ಜನರಿಗೆ ಮರಣ ಶಾಸನ ಬರೆಯುವ ಬಲ್ದೊಟ ಕಾರ್ಖಾನೆ ಕೊಪ್ಪಳದಿಂದ ತೊಲಗಲಿ  

ಜನರಿಗೆ ಮರಣ ಶಾಸನ ಬರೆಯುವ ಬಲ್ದೊಟ ಕಾರ್ಖಾನೆ ಕೊಪ್ಪಳದಿಂದ ತೊಲಗಲಿ  

ಕೊಡತಗೇರಿ ಎಕ್ಸಪ್ರೆಸ್ ಡಿಜಿಟೆಲ್ ಡೆಸ್ಕ್

ಕೊಪ್ಪಳ:  ಕೊಪ್ಪಳದ ಕೂಗು ಅಳತೆಯಲ್ಲಿರುವ ಬಲ್ಡೊಟ ಕಾರ್ಖಾನೆ ಕೊಪ್ಪಳದ ಜನರಿಗೆ ಮರಣ ಶಾಸನ ಬರೆಯುವ ಕಾರ್ಖಾನೆಯಾಗಿದ್ದು ಕೊಪ್ಪಳದಿಂದ ತೊಲಗಲಿ ಎಂದು ಜನರು ಅಕ್ರೋಶ ವ್ಯಕ್ತ ಪಡಿಸಿದ್ದಾರೆ. ಹೌದು ಜಿಲ್ಲಾಕೇಂದ್ರದ ಸಮೀಪದಲ್ಲಿ ‘ಬಲ್ದೊಟ ಕಂಪನಿ’ ಉಕ್ಕಿನ ಕಾರ್ಖಾನೆ ವಿಸ್ತರಿಸಲು ಕಾಂಪೌಂಡ್ ಹಾಕಿಕೊಂಡಿರುವ ಆವರಣದಲ್ಲಿ ಕೆರೆ ಇರುವಕಾರಣ

ಸುಪ್ರೀಂಕೋರ್ಟ್‌ ಆದೇಶವನ್ನು ಬಲ್ದೊಟ ಕಾರ್ಖಾನೆ ಉಲ್ಲಂಘನೆ ಮಾಡಿದ್ದೂ ಅಲ್ಲದೆ ಸಾರ್ವಜನಿಕ ಮುಕ್ತವಾಗಿಸಬೇಕಾದ ಕೆರೆಯನ್ನು ಒತ್ತುವರಿ ಮಾಡಿ ಮತ್ತೆ ಕಂಪನಿ ಉದ್ದಟಟನ ಪ್ರದರ್ಶನ ಮಾಡಿದೆ.  ಕೆರೆಯಲ್ಲಿ ಜಾನುವಾರುಗಳಿಗೆ ನೀರು ಕುಡಿಯಲು ಅವಕಾಶ ಮಾಡಿಕೊಡಬೇಕು ಎಂದು ಕುರಿ, ಆಕಳು ಸೇರಿದಂತೆ ಸಾವಿರಕ್ಕೂ ಅಧಿಕ ಜಾನುವಾರ ಹೊಡೆದುಕೊಂಡು ಕೆರೆಯ ಕಡೆಗೆ ನೀರು ಕುಡಿಸಲು ಹೋದ ಕುರಿಗಾಯಿ ಮೇಲೆ ಕಂಪನಿಯ ಭದ್ರತಾ ಸಿಬ್ಬಂದಿ ಹಲ್ಲೆ ಮಾಡಿದ ಘಟನೆ ನಡೆದಿದೆ.

ಒಂಬತ್ತು ಜನ ಹೋರಾಟಗಾರರ ಮೇಲೆ ಪ್ರಕರಣದಾಖಲಿಸಿದ ಕಂಪನಿ ಸಿಬ್ಬಂದಿ

ಸುಪ್ರೀಂ ಆದೇಶದಂತೆ ಬಸಾಪುರ ಕೆರೆಯನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಬೇಕು, ಜಾನುವಾರುಗಳು ನೀರು ಕುಡಿಯಲು ಅವಕಾಶ ಮಾಡಿಕೊಡಬೇಕು ಎಂದು ಕೊಪ್ಪಳ ಬಚಾವೊ ಜನಾಂದೋಲನ ಸಮಿತಿ ವತಿಯಿಂದ ಎರಡು ದಿನಗಳ ಹಿಂದೆ ಪ್ರತಿಭಟನೆ ನಡೆಸಿತ್ತು. ಆಗ ಕುರಿ, ದನಗಳನ್ನು ಕಾರ್ಖಾನೆಯ ಆವರಣದೊಳಗೆ ಇರುವ ಕೆರೆಗೆ ನುಗ್ಗಿಸಿ ಆಕ್ರೋಶ ವ್ಯಕ್ತಪಡಿಸಿದ್ದರಿಂದ ಇದಕ್ಕೆ ಒಂಬತ್ತು ಜನ ಹೋರಾಟಗಾರರ ಮೇಲೆ ಪ್ರಕರಣ ದಾಖಲಾಗಿದೆ.ಹೋರಾಟದ ಭಾಗವಾಗಿ ಶುಕ್ರವಾರ ಬೆಳಿಗ್ಗೆ ಬಸಾಪುರ ಗ್ರಾಮದ ಕುರಿಗಾಯಿ ದೇವಪ್ಪ ಹಾಲಹಳ್ಳಿ ಕುರಿಗಳಿಗೆ ನೀರು ಕುಡಿಸಲು ಕೆರೆಯ ಬಳಿ ಹೋದಾಗ  ‘ಬಲ್ದೊಟ ಕಂಪನಿಯ ಭದ್ರತಾ ಸಿಬ್ಬಂದಿ ಮನಬಂದಂತೆ ರಕ್ತ ಬರುವಂತೆ ಹಲ್ಲೆ ಮಾಡಿದ ವಿಡಿಯೊಗಳು ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿವೆ. ಚಿಕಿತ್ಸೆಗಾಗಿ ಹಲ್ಲೆಗೋಳಗಾದ ವ್ಯಕ್ತಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.ಹಲ್ಲೆ ವಿಷಯ ತಿಳಿದು ಹೋರಾಟಗಾರರು ಕಾರ್ಖಾನೆ ಬಳಿ ಹೋದಾಗ ಭದ್ರತಾ ಸಿಬ್ಬಂದಿ ಜೊತೆ ಮಾತಿನ ಚಕಮಕಿ ನಡೆದಿದೆ ನಂತರ ಪೊಲೀಸರು ಬಂದು ಪರಿಸ್ಥಿತಿ ತಿಳಿಗೋಳಿಸಿದ್ದಾರೆ.

ಭಾರತೀಯ ದಂಡಸಂಹಿತೆ 2023ರ ಅಡಿಯಲ್ಲಿ ಪ್ರಕರಣ:

ಬಿಎಸ್‌ಪಿಎಲ್ ಭದ್ರತಾ ವ್ಯವಸ್ಥಾಪಕ ಎಂ. ಮಹೇಶ ನೀಡಿದ ದೂರಿನ ಆಧಾರದಲ್ಲಿ ಹೋರಾಟಗಾರರಾದ ಹಿರಿಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು, ರೈತ ಮುಖಂಡ ಹನುಮಂತಪ್ಪ ಕಲ್ಕಕೇರಿ, ಮಂಗಳೇಶ ರಾಥೋಡ, ಮುದಕಪ್ಪ ಹೊಸಮನಿ, ಕೆ.ಬಿ. ಗೋನಾಳ, ಯಮನೂರಪ್ಪ ಪೂಜಾರ, ಮಂಜುನಾಥ ಗೊಂಡಬಾಳ, ಭೀಮೇಶ ಕಲಿಕೇರಿ ಹಾಗೂ ಎಸ್.ಎ. ಗಫಾರ್ ವಿರುದ್ಧ ಪ್ರಕರಣ ದಾಖಲಾಗಿದೆ.

