A4 ನಲ್ಲೇ ಫೈಲಿಂಗ್: ಜಿಲ್ಲಾ ನ್ಯಾಯಾಲಯಗಳಿಗೆ ಹೈಕೋರ್ಟ್ ನಿರ್ದೇಶನ

A4 ನಲ್ಲೇ ಫೈಲಿಂಗ್: ಜಿಲ್ಲಾ ನ್ಯಾಯಾಲಯಗಳಿಗೆ ಹೈಕೋರ್ಟ್ ನಿರ್ದೇಶನ

ಕೊಡತಗೇರಿ ಎಕ್ಸ್‌ಪ್ರೆಸ್‌ ಸುದ್ದಿ

ಬೆಂಗಳೂರು: ಹೈಕೋರ್ಟ್ ಮಾದರಿಯಲ್ಲೇ ಜಿಲ್ಲಾ ನ್ಯಾಯಾಲಯಗಳಲ್ಲೂ ಎ4 ವೈಟ್ ಶೀಟ್ ಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು ಮತ್ತು ಇಂತಹ ಅರ್ಜಿ, ಮನವಿಗಳನ್ನು ನ್ಯಾಯಾಲಯಗಳ ಸಿಬ್ಬಂದಿ ಸ್ವೀಕರಿಸಬೇಕು ಎಂದು ಹೈಕೋರ್ಟ್ ರಾಜ್ಯದ ಎಲ್ಲಾ ಜಿಲ್ಲಾ ನ್ಯಾಯಾಲಯಗಳಿಗೆ ನಿರ್ದೇಶಿಸಿದೆ.

ಈ ಕುರಿತಂತೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಆದೇಶಾನುಸಾರ ರಿಜಿಸ್ಟ್ರಾರ್ ಜನರಲ್ ಕೆ,ಎಸ್. ಭರತ್‌ ಕುಮಾ‌ರ್ ಸುತ್ತೋಲೆ ಹೊರಡಿಸಿದ್ದಾರೆ. ಅದರಂತೆ ಇನ್ನು ಮುಂದೆ ಜಿಲ್ಲಾ ನ್ಯಾಯಾಲಯಗಳಲ್ಲೂ ವಕೀಲರು/ಕಕ್ಷೀದಾರರು ಹೈಕೋರ್ಟ್ ಮಾದರಿಯಲ್ಲೇ ಎ4 ವೈಟ್ ಶೀಟ್ ಗಳಲ್ಲಿ ಅರ್ಜಿಗಳನ್ನು, ಮನವಿಗಳನ್ನು ಸಲ್ಲಿಸಬಹುದಾಗಿದೆ.
ಜಿಲ್ಲಾ ನ್ಯಾಯಾಲಯಗಳಲ್ಲಿ A4 ಶೀಟ್ ಗಳಲ್ಲಿ ಅರ್ಜಿಗಳನ್ನು ಸ್ವೀಕರಿಸದಿರುವ ಬಗ್ಗೆ ವಕೀಲರು ಹೈಕೋರ್ಟ್ ಗಮನಕ್ಕೆ ತಂದಿದ್ದರು. ಇದನ್ನು ಪರಿಗಣಿಸಿದ ಹೈಕೋರ್ಟ್, ಸಿವಿಲ್ ಮತ್ತು ಕ್ರಿಮಿನಲ್ ಅಭ್ಯಾಸ ನಿಯಮಗಳಿಗೆ ಮಾರ್ಪಾಡುಗಳನ್ನು ಸೂಚಿಸಿದ್ದು, ಜಿಲ್ಲಾ ನ್ಯಾಯಾಲಯಗಳು ಇನ್ನು ಮುಂದೆ ಯಾವುದೇ ಪತ್ರಿಕೆಗಳು/ದಾಖಲೆಗಳು ಇತ್ಯಾದಿಗಳನ್ನು ಸ್ವೀಕರಿಸುವಾಗ ಕರ್ನಾಟಕ ಸಿವಿಲ್ ಅಭ್ಯಾಸ ನಿಯಮಗಳು, 1967 ರ ಅಸ್ತಿತ್ವದಲ್ಲಿರುವ ನಿಯಮ 7(1) ಅನ್ನು ಅನುಸರಿಸುವಂತೆ ನಿರ್ದೇಶಿಸಿದೆ. ಅದರಂತೆ ವಕೀಲರು ಎ4 ಹಾಳೆಗಳಲ್ಲಿ ತಮ್ಮ ವಾದ, ಮನವಿ, ಜ್ಞಾಪನ ಇತ್ಯಾದಿಗಳನ್ನು ಸಲ್ಲಿಸಬಹುದು.

ಈ ನಿಯಮವನ್ನು, ಜಿಲ್ಲಾ ನ್ಯಾಯಾಂಗದ ಎಲ್ಲಾ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಹೈಕೋರ್ಟ್ ನಿರ್ದೇಶಿಸಿದೆ
ಹೈಕೋರ್ಟ್ ತನ್ನ ನಿಯಮಗಳನ್ನು ತಿದ್ದುಪಡಿ ಮಾಡಿ ಹೈಕೋರ್ಟ್‌ ಗೆ ಲೀಗಲ್ ಗ್ರೀನ್ ಶೀಟ್ ಗಳಲ್ಲಿ ಫೈಲಿಂಗ್ ಮಾಡುವುದರಿಂದ ವಿನಾಯ್ತಿ ನೀಡಿತ್ತು.

ລຳ໖ (appeal), (petition), ಅಫಿಡವಿಟ್(affidavit, ಮಧ್ಯಂತರ (interlocutory application) ಅಥವಾ ಇತರೆ ಮೆಮೊರಾಂಡಮ್ ಅಥವಾ ದಾಖಲೆಯನ್ನು ಎ4 ಸೈಜ್ ಪೇಪ‌ರ್ ಹಾಳೆಯ ಒಂದು ಬದಿಯಲ್ಲಿ ಮಾತ್ರ ಮುದ್ರಿಸುವಂತೆ ಸೂಚಿಸಲಾಗಿತ್ತು. A-4 ಸೈಜ್ ನ (30.5 cm ಉದ್ದ ಮತ್ತು 21.5 cm ಅಗಲ) ದೃಢವಾದ ಮತ್ತು ಬಾಳಿಕೆ ಬರುವ ಬಿಳಿ ಹಾಳೆಯು ಕನಿಷ್ಠ 75 gsm ತೂಕ ಇರಬೇಕು. ಪೇಪರ್ ನ ಮೇಲೆ ಶೀರ್ಷಿಕೆ ಫಾಂಟ್ ಗಾತ್ರ-14″ ದಪ್ಪ ಇರಬೇಕು. ಉಳಿದ ಪಠ್ಯದ ಫಾಂಟ್ ಗಾತ್ರ 12″ ಇರಬೇಕು. ಎಡ ಅಂಚಿನಲ್ಲಿ 1.75 , 1 ,ಮೇಲಿನ ಅಂಚು 1.5 ಇಂಚು ಮತ್ತು ಕೆಳಗಿನ ಅಂಚು 1.5 ಇಂಚು ಖಾಲಿ ಇರಬೇಕು. ಟೈಪಿಂಗ್ ಸಾಲುಗಳ ನಡುವೆ 1.5 ಸಾಲಿನ ಅಂತರ ಇರಬೇಕು ಎಂದು ಸ್ಪಷ್ಟಪಡಿಸಲಾಗಿತ್ತು. ಇದೇ ರೀತಿಯ ನಿಯಮವನ್ನು ಇದೀಗ ಜಿಲ್ಲಾ ನ್ಯಾಯಾಲಯಗಳಿಗೂ ವಿಸ್ತರಿಸಲಾಗಿದೆ.

