ಬಿಜೆಪಿಯ ಜನಾಕ್ರೋಶ ಯಾತ್ರೆಗೆ ಶುಭ ಕೊರಿದ ಸಿದ್ದರಾಮಯ್ಯ

ಬಿಜೆಪಿಯ ಜನಾಕ್ರೋಶ ಯಾತ್ರೆಗೆ ಶುಭ ಕೊರಿದ ಸಿದ್ದರಾಮಯ್ಯ

ಕೊಡರಗೇರಿ ಎಕ್ಸಪ್ರೆಸ್ ಸುದ್ದಿ

ಬೆಂಗಳೂರ ಃ ಜನಾಕ್ರೋಶ ಯಾತ್ರೆ ಕೈಗೊಂಡಿರುವ ರಾಜ್ಯ BJP Karnataka ನಾಯಕರಿಗೆ ನಾನು ಶುಭ ಕೋರುತ್ತೇನೆ. ಒಂದು ಸಮರ್ಥ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದ ವೈಫಲ್ಯ ಮತ್ತು ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಲಾಗದ ಮನೆಮುರುಕುತನದ ಬಗ್ಗೆ ಆಕ್ರೋಶಗೊಂಡಿರುವ ರಾಜ್ಯದ ಜನರ ಮನಸ್ಸು ಅರಿಯಲು ಈ ಯಾತ್ರೆ ನೆರವಾಗಲಿ ಎಂದು ಹೃತ್ಪೂರ್ವಕವಾಗಿ ಹಾರೈಸುತ್ತೇನೆ.

ಇಷ್ಟೊಂದು ಅಸಮರ್ಥ, ನಿರ್ಲಜ್ಜ ಮತ್ತು ಜನವಿರೋಧಿ ವಿರೋಧ ಪಕ್ಷವನ್ನು ರಾಜ್ಯ ಎಂದೂ ಕಂಡಿಲ್ಲ. ಸ್ವಪಕ್ಷೀಯರೇ ಆರೋಪಿಸುವಂತೆ ‘’ಪೇಮೆಂಟ್ ಸೀಟ್’’ ನಲ್ಲಿ ಕೂತಿರುವ ರಾಜ್ಯ ಬಿಜೆಪಿ ಅಧ್ಯಕ್ಷ Vijayendra Yediyurappa ಅವರಿಗೆ ರಾಜ್ಯ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕತೆ ಇದೆ? ನಮ್ಮನ್ನು ಪ್ರಶ್ನಿಸುವ ಮೊದಲು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಅವರ ಶಾಸಕ ಮಿತ್ರರು ಕಳೆದೆ ಎರಡು ವರ್ಷಗಳಿಂದ ಮಾಡುತ್ತಿರುವ ಗಂಭೀರ ಸ್ವರೂಪದ ಆರೋಪಗಳಿಗೆ ಉತ್ತರಿಸುವ ದಮ್ಮು ತಾಕತ್ ತೋರಿಸಲಿ.

ವಿಜಯೇಂದ್ರ ವಿರುದ್ಧ ಸ್ವಪಕ್ಷೀಯರು ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳು ಅವರ ಪಕ್ಷದ ಹೈಕಮಾಂಡಿಗೂ ಮನವರಿಕೆಯಾದಂತಿದೆ. ಪಕ್ಷದೊಳಗಿದ್ದು ಮಾಡುವ ಆರೋಪಗಳಿಂದ ಆಗುವ ಮುಜುಗರದಿಂದ ತಪ್ಪಿಸಿಕೊಳ್ಳಲು Bharatiya Janata Party (BJP) ಹೈಕಮಾಂಡ್ ಯತ್ನಾಳ್ ಅವರನ್ನು ಪಕ್ಷದಿಂದ ಹೊರಗೆ ಹಾಕಿ, ಅವರಿಂದ ಈಗ ಇನ್ನಷ್ಟು ಆರೋಪಗಳನ್ನು ಮಾಡಿಸುತ್ತಿದೆ. ಅಂತಿಮವಾಗಿ ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಸುವುದೇ ಬಿಜೆಪಿ ಹೈಕಮಾಂಡ್ ಉದ್ದೇಶವಾಗಿದೆ.