ಜು. 23ರಂದು ಮಧ್ಯಾಹ್ನ 12 ಗಂಟೆಗೆ ಬಿಎಸ್‌ಪಿಎಲ್ ಕಾರ್ಖಾನೆ ಕಾಂಪೌಂಡ್‌ನಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿದ್ದಾಗ ಜಾನುವಾರುಗಳೊಂದಿಗೆ ಬಂದು, ಒತ್ತಾಯದಿಂದ ನಮ್ಮನ್ನು ತಳ್ಳಿ ಕಾಂಪೌಂಡ್ ಒಳಗೆ ಜಾನುವಾರುಗಳನ್ನು ಕಾನೂನು ಬಾಹೀರವಾಗಿ ನುಗ್ಗಿಸಿದ್ದಾರೆ. ಬಲವಂತವಾಗಿ ಒಳಗೆ ಪ್ರವೇಶ ಮಾಡಿದ್ದು ಅಲ್ಲದೆ, ನನಗೆ ಮತ್ತು ನಮ್ಮ ಸಿಬ್ಬಂದಿಯನ್ನು ತಳ್ಳಿದ್ದಾರೆ ಎಂದು ಆರೋಪಿಸಿದ್ದಾರೆ. ಹೀಗಾಗಿ, ಇವರ ವಿರುದ್ಧ ಕಲಂ 329-(3), ಸಂಹಿತೆ 190 ಭಾರತೀಯ ದಂಡಸಂಹಿತೆ 2023ರ ಅಡಿಯಲ್ಲಿ ಕ್ರಮವಹಿಸುವಂತೆ ಕೋರಿದ್ದಾರೆ.

ನಮ್ಮ ಕೆರೆ ನಮ್ಮ ಹಕ್ಕು

ಸುಪ್ರೀಂ ಆದೇಶದಂತೆ ಬಸಾಪುರ ಕೆರೆಯನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಬೇಕಾದ ಜಿಲ್ಲಾಡಳಿತದ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ,ಕಂಪನಿಯು ಬ್ರಿಟಿಷ್ ಕಂಪನಿಯರೀತಿ ಬಸಾಪುರ ಸುತ್ತಲಿನ ಹಳ್ಳಿಯಜನರ ಹಾಗೂ ಪ್ರಾಣಿ, ದನಕರುಗಳು, ಸೇರಿದಂತೆ ಅನೇಕ ಜೀವ ಸಂಕುಲಕ್ಕೆ ಉಪಯುಕ್ತವಾಗಿದ್ದ ಕೆರೆಯನ್ನು ಒತ್ತುವರಿ ಮಾಡಿದ್ದೂ ಅಲ್ಲದೆ ಸಿಬ್ಬಂದಿಗಳು ದೌರ್ಜನ್ಯ ನಡೆಸುತ್ತಿದ್ದಾರೆ.

ಕೆರೆ ನೀರಿಗಾಗಿ ಧನ,ಕರುಗಳು ನೀರು ಕುಡಿಯಲು ಬಿಡದೆ ಹಲ್ಲೆ ಮಾಡಿದ್ದೂ ಎಷ್ಟರ ಮಟ್ಟಿಗೆ ಸರಿ ಎಂಬ ಪ್ರಶ್ನೆ  ಹೋರಾಟಗಾರರದ್ದು ಇಲ್ಲಿ ನಿರಂತರ ದೌರ್ಜನ್ಯ ನಡೆಸುತ್ತಿರುವುದು ಗೊತ್ತಿದ್ದರೂ ಜನಪ್ರತಿನಿಧಿಗಳು ಮಾತ್ರ ತಮ್ಮ ಕುರ್ಚಿಗಾಗಿ, ಲಾಭ ನಷ್ಟದ ಲೆಕ್ಕಾಚಾರದಲ್ಲಿ ತೊಡಗಿಕೊಂಡಿದ್ದಾರೆ, ಅಧಿಕಾರಿಗಳು ನಮಗೂ ಇದಕ್ಕೂ ಸಂಬಂಧ ಇಲ್ಲಾ ಎಂಬಂತೆ ವರ್ಥಿಸುತ್ತಿದ್ದಾರೆ, ಇದೆಲ್ಲವನ್ನು ಗಮನಿಸುತ್ತಿರುವ ಹೋರಾಟಗಾರರು ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪದ ಹೋರಾಟಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ.

