ಊಹಾ ಪತ್ರಿಕೋದ್ಯಮವು ಪತ್ರಿಕೋದ್ಯಮ ಮತ್ತು ಸಮಾಜ ಎರಡಕ್ಕೂ ಅಪಾಯ : ಸಿದ್ದರಾಮಯ್ಯ

ಊಹಾ ಪತ್ರಿಕೋದ್ಯಮವು ಪತ್ರಿಕೋದ್ಯಮ ಮತ್ತು ಸಮಾಜ ಎರಡಕ್ಕೂ ಅಪಾಯ : ಸಿದ್ದರಾಮಯ್ಯ

ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಎಂದು ಅರ್ಥವಲ್ಲವೇ? ಊಹಾ ಪತ್ರಿಕೋದ್ಯಮವು ಪತ್ರಿಕೋದ್ಯಮ ಮತ್ತು ಸಮಾಜ ಎರಡಕ್ಕೂ ಅಪಾಯ. ಹೀಗಾಗಿ ಪತ್ರಿಕೋದ್ಯಮವು ಇದರಿಂದ ಹೊರಗೆ ಬರಬೇಕಿದೆ.

ಮಾಧ್ಯಮ ಸ್ವತಂತ್ರವಾಗಿ, ನಿರ್ಭೀತಿಯಿಂದ ಸುದ್ದಿ ಮಾಡಬೇಕು ಎನ್ನುವುದರಲ್ಲಿ ನಂಬಿಕೆ ಇಟ್ಟುಕೊಂಡಿರುವವನು ನಾನು. ಜವಾಹರಲಾಲ್ ನೆಹರೂ ಅವರೂ ಇದನ್ನೇ ನಂಬಿದ್ದರು ಮತ್ತು ಪಾಲಿಸಿದ್ದರು. ಯಾವುದೇ ಚಾನಲ್ ಗಳು ನನ್ನ ಬಗ್ಗೆ ಎಷ್ಟು ಸುಳ್ಳು ಹೇಳಿದರೂ ನಾನು ಯಾರಿಗೂ ಫೋನ್ ಮಾಡಿ ಪ್ರಶ್ನೆ ಮಾಡುವವನಲ್ಲ.

ನನ್ನ ಕಾರಿನ ಮೇಲೆ ಕಾಗೆ ಕೂತಿದ್ದನ್ನು ಚರ್ಚೆ ನಡೆಸಿ, ಮೂಢನಂಬಿಕೆ ಬಿತ್ತುವುದನ್ನು ಪತ್ರಿಕಾವೃತ್ತಿ ಎಂದು ಕರೆಯಬೇಕಾ? ಜನರನ್ನು ಮೌಡ್ಯಕ್ಕೆ ತಳ್ಳುವುದು ಪತ್ರಿಕಾ ವೃತ್ತಿಯಾ? ಈ ಬಗ್ಗೆ ನೀವೆಲ್ಲರೂ ಯೋಚಿಸಬೇಕು.

ನಾನು ಇಂದು ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಮತ್ತು ಮಾಧ್ಯಮ ಸಂಜೀವಿನಿ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಪತ್ರಕರ್ತರಿಗೆ ಅನುಕೂಲ ಒದಗಿಸಿದ್ದೇನೆ. ನಮ್ಮ ಪರವಾಗಿ ಬರೆಯಲಿ ಎನ್ನುವ ಕಾರಣದಿಂದ ಇವನ್ನು ಜಾರಿ ಮಾಡಿರುವುದಲ್ಲ. ನೀವೆಲ್ಲ ಸತ್ಯ ಬರೆಯಿರಿ, ಜನರ ಪರವಾಗಿ, ಪ್ರಜಾಪ್ರಭುತ್ವದ ಪರವಾಗಿ ಇರಬೇಕು ಎಂಬುದು ನಮ್ಮ ಆಶಯ.

ಸ್ವಾತಂತ್ರ್ಯಪೂರ್ವದಲ್ಲಿ ಜನರನ್ನು ಎಚ್ಚರಿಸುವ, ಸ್ವಾತಂತ್ರ್ಯ ಹೋರಾಟದ ಪರವಾಗಿ ಪತ್ರಿಕೆಗಳು ಕೆಲಸ ಮಾಡಿದ್ದವು. ಇಂದು ಪ್ರಜಾಪ್ರಭುತ್ವದ ಉಳಿವಿಗಾಗಿ ಶ್ರಮಿಸಬೇಕು.
ಸಂವಿಧಾನದ ಮೌಲ್ಯಗಳು ಮತ್ತು ಸತ್ಯವನ್ನು ಮರೆಮಾಚುವ ಕೆಲಸ ಆಗಬಾರದು. ಎಲ್ಲ ಜನರಿಗೂ ಸಮಾನ ಅವಕಾಶ ಮತ್ತು ಜಾತಿ-ವರ್ಗ ರಹಿತ ಸಮಾಜ ಸೃಷ್ಟಿಯಾಗಬೇಕು ಎನ್ನುವುದು ಸಂವಿಧಾನದ ಮೌಲ್ಯ. ಇದನ್ನು ಎತ್ತಿ ಹಿಡಿಯುವುದು ಪತ್ರಿಕಾ ವೃತ್ತಿಯ ಜವಾಬ್ದಾರಿ.

