ನೂತನ ತಾಲೂಕ ಪಂಚಾಯತಿ  ಕಾರ್ಯ ನಿರ್ವಾಹಕ ಅಧಿಕಾರಿ ಕಂದಕೂರ ಗೋಗೇರಿ ಶಾಲೆಗೆ ಭೇಟಿ

ನೂತನ ತಾಲೂಕ ಪಂಚಾಯತಿ  ಕಾರ್ಯ ನಿರ್ವಾಹಕ ಅಧಿಕಾರಿ ಕಂದಕೂರ ಗೋಗೇರಿ ಶಾಲೆಗೆ ಭೇಟಿ

ಗಜೇಂದ್ರಗಡ :-  ಗಜೇಂದ್ರಗಡ ತಾಲೂಕು ಪಂಚಾಯತಿಗೆ ನೂತನವಾಗಿ ಕಾರ್ಯ ನಿರ್ವಾಹಕ ಅಧಿಕಾರಿಯಾಗಿ ನೇಮಕಗೊಂಡಿರುವ ಚಂದ್ರಶೇಖರ್ ಬಿ, ಕಂದಕೂರ ಅವರು ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಸ್ಥಳೀಯ ತಾಪಂ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿರ್ಗಮಿತ ಇಒ ಮಂಜುಳಾ ಹಕಾರಿ ಅವರಿಂದ ಅಧಿಕಾರವನ್ನು ಸ್ವೀಕರಿಸಿದರು. ನಿರ್ಗಮಿತ ಇಓ ಮಂಜುಳಾ ಹಕಾರಿ ಅವರು ನೂತನ ಇಒ ಚಂದ್ರಶೇಖರ ಬಿ ಕಂದಕೂರ ಅವರಿಗೆ ಶುಭ ಹಾರೈಸಿದರು.

ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಚಂದ್ರಶೇಖರ್ ಬಿ ಅವರು ಕಾರ್ಯೋತ್ಸಾಹ ತೋರಿಸಿ, ಗೋಗೇರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದರು. ಶಾಲೆಯ ಬೋಧಕ ಹಾಗೂ ಮೂಲಭೂತ ಸೌಕರ್ಯಗಳ ಕುರಿತಾಗಿ ತಾತ್ಕಾಲಿಕವಾಗಿ ತಾಪಂ ಕಚೇರಿಗೆ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿದ ಇಒ, ಶಾಲೆಯ ಕೊಠಡಿಗಳ ಸ್ಥಿತಿಗತಿಯ ಪರಿಶೀಲನೆ ನಡೆಸಿ, ಶಿಕ್ಷಕರೊಂದಿಗೆ ಚರ್ಚಿಸಿದರು. ದುರಸ್ತಿ ಅಗತ್ಯವಿರುವ ಕೊಠಡಿಗಳ ಕುರಿತು ಸ್ಥಳದಲ್ಲಿಯೇ ಪರಿಶೀಲನೆ ನಡೆಸಿದ ಅವರು, ಮುಂದಿನ ಆರ್ಥಿಕ ವರ್ಷದಲ್ಲಿ ಆದ್ಯತೆಯ ಆಧಾರದಲ್ಲಿ ಅನುದಾನ ಮಂಜೂರಾತಿ ಮಾಡುವ ಭರವಸೆ ನೀಡಿದರು. 

ಈ ಹಿಂದೆ ಶಿಕ್ಷಕರಾಗಿ ಸೇವೆ ಸಲ್ಲಿಸಿರುವ ಅನುಭವವುಳ್ಳ ಚಂದ್ರಶೇಖರ್ ಕಂದಕೂರ ಅವರು ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿ, ವಿದ್ಯೆಯ ಮಹತ್ವದ ಬಗ್ಗೆ ಸಲಹೆ ನೀಡಿದರು. “ವಿದ್ಯಾರ್ಥಿಗಳ ಜೀವನ ಬಂಗಾರದಂತೆ; ಇಂತಹ ಪ್ರಾಯದಲ್ಲಿ ಅಧ್ಯಯನವೇ ಪ್ರಾಮುಖ್ಯ. ಬೇರೆ ವಿಚಾರಗಳಿಗೆ ಸಮಯ ವ್ಯಯಿಸದೆ, ಕಲಿಕೆಗೆ ಹೆಚ್ಚು ಸಮಯ ನೀಡಬೇಕು,” ಎಂದು ಮಾರ್ಗದರ್ಶನ ನೀಡಿದರು.

