಕಬದ್ಧ ಮಾತುಗಳು ಮತ್ತು ಸಂವಿಧಾನದ ಮೇಲಿನ ಗೌರವ ಅವರನ್ನು ಶ್ರೇಷ್ಠ ಸಂಸದೀಯ ಪಟುವನ್ನಾಗಿ ಮಾಡಿದೆ. ​”ಅಧಿಕಾರ ಎನ್ನುವುದು ಕೇವಲ ಕುರ್ಚಿಯಲ್ಲ, ಅದು ಬಡವರ ಕಣ್ಣೀರು ಒರೆಸುವ ಅವಕಾಶ” ಎಂಬ ಸಿದ್ಧಾಂತದೊಂದಿಗೆ ಅವರು ಮುನ್ನಡೆಯುತ್ತಿರುವುದು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ. ​ಸಮಾರೋಪ ​ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಸಿದ್ದರಾಮಯ್ಯನವರು, ಕರ್ನಾಟಕದ ಸಾಮಾಜಿಕ ನಕ್ಷೆಯಲ್ಲಿ ತಮ್ಮದೇ ಆದ ಅಳಿಸಲಾಗದ ಛಾಪನ್ನು ಒತ್ತಿದ್ದಾರೆ. ಅವರ ಈ ಪಯಣ ಕೇವಲ ಸುದೀರ್ಘ ಅವಧಿಯದ್ದಷ್ಟೇ ಅಲ್ಲದೆ, ‘ಸಮ ಸಮಾಜ’ದ ನಿರ್ಮಾಣದ ಹಾದಿಯಲ್ಲಿ ಒಂದು ಭರವಸೆಯ ನಡಿಗೆಯಾಗಿದೆ.

error: Content is protected !!