You may have missed

ಸಿದ್ದರಾಮಯ್ಯ: ಅರಸು ದಾಖಲೆ ಸರಿಗಟ್ಟಿದ ‘ಅಹಿಂದ’ ಚಾಣಕ್ಯ – ಜನಪರ ಆಡಳಿತದ ಹೊಸ ಪರ್ವ ​ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ದೀರ್ಘಕಾಲ ಮುಖ್ಯಮಂತ್ರಿಯಾಗಿ ರಾಜ್ಯವಾಳಿದ ಕೀರ್ತಿ ಈವರೆಗೆ ದಿವಂಗತ ಡಿ. ದೇವರಾಜ ಅರಸು (7 ವರ್ಷ 239 ದಿನಗಳು) ಅವರಿಗೆ ಸಲ್ಲುತ್ತಿತ್ತು. ಆದರೆ, ಜನವರಿ 7, 2026ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಐತಿಹಾಸಿಕ ದಾಖಲೆಯನ್ನು ಮುರಿದು, ಕರ್ನಾಟಕದ ಇತಿಹಾಸದಲ್ಲಿ ಅತಿ ಸುದೀರ್ಘ ಕಾಲ ಆಡಳಿತ ನಡೆಸಿದ ನಾಯಕನಾಗಿ ಹೊರಹೊಮ್ಮಿದ್ದಾರೆ. ಇದು ಕೇವಲ ಅಂಕಿ-ಅಂಶಗಳ ಸಾಧನೆಯಲ್ಲ, ಬದಲಿಗೆ ಅವರ ಅಚಲ ಸಿದ್ಧಾಂತ ಮತ್ತು ಜನಪ್ರಿಯತೆಯ ಪ್ರತೀಕವಾಗಿದೆ. ​ಅರಸು ಮತ್ತು ಸಿದ್ದರಾಮಯ್ಯ: ಸಮಾಜಮುಖಿ ಹೋಲಿಕೆ ​ದೇವರಾಜ ಅರಸು ಅವರು ಹೇಗೆ ಭೂ ಸುಧಾರಣೆ ಮತ್ತು ಹಿಂದುಳಿದ ವರ್ಗಗಳ ಸಬಲೀಕರಣದ ಮೂಲಕ ‘ಕರ್ನಾಟಕದ ಕ್ರಾಂತಿಕಾರಿ ನಾಯಕ’ ಎನಿಸಿಕೊಂಡರೋ, ಸಿದ್ದರಾಮಯ್ಯನವರು ‘ಅಹಿಂದ’ (ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ) ವರ್ಗಗಳ ಧ್ವನಿಯಾಗಿ ಅದೇ ಹಾದಿಯಲ್ಲಿ ಮುನ್ನಡೆದಿದ್ದಾರೆ. ಮೈಸೂರು ಮಣ್ಣಿನ ಈ ಇಬ್ಬರು ನಾಯಕರು ಶೋಷಿತ ಸಮುದಾಯಗಳಿಗೆ ರಾಜಕೀಯ ಅಸ್ತಿತ್ವ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ​ಉತ್ತಮ ಆಡಳಿತದ ಪ್ರಮುಖ ಮೈಲಿಗಲ್ಲುಗಳು ​ಸಿದ್ದರಾಮಯ್ಯನವರ ಆಡಳಿತವನ್ನು ಶ್ಲಾಘಿಸಲು ಮುಖ್ಯ ಕಾರಣ ಅವರ ‘ಜನಪರ ಯೋಜನೆಗಳು’. ಅವರ ಆಡಳಿತ ವೈಖರಿಯಲ್ಲಿ ಆರ್ಥಿಕ ಶಿಸ್ತು ಮತ್ತು ಸಾಮಾಜಿಕ ಭದ್ರತೆಯ ಸುಂದರ ಸಮನ್ವಯವಿದೆ: ​ಭಾಗ್ಯಗಳ ಸರಣಿ: ಮೊದಲ ಅವಧಿಯಲ್ಲಿ (2013-18) ಜಾರಿಗೆ ತಂದ ‘ಅನ್ನಭಾಗ್ಯ’, ‘ಕ್ಷೀರಭಾಗ್ಯ’, ‘ಇಂದಿರಾ ಕ್ಯಾಂಟೀನ್’ನಂತಹ ಯೋಜನೆಗಳು ಬಡವರ ಹಸಿವು ನೀಗಿಸುವಲ್ಲಿ ಮೈಲಿಗಲ್ಲಾದವು. ​ಪಂಚ ಗ್ಯಾರಂಟಿಗಳು: ಎರಡನೇ ಅವಧಿಯಲ್ಲಿ ಜಾರಿಗೆ ತಂದ ಐದು ಗ್ಯಾರಂಟಿಗಳು (ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ) ಇಂದು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಆಸರೆಯಾಗಿವೆ. ​ಆರ್ಥಿಕ ತಜ್ಞತೆ: ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ಅಂದರೆ 16 ಬಾರಿ ಬಜೆಟ್ ಮಂಡಿಸಿದ ಹೆಗ್ಗಳಿಕೆ ಇವರದು. ಆರ್ಥಿಕ ಕೊರತೆಯನ್ನು ಹತೋಟಿಯಲ್ಲಿಟ್ಟುಕೊಂಡು ಅಭಿವೃದ್ಧಿ ಕೆಲಸಗಳಿಗೆ ಹಣ ಮೀಸಲಿಡುವ ಇವರ ಚಾಣಕ್ಯತನ ಮೆಚ್ಚುವಂತದ್ದು. ​ನುಡಿದಂತೆ ನಡೆದ ಸರ್ಕಾರ: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಅವರು ತೋರಿದ ಬದ್ಧತೆ ಮತದಾರರಲ್ಲಿ ಅವರ ಮೇಲಿನ ವಿಶ್ವಾಸವನ್ನು ಹೆಚ್ಚಿಸಿದೆ. ​ತಳಮಟ್ಟದ ನಾಯಕತ್ವ ​ಸಿದ್ದರಾಮಯ್ಯನವರು ಯಾವುದೇ ‘ಹೈಕಮಾಂಡ್’ ನೆರಳಿನಲ್ಲದೆ, ಹಳ್ಳಿ ಹಳ್ಳಿಯ ಜನರೊಂದಿಗೆ ಬೆರೆತು ಬೆಳೆದ ನಾಯಕ. ಅವರ ನೇರ ನುಡಿ, ತರ್ಕಬದ್ಧ ಮಾತುಗಳು ಮತ್ತು ಸಂವಿಧಾನದ ಮೇಲಿನ ಗೌರವ ಅವರನ್ನು ಶ್ರೇಷ್ಠ ಸಂಸದೀಯ ಪಟುವನ್ನಾಗಿ ಮಾಡಿದೆ. ​”ಅಧಿಕಾರ ಎನ್ನುವುದು ಕೇವಲ ಕುರ್ಚಿಯಲ್ಲ, ಅದು ಬಡವರ ಕಣ್ಣೀರು ಒರೆಸುವ ಅವಕಾಶ” ಎಂಬ ಸಿದ್ಧಾಂತದೊಂದಿಗೆ ಅವರು ಮುನ್ನಡೆಯುತ್ತಿರುವುದು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ. ​ಸಮಾರೋಪ ​ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಸಿದ್ದರಾಮಯ್ಯನವರು, ಕರ್ನಾಟಕದ ಸಾಮಾಜಿಕ ನಕ್ಷೆಯಲ್ಲಿ ತಮ್ಮದೇ ಆದ ಅಳಿಸಲಾಗದ ಛಾಪನ್ನು ಒತ್ತಿದ್ದಾರೆ. ಅವರ ಈ ಪಯಣ ಕೇವಲ ಸುದೀರ್ಘ ಅವಧಿಯದ್ದಷ್ಟೇ ಅಲ್ಲದೆ, ‘ಸಮ ಸಮಾಜ’ದ ನಿರ್ಮಾಣದ ಹಾದಿಯಲ್ಲಿ ಒಂದು ಭರವಸೆಯ ನಡಿಗೆಯಾಗಿದೆ.

error: Content is protected !!