ದ್ವೇಷದ, ಪ್ರೀತಿಯಿಲ್ಲದ ಸಮಾಜ ಸೃಷ್ಟಿಸುವ ಪ್ರಯತ್ನಕ್ಕೆ ಮಾಧ್ಯಮಗಳು ಬೆಂಬಲಿಸಬಾರದು. ನನ್ನ ಮಾತುಗಳನ್ನು ಕೇವಲ ಪಕ್ಷದ ಚೌಕಟ್ಟಿನಲ್ಲಿ ಮಾತ್ರ ನೋಡದೆ ಸಮಾಜ ಮುಖಿಯಾಗಿ ಕೂಡ ನೋಡಬೇಕು ಎಂದು ಮನವಿ ಮಾಡುತ್ತೇನೆ.

– ಬೆಂಗಳೂರಿನಲ್ಲಿ ನಡೆದ “ಪತ್ರಿಕಾ ದಿನಾಚರಣೆ-2025” ಹಾಗೂ “ನಿಜ ಸುದ್ದಿಗಾಗಿ ಸಮರ” ಸಂವಾದದಲ್ಲಿ ನನ್ನ ಮಾತುಗಳು

You may have missed

ಸಿದ್ದರಾಮಯ್ಯ: ಅರಸು ದಾಖಲೆ ಸರಿಗಟ್ಟಿದ ‘ಅಹಿಂದ’ ಚಾಣಕ್ಯ – ಜನಪರ ಆಡಳಿತದ ಹೊಸ ಪರ್ವ ​ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ದೀರ್ಘಕಾಲ ಮುಖ್ಯಮಂತ್ರಿಯಾಗಿ ರಾಜ್ಯವಾಳಿದ ಕೀರ್ತಿ ಈವರೆಗೆ ದಿವಂಗತ ಡಿ. ದೇವರಾಜ ಅರಸು (7 ವರ್ಷ 239 ದಿನಗಳು) ಅವರಿಗೆ ಸಲ್ಲುತ್ತಿತ್ತು. ಆದರೆ, ಜನವರಿ 7, 2026ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಐತಿಹಾಸಿಕ ದಾಖಲೆಯನ್ನು ಮುರಿದು, ಕರ್ನಾಟಕದ ಇತಿಹಾಸದಲ್ಲಿ ಅತಿ ಸುದೀರ್ಘ ಕಾಲ ಆಡಳಿತ ನಡೆಸಿದ ನಾಯಕನಾಗಿ ಹೊರಹೊಮ್ಮಿದ್ದಾರೆ. ಇದು ಕೇವಲ ಅಂಕಿ-ಅಂಶಗಳ ಸಾಧನೆಯಲ್ಲ, ಬದಲಿಗೆ ಅವರ ಅಚಲ ಸಿದ್ಧಾಂತ ಮತ್ತು ಜನಪ್ರಿಯತೆಯ ಪ್ರತೀಕವಾಗಿದೆ. ​ಅರಸು ಮತ್ತು ಸಿದ್ದರಾಮಯ್ಯ: ಸಮಾಜಮುಖಿ ಹೋಲಿಕೆ ​ದೇವರಾಜ ಅರಸು ಅವರು ಹೇಗೆ ಭೂ ಸುಧಾರಣೆ ಮತ್ತು ಹಿಂದುಳಿದ ವರ್ಗಗಳ ಸಬಲೀಕರಣದ ಮೂಲಕ ‘ಕರ್ನಾಟಕದ ಕ್ರಾಂತಿಕಾರಿ ನಾಯಕ’ ಎನಿಸಿಕೊಂಡರೋ, ಸಿದ್ದರಾಮಯ್ಯನವರು ‘ಅಹಿಂದ’ (ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ) ವರ್ಗಗಳ ಧ್ವನಿಯಾಗಿ ಅದೇ ಹಾದಿಯಲ್ಲಿ ಮುನ್ನಡೆದಿದ್ದಾರೆ. ಮೈಸೂರು ಮಣ್ಣಿನ ಈ ಇಬ್ಬರು ನಾಯಕರು ಶೋಷಿತ ಸಮುದಾಯಗಳಿಗೆ ರಾಜಕೀಯ ಅಸ್ತಿತ್ವ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ​ಉತ್ತಮ ಆಡಳಿತದ ಪ್ರಮುಖ ಮೈಲಿಗಲ್ಲುಗಳು ​ಸಿದ್ದರಾಮಯ್ಯನವರ ಆಡಳಿತವನ್ನು ಶ್ಲಾಘಿಸಲು ಮುಖ್ಯ ಕಾರಣ ಅವರ ‘ಜನಪರ ಯೋಜನೆಗಳು’. ಅವರ ಆಡಳಿತ ವೈಖರಿಯಲ್ಲಿ ಆರ್ಥಿಕ ಶಿಸ್ತು ಮತ್ತು ಸಾಮಾಜಿಕ ಭದ್ರತೆಯ ಸುಂದರ ಸಮನ್ವಯವಿದೆ: ​ಭಾಗ್ಯಗಳ ಸರಣಿ: ಮೊದಲ ಅವಧಿಯಲ್ಲಿ (2013-18) ಜಾರಿಗೆ ತಂದ ‘ಅನ್ನಭಾಗ್ಯ’, ‘ಕ್ಷೀರಭಾಗ್ಯ’, ‘ಇಂದಿರಾ ಕ್ಯಾಂಟೀನ್’ನಂತಹ ಯೋಜನೆಗಳು ಬಡವರ ಹಸಿವು ನೀಗಿಸುವಲ್ಲಿ ಮೈಲಿಗಲ್ಲಾದವು. ​ಪಂಚ ಗ್ಯಾರಂಟಿಗಳು: ಎರಡನೇ ಅವಧಿಯಲ್ಲಿ ಜಾರಿಗೆ ತಂದ ಐದು ಗ್ಯಾರಂಟಿಗಳು (ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ) ಇಂದು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಆಸರೆಯಾಗಿವೆ. ​ಆರ್ಥಿಕ ತಜ್ಞತೆ: ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ಅಂದರೆ 16 ಬಾರಿ ಬಜೆಟ್ ಮಂಡಿಸಿದ ಹೆಗ್ಗಳಿಕೆ ಇವರದು. ಆರ್ಥಿಕ ಕೊರತೆಯನ್ನು ಹತೋಟಿಯಲ್ಲಿಟ್ಟುಕೊಂಡು ಅಭಿವೃದ್ಧಿ ಕೆಲಸಗಳಿಗೆ ಹಣ ಮೀಸಲಿಡುವ ಇವರ ಚಾಣಕ್ಯತನ ಮೆಚ್ಚುವಂತದ್ದು. ​ನುಡಿದಂತೆ ನಡೆದ ಸರ್ಕಾರ: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಅವರು ತೋರಿದ ಬದ್ಧತೆ ಮತದಾರರಲ್ಲಿ ಅವರ ಮೇಲಿನ ವಿಶ್ವಾಸವನ್ನು ಹೆಚ್ಚಿಸಿದೆ. ​ತಳಮಟ್ಟದ ನಾಯಕತ್ವ ​ಸಿದ್ದರಾಮಯ್ಯನವರು ಯಾವುದೇ ‘ಹೈಕಮಾಂಡ್’ ನೆರಳಿನಲ್ಲದೆ, ಹಳ್ಳಿ ಹಳ್ಳಿಯ ಜನರೊಂದಿಗೆ ಬೆರೆತು ಬೆಳೆದ ನಾಯಕ. ಅವರ ನೇರ ನುಡಿ, ತರ್ಕಬದ್ಧ ಮಾತುಗಳು ಮತ್ತು ಸಂವಿಧಾನದ ಮೇಲಿನ ಗೌರವ ಅವರನ್ನು ಶ್ರೇಷ್ಠ ಸಂಸದೀಯ ಪಟುವನ್ನಾಗಿ ಮಾಡಿದೆ. ​”ಅಧಿಕಾರ ಎನ್ನುವುದು ಕೇವಲ ಕುರ್ಚಿಯಲ್ಲ, ಅದು ಬಡವರ ಕಣ್ಣೀರು ಒರೆಸುವ ಅವಕಾಶ” ಎಂಬ ಸಿದ್ಧಾಂತದೊಂದಿಗೆ ಅವರು ಮುನ್ನಡೆಯುತ್ತಿರುವುದು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ. ​ಸಮಾರೋಪ ​ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಸಿದ್ದರಾಮಯ್ಯನವರು, ಕರ್ನಾಟಕದ ಸಾಮಾಜಿಕ ನಕ್ಷೆಯಲ್ಲಿ ತಮ್ಮದೇ ಆದ ಅಳಿಸಲಾಗದ ಛಾಪನ್ನು ಒತ್ತಿದ್ದಾರೆ. ಅವರ ಈ ಪಯಣ ಕೇವಲ ಸುದೀರ್ಘ ಅವಧಿಯದ್ದಷ್ಟೇ ಅಲ್ಲದೆ, ‘ಸಮ ಸಮಾಜ’ದ ನಿರ್ಮಾಣದ ಹಾದಿಯಲ್ಲಿ ಒಂದು ಭರವಸೆಯ ನಡಿಗೆಯಾಗಿದೆ.

error: Content is protected !!