ಶಾಲೆಗಾಗಿ ಪಡೆದ ಸಿಎ ಸೈಟ್‌ನಲ್ಲಿ ಧಮ್ ಬಿರಿಯಾನಿ ಹೋಟೆಲ್! ಛಲವಾದಿ ನಾರಾಯಣ ಸ್ವಾಮಿ ವಿರುದ್ಧ ಆರೋಪ
ಕೊಡತಗೇರಿ express ಸುದ್ದಿ
CA Site controversy – ಸಚಿವ ಎಂಬಿ ಪಾಟೀಲ್ ವಿರುದ್ಧ ಸರ್ಕಾರಿ ಭೂಮಿ ದುರ್ಬಳಕೆ ಬಗ್ಗೆ ವಿಧಾನ ಪರಿಷತ್ ವಿಪಕ್ಷಗಳ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸೆ. 2ರಂದು ದಾಖಲೆಗಳನ್ನು ಬಿಡುಗಡೆ ಮಾಡಿದ್ದರು. ಅದರ ಮರುದಿನವೇ, ವಿಧಾನ ಪರಿಷತ್ ನಲ್ಲಿರುವ ಕಾಂಗ್ರೆಸ್ ಸದಸ್ಯರ ನಿಯೋಗವೊಂದು ರಾಜ್ಯಪಾಲರಿಗೆ ದೂರು ಸಲ್ಲಿಸಿದೆ. ಹೊಸಕೋಟೆಯಲ್ಲಿ ಸಿಎ ಸೈಟೊಂದನ್ನು ಶಾಲೆ ಕಟ್ಟುವುದಾಗಿ ಹೇಳಿ ಪಡೆದಿದ್ದ ನಾರಾಯಣಸ್ವಾಮಿಯವರು ಅಲ್ಲಿ ಧಮ್ ಬಿರಿಯಾನಿ ಹೋಟೆಲ್ ನಡೆಸುತ್ತಿದ್ದಾರೆಂದು
ಆರೋಪಿಸಲಾಗಿದೆ
ಬೆಂಗಳೂರು: ಶಿಕ್ಷಣ ಉದ್ದೇಶಕ್ಕಾಗಿ ಪಡೆದುಕೊಂಡು ಹೌಸಿಂಗ್ ಬೋರ್ಡ್‌ನಲ್ಲಿರುವ ಸಿ.ಎ ಸೈಟ್‌ನಲ್ಲಿ ಧಮ್ ಬಿರಿಯಾನಿ ಹೋಟೆಲ್ ನಡೆಸಲು ಬಾಡಿಗೆ ಕೊಡಲಾಗಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ವಿರುದ್ಧ ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತಾಗಿ ರಾಜ್ಯಪಾಲರಿಗೆ ವಿಧಾನಪರಿಷತ್ ಸದಸ್ಯರನ್ನು ಒಳಗೊಂಡ ಕಾಂಗ್ರೆಸ್ ನಿಯೋಗ ದೂರು ನೀಡಿದೆ.
ಹೌಸಿಂಗ್ ಬೋರ್ಡ್ ಸದಸ್ಯರಾಗಿದ್ದ ಸಂದರ್ಭದಲ್ಲಿ ಛಲವಾದಿ ನಾರಾಯಣ ಸ್ವಾಮಿ ಅವರು ಕೆಐಎಡಿಬಿಯಿಂದ ಸಿಎ ಸೈಟ್ ಪಡೆದುಕೊಂಡಿದ್ದರು. ಅದೇ ಸಂದರ್ಭದಲ್ಲಿ ಅವರು ಆದರ್ಶ ಸ್ಕೂಲ್ ಎಜುಕೇಶನ್ ಗ್ರೂಪ್ ನ ಸಂಚಾಲಕರೂ ಆಗಿದ್ದರು. ಶಿಕ್ಷಣ ಸಂಸ್ಥೆ ನಡೆಸಲು ಪಡೆದುಕೊಂಡ ಸೈಟ್‌ನಲ್ಲಿ ಇದೀಗ ಆನಂದ್ ಧಂ ಬಿರಿಯಾನಿ ಹೋಟೆಲ್ ನಡೆಯುತ್ತಿದೆ ಎಂದು ಆರೋಪಿಸಿದರು.
More Stories
ಗದಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್. ಎತ್ತಂಗಡಿ
ಒಳಮೀಸಲಾತಿ ಜಾರಿಗೆ ಆಗ್ರಹ: ಜಗದೀಶ್ ತೊಂಡಿಹಾಳ ರಾಜ್ಯಾಧ್ಯಕ್ಷರು ಬಹುಜನ ದಲಿತ ಸೇನೆ ಕರ್ನಾಟಕ
ಸಂಜೆಯೊಳಗೆ ಮಹೇಶ್ ಶೆಟ್ಟಿ ತಿಮರೋಡಿ ಅರೆಸ್ಟ್ ಮಾಡಲು ಪರಮೇಶ್ವರ್ ಸೂಚನೆ