ಇದಕ್ಕಾಗಿ ವಿಜಯೇಂದ್ರ ತಮ್ಮ ಕುರ್ಚಿ ಉಳಿಸಿಕೊಳ್ಳಲು ಈ ಜನಾಕ್ರೋಶ ಯಾತ್ರೆಯನ್ನು ಹಮ್ಮಿಕೊಂಡಿದ್ದಾರೆಯೇ ಹೊರತು ಬೇರೆ ಯಾವ ಸಾರ್ವಜನಿಕ ಹಿತಾಸಕ್ತಿಯ ಸದುದ್ದೇಶ ಖಂಡಿತ ಈ ಯಾತ್ರೆಗೆ ಇಲ್ಲ. ವಿಜಯೇಂದ್ರ ಅವರು ತಮ್ಮ ಪಕ್ಷದ ನಾಯಕರು ಮತ್ತು ಕಾರ್ಯಕರ್ತರದ್ದು ಮಾತ್ರವಲ್ಲ ರಾಜ್ಯದ ಜನತೆಯ ವಿಶ್ವಾಸವನ್ನೂ ಕಳೆದುಕೊಂಡಿದ್ದಾರೆ.
ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಬಜೆಟ್‌ನ 51,000 ಕೋಟಿ ರೂಪಾಯಿ ಹಣ ನೇರವಾಗಿ ಫಲಾನುಭವಿಗಳನ್ನು ತಲುಪುತ್ತಿದ್ದು, ಅವರೆಲ್ಲರೂ ಸಂತುಷ್ಠರಾಗಿದ್ದಾರೆ. ಈಗ ಅವರು ಬೀದಿಗೆ ಬಂದು ನಮ್ಮ ಪರ ಘೋಷಣೆ ಹಾಕದೆ ಇರಬಹುದು, ಆದರೆ ಅವರೆಲ್ಲರ ಆಶೀರ್ವಾದ ನಮ್ಮ ಸರ್ಕಾರದ ಪರವಾಗಿದೆ. ಮೊದಲ ದಿನದಿಂದಲೂ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಾ ಬಂದಿರುವ ಭಾರತೀಯ ಜನತಾ ಪಕ್ಷದ ಬಡವರು ಮತ್ತು ಮಹಿಳಾ ವಿರೋಧಿ ಧೋರಣೆಯನ್ನು ಅರ್ಥಮಾಡಿಕೊಳ್ಳುವಷ್ಟು ಜನ ಪ್ರಜ್ಞಾವಂತರಾಗಿದ್ದಾರೆ.

ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ವಿಫಲಗೊಳಿಸುವ ಏಕೈಕ ಉದ್ದೇಶದಿಂದ ರಾಜ್ಯದ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಜೊತೆ ಷಾಮೀಲಾಗಿ ರಾಜ್ಯಕ್ಕೆ ನ್ಯಾಯಬದ್ಧವಾಗಿ ಸಿಗಬೇಕಾದ ತೆರಿಗೆ ಪಾಲು ಮತ್ತು ಅನುದಾನಕ್ಕೆ ಕತ್ತರಿ ಹಾಕಿಸಿದ್ದಾರೆ. ರಾಜ್ಯದ ಜನ ತಮ್ಮ ಬೆವರಿನ ಗಳಿಕೆಯಿಂದ ನೀಡುತ್ತಿರುವ ಐದು ಲಕ್ಷ ಕೋಟಿ ರೂಪಾಯಿಗಳಷ್ಟು ತೆರಿಗೆ ಹಣದಲ್ಲಿ ಕೇವಲ 60,000 ಕೋಟಿ ರೂಪಾಯಿ ಮಾತ್ರ ವಾಪಸು ನೀಡುತ್ತಿರುವ ಅನ್ಯಾಯದ ಬಗ್ಗೆ ಆಕ್ರೋಶಗೊಂಡಿದ್ದಾರೆ. ಬಿಜೆಪಿ ಪಕ್ಷದ ಯಾತ್ರೆಯ ಸಮಯದಲ್ಲಿ ಈ ಆಕ್ರೋಶದ ಬಿಸಿ ಕೂಡಾ ಬಿಜೆಪಿ ನಾಯಕರಿಗೆ ತಟ್ಟಲಿದೆ.

