
KODATAGERI EXPRESS NEWS
ಬೆಂಗಳೂರು: ಸಿವಿಲ್ ಪ್ರಕರಣಗಳಲ್ಲಿ ಕ್ರಿಮಿನಲ್ಕಾನೂನನ್ನು ಅಸ್ತ್ರವಾಗಿ ಬಳಸುವವರ ವಿರುದ್ಧ ನ್ಯಾಯಾಲಯಗಳು ಜಾಗರೂಕರಾಗಿರಬೇಕು ಎಂದು ಪ್ರಕರಣವೊಂದರ ವಿಚಾರಣೆಯಲ್ಲಿ ಹೈಕೋರ್ಟ್ ಹೇಳಿದೆ.
ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂಧಿಸಿದ ವ್ಯಾಜ್ಯ ಕುರಿತು ಮಹಾರಾಷ್ಟ್ರ ಮೂಲದ ಬಿಲ್ಡರ್ ಲಾಸ್ ಭೋರ್ಮೆಲ್ಲಿ ಓಸ್ವಾಲ್ ವಿರುದ್ಧ ಆತನ ಪಾಲುದಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ದಾಖಲಿಸಿದ್ದ ಪ್ರಕರಣ ರದ್ದುಗೊಳಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಮೇಲಿನಂತೆ ಅಭಿಪ್ರಾಯ ವ್ಯಕ್ತಪಡಿಸಿದೆ.
ತನ್ನ ವಿರುದ್ಧದ ಪ್ರಕರಣ ರದ್ದುಪಡಿಸಲು ಕೋರಿ ಭೋರ್ಮೇಲ್ಲಿ ಓಸ್ವಾಲ್ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿರುವ ನ್ಯಾಯಪೀಠ, ಪ್ರಕರಣದಲ್ಲಿ ಅರ್ಜಿದಾರ ಮತ್ತು ದೂರುದಾರ ಒಂದೇ ಕಂಪನಿಯ ಪಾಲುದಾರರಾಗಿದ್ದಾರೆ. ಅವರ ನಡುವೆ ಉಂಟಾದ ಆರ್ಥಿಕ ವಿವಾದಕ್ಕೆ ಪ್ರತಿಯಾಗಿ ಸೇಡು ತಿರಿಸಿಕೊಳ್ಳಲು ಕ್ರಿಮಿನಲ್ ನ್ಯಾಯ ವ್ಯವಸ್ಥೆ ಬಳಸಿಕೊಂಡಿದ್ದಾರೆ. ಇದು ಪ್ರತೀಕಾರದ ಅಸ್ತ್ರ ಎಂದು ಆದೇಶದಲ್ಲಿ ನ್ಯಾಯಪೀಠ ಹೇಳಿದೆ.
ಪ್ರಕರಣದಲ್ಲಿ ನನ್ನ ಬಳಿ ನಿಮ್ಮ ಜಾತಿವಾದಿ ಮನಸ್ಥಿತಿ ತೋರಿಸಬೇಡಿ ಎಂದು ಅರ್ಜಿದಾರರು ತಮ್ಮನ್ನು ಉದ್ದೇ ಶಿಸಿ ಹೇಳಿದ್ದಾರೆ ಎಂದು ದೂರುದಾರ ಸೋಮಶೇಖರ್ ಆರೋಪಿಸಿದ್ದಾರೆ. ಆದರೆ, ಅದು ಜಾತಿ ಹೆಸರನ್ನು ಹೇಳಿ ನಿಂದನೆ ಮಾಡಿದ್ದಾರೆ ಎಂದು ವ್ಯಾಖ್ಯಾನಿ ಸಲಾಗುವುದಿಲ್ಲ. ಆದ್ದರಿಂದ ಈ ಕೇಸ್‌ನ ವಿಚಾರಣೆ ಮುಂದುವರೆಸಿದಲ್ಲಿ ಕಾನೂನು ವ್ಯವಸ್ಥೆಯ ದುರು ಪಯೋಗವಾಗಲಿದೆ. ಸಿವಿಲ್ ವ್ಯಾಜ್ಯಗಳಲ್ಲಿ ಕ್ರಿಮಿನಲ್ ಕಾನೂನನ್ನು ಅಸ್ತ್ರವಾಗಿ ಬಳಸುವ ವಿರುದ್ಧ ನ್ಯಾಯಾಲಯಗಳು ಎಚ್ಚರಿಕೆಯಿಂದ ಇರಬೇಕು ಎಂದು ನ್ಯಾಯಪೀಠ ಹೇಳಿದೆ.
