ಸ್ನೇಹಮಯಿ ಕೃಷ್ಣ ರೌಡಿಶೀಟರ್: ಸಿಎಂ ಕೇಸ್ ನಲ್ಲಿ ಅವರ ಕಡೆಯವರು 100 ಕೋಟಿ ಡೀಲ್ ಗೆ ಬಂದಿದ್ರು -ಎಂ.ಲಕ್ಷ್ಮಣ್
ಕೊಡತಗೇರಿ Express ಸುದ್ದಿ
ಮೈಸೂರು,ಆಗಸ್ಟ್,28,2024 (www.kodatageriexpress): ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ತಮ್ಮ ವಿರುದ್ದ ದೂರು ದಾಖಲು ಮಾಡಿದ ಆರ್ ಟಿಐ ಕಾರ್ಯಕರ್ತ ಸ್ನೇಹಮಯಿಕೃಷ್ಣ ವಿರುದ್ದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಗಂಭೀರ ಆರೋಪ ಮಾಡಿದ್ದಾರೆ.
ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಸ್ನೇಹಮಯಿಕೃಷ್ಣ ಹಿನ್ನೆಲೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಎಂ. ಲಕ್ಷ್ಮಣ್, ಸ್ನೇಹಮಯಿ ಕೃಷ್ಣ ಒಬ್ಬ ಬ್ಲಾಕ್ ಮೇಲರ್ , ರೌಡಿಶೀಟರ್. ಸ್ನೇಹಮಯಿ ಕೃಷ್ಣ ಅವರನ್ನು ಅಡ್ಜಸ್ಟ್ ಮಾಡಿಕೊಳ್ಳಿ ಸರ್ ಅಂತ ಮೆಸೇಜ್ ಮಾಡಿದ್ದರು.
ಆ ವ್ಯಕ್ತಿ ಯಾರು ಅಂತ ನಾನು ಹೇಳಲ್ಲ 100 ಕೋಟಿ ಕೊಡಿ ಅಂದರು. ನಾನು ತಪ್ಪೇ ಇಲ್ಲದೇ ನಾವು ಯಾಕೆ ಹಣ ಕೊಡಬೇಕು ಅಂತ ಹೇಳಿದವು. ಈ ಮಾತು ಯಾರು ಹೇಳಿದ್ರು ಅಂತ ನಾನು ಮುಂದಿನ ದಿನಗಳಲ್ಲಿ ಹೇಳುತ್ತೇನೆ. ಸಿಎಂ ಕೇಸ್ ನಲ್ಲಿ 100 ಕೋಟಿ ಡೀಲ್ ಗೆ ಬಂದಿದ್ದರು. ಸ್ನೇಹಮಯಿ ಕೃಷ್ಣ ಕಡೆಯವರು ನನ್ನ ಹತ್ತಿರ ಬಂದಿದ್ದರು ಎಂದು ಗಂಭೀರ ಆರೋಪ ಮಾಡಿದರು.ಈ ಹಿಂದೆಯೂ ಇಂತಹ ಅನೇಕ ಕೇಸ್ ಗಳನ್ನು ಇದೇ ರೀತಿ ಮಾಡಿದ್ದಾನೆ ಈ ಬಗ್ಗೆ ದಾಖಲೆ ಇಲ್ಲ, ಇನ್ನೂ ದೂರು ಕೂಡ ಕೊಟ್ಟಿಲ್ಲ ಮುಂದಿನ ದಿನ ಅದೇ ವ್ಯಕ್ತಿಯನ್ನು ಕರೆದುಕೊಂಡು ಬಂದು ಸುದ್ದಿಗೋಷ್ಠಿ ಮಾಡಿಸುತ್ತೇನೆ ಎಂದು ಎಂ. ಲಕ್ಷ್ಮಣ್ ತಿಳಿಸಿದರು.

More Stories
ರಾಜ್ಯದಲ್ಲಿ ಎಲೆಕ್ಷನ್ ಹಬ್ಬ: ಮೇ ತಿಂಗಳಲ್ಲಿ ಪಂಚಾಯತ್ ಚುನಾವಣೆ ಖಚಿತ!
ರಾಜ್ಯ ವಕೀಲರ ಪರಿಷತ್ ಚುನಾವಣೆ: ಬೆಳಗಾವಿಯ ಹಿರಿಯ ವಕೀಲ ಶಿವಪ್ಪ ಸಾದೆಪ್ಪ ಕಿವಾಡಸಣ್ಣವರ ಸ್ಪರ್ಧೆ
ಗ್ರಾಮ ಸಮರಕ್ಕೆ ಮುಹೂರ್ತ ಫಿಕ್ಸ್: ಏಪ್ರಿಲ್-ಮೇ ತಿಂಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