ಕರ್ನಾಟಕದ ಜನರ ಹಿತರಕ್ಷಣೆಯ ಕಿಂಚಿತ್ತಾದರೂ ಕಾಳಜಿ ಈ ಬಿಜೆಪಿ ನಾಯಕರಿಗೆ ಇರುವುದಾದರೆ ಮೊದಲು ಇವರು ಪ್ರಧಾನಮಂತ್ರಿ ನಿವಾಸದ ಎದುರು ಹೋಗಿ ಪ್ರತಿಭಟನೆ ನಡೆಸಬೇಕು. ಕರ್ನಾಟಕವನ್ನು ಶತ್ರುರಾಜ್ಯದಂತೆ ನೋಡುತ್ತಿರುವ ನರೇಂದ್ರ ಮೋದಿ ಸರ್ಕಾರ ತೆರಿಗೆ ಪಾಲು, ಅನುದಾನ ಹಂಚಿಕೆಯಲ್ಲಿ ಅನ್ಯಾಯ ಮಾಡುತ್ತಿರುವುದು ಮಾತ್ರವಲ್ಲ ಈಗ ಕೇಂದ್ರದಲ್ಲಿ ಕರ್ನಾಟಕದ ದನಿಯನ್ನು ಕುಗ್ಗಿಸಬೇಕೆಂಬ ದುಷ್ಟ ಉದ್ದೇಶದಿಂದ ಕ್ಷೇತ್ರ ಮರುವಿಂಗಡಣೆಯನ್ನು ಮಾಡಲು ಹೊರಟಿದೆ. ಇದರ ವಿರುದ್ಧ ದನಿ ಎತ್ತಬೇಕಾಗಿರುವ ರಾಜ್ಯದಿಂದ ಆರಿಸಿಹೋಗಿರುವ ಬಿಜೆಪಿ ಸಂಸದರು ಬಾಯಿಗೆ ಬೀಗ ಹಾಕಿಕೊಂಡು ಕೇಂದ್ರದ ಗುಲಾಮರಂತೆ ವರ್ತಿಸುತ್ತಿದ್ದಾರೆ.

ವೈಯಕ್ತಿಕವಾಗಿ ನಾನು ರಾಜ್ಯದಲ್ಲಿ ರಚನಾತ್ಮಕವಾಗಿ ಕಾರ್ಯನಿರ್ವಹಿಸುವ ಸಮರ್ಥ ವಿರೋಧ ಪಕ್ಷ ಇರಬೇಕೆಂದು ಬಯಸುವವನು. ಬಿಜೆಪಿಯವರಂತೆ ರಾಜ್ಯ ಬಿಜೆಪಿ ಮುಕ್ತ ಆಗಬೇಕೆಂದು ಬಯಸುವಷ್ಟು ಕೆಟ್ಟ ಮನಸ್ಸು ನನಗಿಲ್ಲ. ನಮ್ಮ ಆಡಳಿತದಲ್ಲಿ ತಿಳಿದೋ, ತಿಳಿಯದೆಯೋ ತಪ್ಪುಗಳಾಗಿದ್ದರೆ ಅದನ್ನು ನಮ್ಮ ಗಮನಕ್ಕೆ ತರುವುದು ವಿರೋಧ ಪಕ್ಷದ ಮುಖ್ಯ ಕರ್ತವ್ಯವಾಗಿದೆ. ಆದರೆ ರಾಜ್ಯದಲ್ಲಿರುವ ವಿರೋಧ ಪಕ್ಷ ತನ್ನ ಒಳಜಗಳ ಮತ್ತು ಅಸಾಮರ್ಥ್ಯದಿಂದ ರಾಜ್ಯದ ಜನತೆ ಎದುರು ನಗೆಪಾಟಲಿಗೀಡಾಗಿದೆ.