ಏನಿದು ಪ್ರಕರಣ: ಬೆಂಗಳೂರಿನ ಸೋಮಶೇಖರ್, ಅರ್ಜಿದಾರ ವಿಲಾಸ್ ಭೋರ್ಮೆಲ್ಲಿ ಓಸ್ವಾಲ್‌ರೊಂದಿಗೆ 2011 ರಲ್ಲಿ ರಿಯಲ್ ಎಸ್ಟೇಟ್ ಸಂಸ್ಥೆ ಗ್ರೀನ್ ಲ್ಯಾಂಡ್ ಇನ್ಮಾ ಎಂಬ ಸಂಸ್ಥೆಯ ವ್ಯವಹಾರದಲ್ಲಿ ಪಾಲುದಾರರಾಗಿದ್ದರು. 2016ರಲ್ಲಿ ಇಬ್ಬರ ನಡುವೆ ಉಂಟಾದ ಮನಸ್ತಾಪದಿಂದ ವ್ಯವಹಾರ ಸಂಬಂಧ ಸ್ಥಗಿತಗೊಳಿಸಿದ್ದರು. ಆದರೆ, ವ್ಯವಹಾರದಲ್ಲಿನ ಗೊಂದಲಗಳು ಮುಂದುವರೆದಿದ್ದವು. ಈ ಸಂಬಂಧ ಪರಿಶಿಷ್ಟ ಜಾತಿಗೆ ಸೇರಿದ ಸೋಮ ಶೇಖರ್ 2021ರಲ್ಲಿ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯಕ್ಕೆ (ಡಿಸಿಆರ್‌ಇ) ದೂರು ಸಲ್ಲಿಸಿದ್ದರು.

More Stories
ಗ್ರಾಮ ಪಂಚಾಯಿತಿಗಳಲ್ಲಿ ಇನ್ನು ಆಡಳಿತಾಧಿಕಾರಿ ಪಾರುಪತ್ಯ: ಸರ್ಕಾರದ ಅಧಿಕೃತ ಆದೇಶ
ಸಿದ್ದರಾಮಯ್ಯ: ಅರಸು ದಾಖಲೆ ಸರಿಗಟ್ಟಿದ ‘ಅಹಿಂದ’ ಚಾಣಕ್ಯ – ಜನಪರ ಆಡಳಿತದ ಹೊಸ ಪರ್ವ ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ದೀರ್ಘಕಾಲ ಮುಖ್ಯಮಂತ್ರಿಯಾಗಿ ರಾಜ್ಯವಾಳಿದ ಕೀರ್ತಿ ಈವರೆಗೆ ದಿವಂಗತ ಡಿ. ದೇವರಾಜ ಅರಸು (7 ವರ್ಷ 239 ದಿನಗಳು) ಅವರಿಗೆ ಸಲ್ಲುತ್ತಿತ್ತು. ಆದರೆ, ಜನವರಿ 7, 2026ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಐತಿಹಾಸಿಕ ದಾಖಲೆಯನ್ನು ಮುರಿದು, ಕರ್ನಾಟಕದ ಇತಿಹಾಸದಲ್ಲಿ ಅತಿ ಸುದೀರ್ಘ ಕಾಲ ಆಡಳಿತ ನಡೆಸಿದ ನಾಯಕನಾಗಿ ಹೊರಹೊಮ್ಮಿದ್ದಾರೆ. ಇದು ಕೇವಲ ಅಂಕಿ-ಅಂಶಗಳ ಸಾಧನೆಯಲ್ಲ, ಬದಲಿಗೆ ಅವರ ಅಚಲ ಸಿದ್ಧಾಂತ ಮತ್ತು ಜನಪ್ರಿಯತೆಯ ಪ್ರತೀಕವಾಗಿದೆ. ಅರಸು ಮತ್ತು ಸಿದ್ದರಾಮಯ್ಯ: ಸಮಾಜಮುಖಿ ಹೋಲಿಕೆ ದೇವರಾಜ ಅರಸು ಅವರು ಹೇಗೆ ಭೂ ಸುಧಾರಣೆ ಮತ್ತು ಹಿಂದುಳಿದ ವರ್ಗಗಳ ಸಬಲೀಕರಣದ ಮೂಲಕ ‘ಕರ್ನಾಟಕದ ಕ್ರಾಂತಿಕಾರಿ ನಾಯಕ’ ಎನಿಸಿಕೊಂಡರೋ, ಸಿದ್ದರಾಮಯ್ಯನವರು ‘ಅಹಿಂದ’ (ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ) ವರ್ಗಗಳ ಧ್ವನಿಯಾಗಿ ಅದೇ ಹಾದಿಯಲ್ಲಿ ಮುನ್ನಡೆದಿದ್ದಾರೆ. ಮೈಸೂರು ಮಣ್ಣಿನ ಈ ಇಬ್ಬರು ನಾಯಕರು ಶೋಷಿತ ಸಮುದಾಯಗಳಿಗೆ ರಾಜಕೀಯ ಅಸ್ತಿತ್ವ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಉತ್ತಮ ಆಡಳಿತದ ಪ್ರಮುಖ ಮೈಲಿಗಲ್ಲುಗಳು ಸಿದ್ದರಾಮಯ್ಯನವರ ಆಡಳಿತವನ್ನು