ಎಪ್ರಿಲ್ ನಲ್ಲಿ ಜಿಲ್ಲೆಯಾದ್ಯಂತ ನರೇಗಾ ಕೆಲಸ ಪ್ರಾರಂಭ : ಭರತ್ ಎಸ್
ಕೊಡತಗೇರಿ ಎಕ್ಸಪ್ರೆಸ್ ಸುದ್ದಿ
ಗದಗ :- ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2025 ಏಪ್ರಿಲ್ 01 ರಿಂದ ಪ್ರತಿ ದಿನಕ್ಕೆ 370 ರೂ ಕೂಲಿಯನ್ನು ಕೇಂದ್ರ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯವು ನಿಗದಿಪಡಿಸಿದೆ ಈ ಮೂಲಕ ಗ್ರಾಮೀಣ ಭಾಗದ ಬಡ ಕುಟುಂಬಗಳ ಜೀವನೋಪಾಯಕ್ಕೆ ಭದ್ರತೆ ಹೆಚ್ಚಿಸಿದೆ ಅಂತಾ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಭರತ್ ಎಸ್ ಹೇಳಿದರು
ಜಿಲ್ಲಾ ಪಂಚಾಯತ ಮುಖ್ಯ ಕಚೇರಿಯಲ್ಲಿ ಸಿಬ್ಬಂದಿಗಳ ಸಭೆಯಲ್ಲಿ ಮಾತನಾಡಿದ ಅವರು ಸ್ಥಳೀಯವಾಗಿ ನಿರಂತರ ಉದ್ಯೋಗ ಒದಗಿಸುವ ಉದ್ದೇಶದಿಂದ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿ ಗಳಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲಾಗುತ್ತಿದೆ. ನರೇಗಾ ಯೋಜನೆಯಡಿ ಅರ್ಹ ನೊಂದಾಯಿತ ಕುಟುಂಬಗಳಿಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯವು ರೂ. 349 ರಿಂದ ರೂ. 370 ಕ್ಕೆ ಕೂಲಿ ದರವನ್ನು ಹೆಚ್ಚಿಸಲಾಗಿದ್ದು, ಉದ್ಯೋಗ ಚೀಟಿದಾರ ಕೂಲಿಕಾರರು ಈ ಸೌಲಭ್ಯವನ್ನು 2025ರ ಏಪ್ರೀಲ್ 01 ರಿಂದ ಪಡೆಯಬಹುದು ಎಂದರು.
ನರೇಗಾ ಯೋಜನೆಯಡಿ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ಮಾಡುವುದು ಪ್ರಮುಖ ಉದ್ದೇಶವಾಗಿದ್ದು,ಈ ನಿಟ್ಟಿನಲ್ಲಿ ಪ್ರತಿ ಗ್ರಾಮ ಪಂಚಾಯತಿಯಲ್ಲಿ ನೈಸರ್ಗಿಕ ಸಂಪನ್ಮೂಲ ನಿರ್ವಹಣಾ ಉಪಚಾರದ ಗ್ರಾಮೀಣ ಕೆರೆ ಹೂಳೆತ್ತುವ ಕಾಮಗಾರಿ, ಬದು ನಿರ್ಮಾಣ, ಕೊಳವೆ ಭಾವಿ, ಮರು ಪೂರಣ ಘಟಕ, ನಾಲಾ ಅಭಿವೃದ್ಧಿ, ಅರಣ್ಣಿಕರಣ, ರೇಷ್ಮೆ ಬೆಳೆ, ತೋಟಗಾರಿಕೆ, ಗೋಕಟ್ಟೆ ನಿರ್ಮಾಣ ಇನ್ನು ಹಲವು ಕಾಮಗಾರಿಗಳಲ್ಲಿ ಕೂಲಿಕಾರರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸಲು ಯೋಜನೆ ರೂಪಿಸಲಾಗಿದ್ದು ಮನರೇಗಾ ಯೋಜನೆಯಡಿ ಕೆಲಸ ಮಾಡಿದ ಕೂಲಿಕಾರರಿಗೆ ಕೂಲಿ ಹಣವನ್ನು ಇ-ಎಫ್‌ಎಂಎಸ್ ಮುಖಾಂತರ ನೇರವಾಗಿ ಕೂಲಿಕಾರರ ವೈಯಕ್ತಿಕ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ ಮಹಿಳೆ ಹಾಗೂ ಪುರುಷರಿಗೆ ಸಮಾನ ಕೂಲಿ ನೀಡುವುದರಿಂದ ಸದರಿ ಪ್ರಯೋಜನ ವನ್ನು ಉದ್ಯೋಗ ಚೀಟಿ ಹೊಂದಿರುವ ಗ್ರಾಮೀಣ ಕುಟುಂಬಗಳು ಪಡೆದುಕೊಳ್ಳುವುದು, ಹಾಗೂ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಬೆಸಿಗೆ ಕಾಲದ ಹಿನ್ನಲೆಯಲ್ಲಿ ಗ್ರಾಮೀಣ ಜನರು ಉದ್ಯೋಗ ಬೇಡಿಕೆ ನೀಡಿದ ತಕ್ಷಣ ಉದ್ಯೋಗ ಒದಗಿಸಲು ಹಾಗೂ ಸಕಾಲದಲ್ಲಿ ಕೂಲಿ ಪಾವತಿ ಮಾಡಲು ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮತ್ತು ಅನುಷ್ಟಾನ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.
ಮುಖ್ಯವಾಗಿ ನರೇಗಾ ಯೋಜನೆಯಡಿ ಐ.ಇ.ಸಿ ಚಟುವಟಿಕೆಗಳ ಮುಖಾಂತರ ಗ್ರಾಮೀಣ ಪ್ರದೇಶಗಳಲ್ಲಿನ ಹಿರಿಯ ನಾಗರಿಕರಿಗೆ, ವಿಶೇಷ ಚೇತನರಿಗೆ,ಲಿಂಗತ್ವ ಅಲ್ಪಸಂಖ್ಯಾತ ರಿಗೆ ಹಾಗೂ ಮಹಿಳೆಯರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸಲು ಅಗತ್ಯ ಕ್ರಮವಹಿಸಲಾಗಿದ್ದು, ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಮಾಹಿತಿ, ಶಿಕ್ಷಣ ಮತ್ತು (ಐ.ಇ.ಸಿ) ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕೂಲಿಕಾರರನ್ನು ಸಂಘಟಿಸಿ 50 ಕೂಲಿಕಾರರಿರುವ ಕಾರ್ಮಿಕ ಸಂಘಗಳನ್ನು ರಚಿಸಿ ಅದಕ್ಕೆ ಒಬ್ಬ ಕಾಯಕ ಬಂಧುವನ್ನು ನೇಮಿಸಿ ಅವರುಗಳ ಮೂಲಕ ಕೂಲಿ ಬೇಡಿಕೆ ಪಡೆಯಲು ಗ್ರಾಮ ಪಂಚಾಯತಿಗಳ ವಾರ್ಡಗಳಲ್ಲಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಕಾಲೋನಿಗಳಲ್ಲಿ ವಿಶೇಷ ಅಭಿಯಾನಗಳನ್ನು ಆಯೋಜಿಸಿ ಕೂಲಿಕಾರರಿಂದ ಕೂಲಿ ಬೇಡಿಕೆ ಪಡೆದು ಸಮಯಕ್ಕೆ ಸರಿಯಾಗಿ ಕೆಲಸ ಒದಗಿಸಲಾಗುವುದು ಎಂದರು.
ಎಪ್ರಿಲ್ ನಲ್ಲಿ ಜಿಲ್ಲೆಯಾದ್ಯಂತ ನರೇಗಾ ಕೆಲಸ ಪ್ರಾರಂಭ : ಭರತ್ ಎಸ್

More Stories
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕರಿಬಸಪ್ಪ ನಿಡಗುಂದಿ ನೇಮಕ
ಗದಗ: ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪುಡಿ ಅಕ್ರಮ ಸಾಗಾಟ; ಇಬ್ಬರ ಬಂಧನ
ಯುವಕರು ದಾರಿತಪ್ಪುತ್ತಿದ್ದಾರೆ ಪೋಲಿಸ್ ಪಾಟೀಲ ವಿಷಾದ