#BjpFailsKarnataka #ಭ್ರಷ್ಟರಯಾತ್ರೆ

You may have missed

ಸಿದ್ದರಾಮಯ್ಯ: ಅರಸು ದಾಖಲೆ ಸರಿಗಟ್ಟಿದ ‘ಅಹಿಂದ’ ಚಾಣಕ್ಯ – ಜನಪರ ಆಡಳಿತದ ಹೊಸ ಪರ್ವ ​ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ದೀರ್ಘಕಾಲ ಮುಖ್ಯಮಂತ್ರಿಯಾಗಿ ರಾಜ್ಯವಾಳಿದ ಕೀರ್ತಿ ಈವರೆಗೆ ದಿವಂಗತ ಡಿ. ದೇವರಾಜ ಅರಸು (7 ವರ್ಷ 239 ದಿನಗಳು) ಅವರಿಗೆ ಸಲ್ಲುತ್ತಿತ್ತು. ಆದರೆ, ಜನವರಿ 7, 2026ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಐತಿಹಾಸಿಕ ದಾಖಲೆಯನ್ನು ಮುರಿದು, ಕರ್ನಾಟಕದ ಇತಿಹಾಸದಲ್ಲಿ ಅತಿ ಸುದೀರ್ಘ ಕಾಲ ಆಡಳಿತ ನಡೆಸಿದ ನಾಯಕನಾಗಿ ಹೊರಹೊಮ್ಮಿದ್ದಾರೆ. ಇದು ಕೇವಲ ಅಂಕಿ-ಅಂಶಗಳ ಸಾಧನೆಯಲ್ಲ, ಬದಲಿಗೆ ಅವರ ಅಚಲ ಸಿದ್ಧಾಂತ ಮತ್ತು ಜನಪ್ರಿಯತೆಯ ಪ್ರತೀಕವಾಗಿದೆ. ​ಅರಸು ಮತ್ತು ಸಿದ್ದರಾಮಯ್ಯ: ಸಮಾಜಮುಖಿ ಹೋಲಿಕೆ ​ದೇವರಾಜ ಅರಸು ಅವರು ಹೇಗೆ ಭೂ ಸುಧಾರಣೆ ಮತ್ತು ಹಿಂದುಳಿದ ವರ್ಗಗಳ ಸಬಲೀಕರಣದ ಮೂಲಕ ‘ಕರ್ನಾಟಕದ ಕ್ರಾಂತಿಕಾರಿ ನಾಯಕ’ ಎನಿಸಿಕೊಂಡರೋ, ಸಿದ್ದರಾಮಯ್ಯನವರು ‘ಅಹಿಂದ’ (ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ) ವರ್ಗಗಳ ಧ್ವನಿಯಾಗಿ ಅದೇ ಹಾದಿಯಲ್ಲಿ ಮುನ್ನಡೆದಿದ್ದಾರೆ. ಮೈಸೂರು ಮಣ್ಣಿನ ಈ ಇಬ್ಬರು ನಾಯಕರು ಶೋಷಿತ ಸಮುದಾಯಗಳಿಗೆ ರಾಜಕೀಯ ಅಸ್ತಿತ್ವ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ​ಉತ್ತಮ ಆಡಳಿತದ ಪ್ರಮುಖ ಮೈಲಿಗಲ್ಲುಗಳು ​ಸಿದ್ದರಾಮಯ್ಯನವರ ಆಡಳಿತವನ್ನು ಶ್ಲಾಘಿಸಲು ಮುಖ್ಯ ಕಾರಣ ಅವರ ‘ಜನಪರ ಯೋಜನೆಗಳು’. ಅವರ ಆಡಳಿತ ವೈಖರಿಯಲ್ಲಿ ಆರ್ಥಿಕ ಶಿಸ್ತು ಮತ್ತು ಸಾಮಾಜಿಕ ಭದ್ರತೆಯ ಸುಂದರ ಸಮನ್ವಯವಿದೆ: ​ಭಾಗ್ಯಗಳ ಸರಣಿ: ಮೊದಲ ಅವಧಿಯಲ್ಲಿ (2013-18) ಜಾರಿಗೆ ತಂದ ‘ಅನ್ನಭಾಗ್ಯ’, ‘ಕ್ಷೀರಭಾಗ್ಯ’, ‘ಇಂದಿರಾ ಕ್ಯಾಂಟೀನ್’ನಂತಹ ಯೋಜನೆಗಳು ಬಡವರ ಹಸಿವು ನೀಗಿಸುವಲ್ಲಿ ಮೈಲಿಗಲ್ಲಾದವು. ​ಪಂಚ ಗ್ಯಾರಂಟಿಗಳು: ಎರಡನೇ ಅವಧಿಯಲ್ಲಿ ಜಾರಿಗೆ ತಂದ ಐದು ಗ್ಯಾರಂಟಿಗಳು (ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ) ಇಂದು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಆಸರೆಯಾಗಿವೆ. ​ಆರ್ಥಿಕ ತಜ್ಞತೆ: ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ಅಂದರೆ 16 ಬಾರಿ ಬಜೆಟ್ ಮಂಡಿಸಿದ ಹೆಗ್ಗಳಿಕೆ ಇವರದು. ಆರ್ಥಿಕ ಕೊರತೆಯನ್ನು ಹತೋಟಿಯಲ್ಲಿಟ್ಟುಕೊಂಡು ಅಭಿವೃದ್ಧಿ ಕೆಲಸಗಳಿಗೆ ಹಣ ಮೀಸಲಿಡುವ ಇವರ ಚಾಣಕ್ಯತನ ಮೆಚ್ಚುವಂತದ್ದು. ​ನುಡಿದಂತೆ ನಡೆದ ಸರ್ಕಾರ: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಅವರು ತೋರಿದ ಬದ್ಧತೆ ಮತದಾರರಲ್ಲಿ ಅವರ ಮೇಲಿನ ವಿಶ್ವಾಸವನ್ನು ಹೆಚ್ಚಿಸಿದೆ. ​ತಳಮಟ್ಟದ ನಾಯಕತ್ವ ​ಸಿದ್ದರಾಮಯ್ಯನವರು ಯಾವುದೇ ‘ಹೈಕಮಾಂಡ್’ ನೆರಳಿನಲ್ಲದೆ, ಹಳ್ಳಿ ಹಳ್ಳಿಯ ಜನರೊಂದಿಗೆ ಬೆರೆತು ಬೆಳೆದ ನಾಯಕ. ಅವರ ನೇರ ನುಡಿ, ತರ್ಕಬದ್ಧ ಮಾತುಗಳು ಮತ್ತು ಸಂವಿಧಾನದ ಮೇಲಿನ ಗೌರವ ಅವರನ್ನು ಶ್ರೇಷ್ಠ ಸಂಸದೀಯ ಪಟುವನ್ನಾಗಿ ಮಾಡಿದೆ. ​”ಅಧಿಕಾರ ಎನ್ನುವುದು ಕೇವಲ ಕುರ್ಚಿಯಲ್ಲ, ಅದು ಬಡವರ ಕಣ್ಣೀರು ಒರೆಸುವ ಅವಕಾಶ” ಎಂಬ ಸಿದ್ಧಾಂತದೊಂದಿಗೆ ಅವರು ಮುನ್ನಡೆಯುತ್ತಿರುವುದು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ. ​ಸಮಾರೋಪ ​ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಸಿದ್ದರಾಮಯ್ಯನವರು, ಕರ್ನಾಟಕದ ಸಾಮಾಜಿಕ ನಕ್ಷೆಯಲ್ಲಿ ತಮ್ಮದೇ ಆದ ಅಳಿಸಲಾಗದ ಛಾಪನ್ನು ಒತ್ತಿದ್ದಾರೆ. ಅವರ ಈ ಪಯಣ ಕೇವಲ ಸುದೀರ್ಘ ಅವಧಿಯದ್ದಷ್ಟೇ ಅಲ್ಲದೆ, ‘ಸಮ ಸಮಾಜ’ದ ನಿರ್ಮಾಣದ ಹಾದಿಯಲ್ಲಿ ಒಂದು ಭರವಸೆಯ ನಡಿಗೆಯಾಗಿದೆ.

error: Content is protected !!