ಶ್ಲಾಘಿಸಲು ಮುಖ್ಯ ಕಾರಣ ಅವರ ‘ಜನಪರ ಯೋಜನೆಗಳು’. ಅವರ ಆಡಳಿತ ವೈಖರಿಯಲ್ಲಿ ಆರ್ಥಿಕ ಶಿಸ್ತು ಮತ್ತು ಸಾಮಾಜಿಕ ಭದ್ರತೆಯ ಸುಂದರ ಸಮನ್ವಯವಿದೆ: ಭಾಗ್ಯಗಳ ಸರಣಿ: ಮೊದಲ ಅವಧಿಯಲ್ಲಿ (2013-18) ಜಾರಿಗೆ ತಂದ ‘ಅನ್ನಭಾಗ್ಯ’, ‘ಕ್ಷೀರಭಾಗ್ಯ’, ‘ಇಂದಿರಾ ಕ್ಯಾಂಟೀನ್’ನಂತಹ ಯೋಜನೆಗಳು ಬಡವರ ಹಸಿವು ನೀಗಿಸುವಲ್ಲಿ ಮೈಲಿಗಲ್ಲಾದವು. ಪಂಚ ಗ್ಯಾರಂಟಿಗಳು: ಎರಡನೇ ಅವಧಿಯಲ್ಲಿ ಜಾರಿಗೆ ತಂದ ಐದು ಗ್ಯಾರಂಟಿಗಳು (ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ) ಇಂದು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಆಸರೆಯಾಗಿವೆ. ಆರ್ಥಿಕ ತಜ್ಞತೆ: ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ಅಂದರೆ 16 ಬಾರಿ ಬಜೆಟ್ ಮಂಡಿಸಿದ ಹೆಗ್ಗಳಿಕೆ ಇವರದು. ಆರ್ಥಿಕ ಕೊರತೆಯನ್ನು ಹತೋಟಿಯಲ್ಲಿಟ್ಟುಕೊಂಡು ಅಭಿವೃದ್ಧಿ ಕೆಲಸಗಳಿಗೆ ಹಣ ಮೀಸಲಿಡುವ ಇವರ ಚಾಣಕ್ಯತನ ಮೆಚ್ಚುವಂತದ್ದು. ನುಡಿದಂತೆ ನಡೆದ ಸರ್ಕಾರ: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಅವರು ತೋರಿದ ಬದ್ಧತೆ ಮತದಾರರಲ್ಲಿ ಅವರ ಮೇಲಿನ ವಿಶ್ವಾಸವನ್ನು ಹೆಚ್ಚಿಸಿದೆ. ತಳಮಟ್ಟದ ನಾಯಕತ್ವ ಸಿದ್ದರಾಮಯ್ಯನವರು ಯಾವುದೇ ‘ಹೈಕಮಾಂಡ್’ ನೆರಳಿನಲ್ಲದೆ, ಹಳ್ಳಿ ಹಳ್ಳಿಯ ಜನರೊಂದಿಗೆ ಬೆರೆತು ಬೆಳೆದ ನಾಯಕ. ಅವರ ನೇರ ನುಡಿ, ತರ್ಕಬದ್ಧ ಮಾತುಗಳು ಮತ್ತು ಸಂವಿಧಾನದ ಮೇಲಿನ ಗೌರವ ಅವರನ್ನು ಶ್ರೇಷ್ಠ ಸಂಸದೀಯ ಪಟುವನ್ನಾಗಿ ಮಾಡಿದೆ. ”ಅಧಿಕಾರ ಎನ್ನುವುದು ಕೇವಲ ಕುರ್ಚಿಯಲ್ಲ, ಅದು ಬಡವರ ಕಣ್ಣೀರು ಒರೆಸುವ ಅವಕಾಶ” ಎಂಬ ಸಿದ್ಧಾಂತದೊಂದಿಗೆ ಅವರು ಮುನ್ನಡೆಯುತ್ತಿರುವುದು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ. ಸಮಾರೋಪ ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಸಿದ್ದರಾಮಯ್ಯನವರು, ಕರ್ನಾಟಕದ ಸಾಮಾಜಿಕ ನಕ್ಷೆಯಲ್ಲಿ ತಮ್ಮದೇ ಆದ ಅಳಿಸಲಾಗದ ಛಾಪನ್ನು ಒತ್ತಿದ್ದಾರೆ. ಅವರ ಈ ಪಯಣ ಕೇವಲ ಸುದೀರ್ಘ ಅವಧಿಯದ್ದಷ್ಟೇ ಅಲ್ಲದೆ, ‘ಸಮ ಸಮಾಜ’ದ ನಿರ್ಮಾಣದ ಹಾದಿಯಲ್ಲಿ ಒಂದು ಭರವಸೆಯ ನಡಿಗೆಯಾಗಿದೆ.
ಸಾಧಕ ಶಿವು ಸಣ್ಣಗೌಡ್ರಿಗೆ ರಾಜ್ಯಮಟ್ಟದ ‘ಕನ್ನಡ ಕವಿರತ್ನ’ ಪ್ರಶಸ್ತಿ ಗೌರವ