                       

ವರದಿ – ಎಸ್.ಎಂ.ಹಿರೇಮಠ

You may have missed

ಸಿದ್ದರಾಮಯ್ಯ: ಅರಸು ದಾಖಲೆ ಸರಿಗಟ್ಟಿದ ‘ಅಹಿಂದ’ ಚಾಣಕ್ಯ – ಜನಪರ ಆಡಳಿತದ ಹೊಸ ಪರ್ವ ​ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ದೀರ್ಘಕಾಲ ಮುಖ್ಯಮಂತ್ರಿಯಾಗಿ ರಾಜ್ಯವಾಳಿದ ಕೀರ್ತಿ ಈವರೆಗೆ ದಿವಂಗತ ಡಿ. ದೇವರಾಜ ಅರಸು (7 ವರ್ಷ 239 ದಿನಗಳು) ಅವರಿಗೆ ಸಲ್ಲುತ್ತಿತ್ತು. ಆದರೆ, ಜನವರಿ 7, 2026ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಐತಿಹಾಸಿಕ ದಾಖಲೆಯನ್ನು ಮುರಿದು, ಕರ್ನಾಟಕದ ಇತಿಹಾಸದಲ್ಲಿ ಅತಿ ಸುದೀರ್ಘ ಕಾಲ ಆಡಳಿತ ನಡೆಸಿದ ನಾಯಕನಾಗಿ ಹೊರಹೊಮ್ಮಿದ್ದಾರೆ. ಇದು ಕೇವಲ ಅಂಕಿ-ಅಂಶಗಳ ಸಾಧನೆಯಲ್ಲ, ಬದಲಿಗೆ ಅವರ ಅಚಲ ಸಿದ್ಧಾಂತ ಮತ್ತು ಜನಪ್ರಿಯತೆಯ ಪ್ರತೀಕವಾಗಿದೆ. ​ಅರಸು ಮತ್ತು ಸಿದ್ದರಾಮಯ್ಯ: ಸಮಾಜಮುಖಿ ಹೋಲಿಕೆ ​ದೇವರಾಜ ಅರಸು ಅವರು ಹೇಗೆ ಭೂ ಸುಧಾರಣೆ ಮತ್ತು ಹಿಂದುಳಿದ ವರ್ಗಗಳ ಸಬಲೀಕರಣದ ಮೂಲಕ ‘ಕರ್ನಾಟಕದ ಕ್ರಾಂತಿಕಾರಿ ನಾಯಕ’ ಎನಿಸಿಕೊಂಡರೋ, ಸಿದ್ದರಾಮಯ್ಯನವರು ‘ಅಹಿಂದ’ (ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ) ವರ್ಗಗಳ ಧ್ವನಿಯಾಗಿ ಅದೇ ಹಾದಿಯಲ್ಲಿ ಮುನ್ನಡೆದಿದ್ದಾರೆ. ಮೈಸೂರು ಮಣ್ಣಿನ ಈ ಇಬ್ಬರು ನಾಯಕರು ಶೋಷಿತ ಸಮುದಾಯಗಳಿಗೆ ರಾಜಕೀಯ ಅಸ್ತಿತ್ವ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ​ಉತ್ತಮ ಆಡಳಿತದ ಪ್ರಮುಖ ಮೈಲಿಗಲ್ಲುಗಳು ​ಸಿದ್ದರಾಮಯ್ಯನವರ ಆಡಳಿತವನ್ನು ಶ್ಲಾಘಿಸಲು ಮುಖ್ಯ ಕಾರಣ ಅವರ ‘ಜನಪರ ಯೋಜನೆಗಳು’. ಅವರ ಆಡಳಿತ ವೈಖರಿಯಲ್ಲಿ ಆರ್ಥಿಕ ಶಿಸ್ತು ಮತ್ತು ಸಾಮಾಜಿಕ ಭದ್ರತೆಯ ಸುಂದರ ಸಮನ್ವಯವಿದೆ: ​ಭಾಗ್ಯಗಳ ಸರಣಿ: ಮೊದಲ ಅವಧಿಯಲ್ಲಿ (2013-18) ಜಾರಿಗೆ ತಂದ ‘ಅನ್ನಭಾಗ್ಯ’, ‘ಕ್ಷೀರಭಾಗ್ಯ’, ‘ಇಂದಿರಾ ಕ್ಯಾಂಟೀನ್’ನಂತಹ ಯೋಜನೆಗಳು ಬಡವರ ಹಸಿವು ನೀಗಿಸುವಲ್ಲಿ ಮೈಲಿಗಲ್ಲಾದವು. ​ಪಂಚ ಗ್ಯಾರಂಟಿಗಳು: ಎರಡನೇ ಅವಧಿಯಲ್ಲಿ ಜಾರಿಗೆ ತಂದ ಐದು ಗ್ಯಾರಂಟಿಗಳು (ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ) ಇಂದು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಆಸರೆಯಾಗಿವೆ. ​ಆರ್ಥಿಕ ತಜ್ಞತೆ: ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ಅಂದರೆ 16 ಬಾರಿ ಬಜೆಟ್ ಮಂಡಿಸಿದ ಹೆಗ್ಗಳಿಕೆ ಇವರದು. ಆರ್ಥಿಕ ಕೊರತೆಯನ್ನು ಹತೋಟಿಯಲ್ಲಿಟ್ಟುಕೊಂಡು ಅಭಿವೃದ್ಧಿ ಕೆಲಸಗಳಿಗೆ ಹಣ ಮೀಸಲಿಡುವ ಇವರ ಚಾಣಕ್ಯತನ ಮೆಚ್ಚುವಂತದ್ದು. ​ನುಡಿದಂತೆ ನಡೆದ ಸರ್ಕಾರ: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಅವರು ತೋರಿದ ಬದ್ಧತೆ ಮತದಾರರಲ್ಲಿ ಅವರ ಮೇಲಿನ ವಿಶ್ವಾಸವನ್ನು ಹೆಚ್ಚಿಸಿದೆ. ​ತಳಮಟ್ಟದ ನಾಯಕತ್ವ ​ಸಿದ್ದರಾಮಯ್ಯನವರು ಯಾವುದೇ ‘ಹೈಕಮಾಂಡ್’ ನೆರಳಿನಲ್ಲದೆ, ಹಳ್ಳಿ ಹಳ್ಳಿಯ ಜನರೊಂದಿಗೆ ಬೆರೆತು ಬೆಳೆದ ನಾಯಕ. ಅವರ ನೇರ ನುಡಿ, ತರ್ಕಬದ್ಧ ಮಾತುಗಳು ಮತ್ತು ಸಂವಿಧಾನದ ಮೇಲಿನ ಗೌರವ ಅವರನ್ನು ಶ್ರೇಷ್ಠ ಸಂಸದೀಯ ಪಟುವನ್ನಾಗಿ ಮಾಡಿದೆ. ​”ಅಧಿಕಾರ ಎನ್ನುವುದು ಕೇವಲ ಕುರ್ಚಿಯಲ್ಲ, ಅದು ಬಡವರ ಕಣ್ಣೀರು ಒರೆಸುವ ಅವಕಾಶ” ಎಂಬ ಸಿದ್ಧಾಂತದೊಂದಿಗೆ ಅವರು ಮುನ್ನಡೆಯುತ್ತಿರುವುದು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ. ​ಸಮಾರೋಪ ​ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಸಿದ್ದರಾಮಯ್ಯನವರು, ಕರ್ನಾಟಕದ ಸಾಮಾಜಿಕ ನಕ್ಷೆಯಲ್ಲಿ ತಮ್ಮದೇ ಆದ ಅಳಿಸಲಾಗದ ಛಾಪನ್ನು ಒತ್ತಿದ್ದಾರೆ. ಅವರ ಈ ಪಯಣ ಕೇವಲ ಸುದೀರ್ಘ ಅವಧಿಯದ್ದಷ್ಟೇ ಅಲ್ಲದೆ, ‘ಸಮ ಸಮಾಜ’ದ ನಿರ್ಮಾಣದ ಹಾದಿಯಲ್ಲಿ ಒಂದು ಭರವಸೆಯ ನಡಿಗೆಯಾಗಿದೆ.

error: Content is protected !!