ಬಳಿಕ ವಿದ್ಯಾರ್ಥಿಗಳೊಂದಿಗೆ ಬಿಸಿ ಯೂಟವನ್ನು ಸೇವಿಸಿ, ಆಹಾರದ ಗುಣಮಟ್ಟ ಮತ್ತು ಅಡುಗೆಯ ರುಚಿಯ ಕುರಿತು ಸ್ಥಳದಲ್ಲಿಯೇ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕ ಬಸವರಾಜ ಬಡಿಗೇರ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕರು, ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದ ಸೇರಿದಂತೆ ವಿಧ್ಯಾರ್ಥಿಗಳು ಗ್ರಾಮ ಪಂಚಾಯತಿ ಸಿಬ್ಬಂದಿಗಳು ಹಾಗೂ ತಾಲೂಕ ನರೇಗಾ ಸಿಬ್ಬಂದಿಗಳು ಉಪಸ್ಥಿತರಿದ್ದರು

You may have missed

ಸಿದ್ದರಾಮಯ್ಯ: ಅರಸು ದಾಖಲೆ ಸರಿಗಟ್ಟಿದ ‘ಅಹಿಂದ’ ಚಾಣಕ್ಯ – ಜನಪರ ಆಡಳಿತದ ಹೊಸ ಪರ್ವ ​ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ದೀರ್ಘಕಾಲ ಮುಖ್ಯಮಂತ್ರಿಯಾಗಿ ರಾಜ್ಯವಾಳಿದ ಕೀರ್ತಿ ಈವರೆಗೆ ದಿವಂಗತ ಡಿ. ದೇವರಾಜ ಅರಸು (7 ವರ್ಷ 239 ದಿನಗಳು) ಅವರಿಗೆ ಸಲ್ಲುತ್ತಿತ್ತು. ಆದರೆ, ಜನವರಿ 7, 2026ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಐತಿಹಾಸಿಕ ದಾಖಲೆಯನ್ನು ಮುರಿದು, ಕರ್ನಾಟಕದ ಇತಿಹಾಸದಲ್ಲಿ ಅತಿ ಸುದೀರ್ಘ ಕಾಲ ಆಡಳಿತ ನಡೆಸಿದ ನಾಯಕನಾಗಿ ಹೊರಹೊಮ್ಮಿದ್ದಾರೆ. ಇದು ಕೇವಲ ಅಂಕಿ-ಅಂಶಗಳ ಸಾಧನೆಯಲ್ಲ, ಬದಲಿಗೆ ಅವರ ಅಚಲ ಸಿದ್ಧಾಂತ ಮತ್ತು ಜನಪ್ರಿಯತೆಯ ಪ್ರತೀಕವಾಗಿದೆ. ​ಅರಸು ಮತ್ತು ಸಿದ್ದರಾಮಯ್ಯ: ಸಮಾಜಮುಖಿ ಹೋಲಿಕೆ ​ದೇವರಾಜ ಅರಸು ಅವರು ಹೇಗೆ ಭೂ ಸುಧಾರಣೆ ಮತ್ತು ಹಿಂದುಳಿದ ವರ್ಗಗಳ ಸಬಲೀಕರಣದ ಮೂಲಕ ‘ಕರ್ನಾಟಕದ ಕ್ರಾಂತಿಕಾರಿ ನಾಯಕ’ ಎನಿಸಿಕೊಂಡರೋ, ಸಿದ್ದರಾಮಯ್ಯನವರು ‘ಅಹಿಂದ’ (ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ) ವರ್ಗಗಳ ಧ್ವನಿಯಾಗಿ ಅದೇ ಹಾದಿಯಲ್ಲಿ ಮುನ್ನಡೆದಿದ್ದಾರೆ. ಮೈಸೂರು ಮಣ್ಣಿನ ಈ ಇಬ್ಬರು ನಾಯಕರು ಶೋಷಿತ ಸಮುದಾಯಗಳಿಗೆ ರಾಜಕೀಯ ಅಸ್ತಿತ್ವ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ​ಉತ್ತಮ ಆಡಳಿತದ ಪ್ರಮುಖ ಮೈಲಿಗಲ್ಲುಗಳು ​ಸಿದ್ದರಾಮಯ್ಯನವರ ಆಡಳಿತವನ್ನು ಶ್ಲಾಘಿಸಲು ಮುಖ್ಯ ಕಾರಣ ಅವರ ‘ಜನಪರ ಯೋಜನೆಗಳು’. ಅವರ ಆಡಳಿತ ವೈಖರಿಯಲ್ಲಿ ಆರ್ಥಿಕ ಶಿಸ್ತು ಮತ್ತು ಸಾಮಾಜಿಕ ಭದ್ರತೆಯ ಸುಂದರ ಸಮನ್ವಯವಿದೆ: ​ಭಾಗ್ಯಗಳ ಸರಣಿ: ಮೊದಲ ಅವಧಿಯಲ್ಲಿ (2013-18) ಜಾರಿಗೆ ತಂದ ‘ಅನ್ನಭಾಗ್ಯ’, ‘ಕ್ಷೀರಭಾಗ್ಯ’, ‘ಇಂದಿರಾ ಕ್ಯಾಂಟೀನ್’ನಂತಹ ಯೋಜನೆಗಳು ಬಡವರ ಹಸಿವು ನೀಗಿಸುವಲ್ಲಿ ಮೈಲಿಗಲ್ಲಾದವು. ​ಪಂಚ ಗ್ಯಾರಂಟಿಗಳು: ಎರಡನೇ ಅವಧಿಯಲ್ಲಿ ಜಾರಿಗೆ ತಂದ ಐದು ಗ್ಯಾರಂಟಿಗಳು (ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ) ಇಂದು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಆಸರೆಯಾಗಿವೆ. ​ಆರ್ಥಿಕ ತಜ್ಞತೆ: ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ಅಂದರೆ 16 ಬಾರಿ ಬಜೆಟ್ ಮಂಡಿಸಿದ ಹೆಗ್ಗಳಿಕೆ ಇವರದು. ಆರ್ಥಿಕ ಕೊರತೆಯನ್ನು ಹತೋಟಿಯಲ್ಲಿಟ್ಟುಕೊಂಡು ಅಭಿವೃದ್ಧಿ ಕೆಲಸಗಳಿಗೆ ಹಣ ಮೀಸಲಿಡುವ ಇವರ ಚಾಣಕ್ಯತನ ಮೆಚ್ಚುವಂತದ್ದು. ​ನುಡಿದಂತೆ ನಡೆದ ಸರ್ಕಾರ: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಅವರು ತೋರಿದ ಬದ್ಧತೆ ಮತದಾರರಲ್ಲಿ ಅವರ ಮೇಲಿನ ವಿಶ್ವಾಸವನ್ನು ಹೆಚ್ಚಿಸಿದೆ. ​ತಳಮಟ್ಟದ ನಾಯಕತ್ವ ​ಸಿದ್ದರಾಮಯ್ಯನವರು ಯಾವುದೇ ‘ಹೈಕಮಾಂಡ್’ ನೆರಳಿನಲ್ಲದೆ, ಹಳ್ಳಿ ಹಳ್ಳಿಯ ಜನರೊಂದಿಗೆ ಬೆರೆತು ಬೆಳೆದ ನಾಯಕ. ಅವರ ನೇರ ನುಡಿ, ತರ್ಕಬದ್ಧ ಮಾತುಗಳು ಮತ್ತು ಸಂವಿಧಾನದ ಮೇಲಿನ ಗೌರವ ಅವರನ್ನು ಶ್ರೇಷ್ಠ ಸಂಸದೀಯ ಪಟುವನ್ನಾಗಿ ಮಾಡಿದೆ. ​”ಅಧಿಕಾರ ಎನ್ನುವುದು ಕೇವಲ ಕುರ್ಚಿಯಲ್ಲ, ಅದು ಬಡವರ ಕಣ್ಣೀರು ಒರೆಸುವ ಅವಕಾಶ” ಎಂಬ ಸಿದ್ಧಾಂತದೊಂದಿಗೆ ಅವರು ಮುನ್ನಡೆಯುತ್ತಿರುವುದು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ. ​ಸಮಾರೋಪ ​ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಸಿದ್ದರಾಮಯ್ಯನವರು, ಕರ್ನಾಟಕದ ಸಾಮಾಜಿಕ ನಕ್ಷೆಯಲ್ಲಿ ತಮ್ಮದೇ ಆದ ಅಳಿಸಲಾಗದ ಛಾಪನ್ನು ಒತ್ತಿದ್ದಾರೆ. ಅವರ ಈ ಪಯಣ ಕೇವಲ ಸುದೀರ್ಘ ಅವಧಿಯದ್ದಷ್ಟೇ ಅಲ್ಲದೆ, ‘ಸಮ ಸಮಾಜ’ದ ನಿರ್ಮಾಣದ ಹಾದಿಯಲ್ಲಿ ಒಂದು ಭರವಸೆಯ ನಡಿಗೆಯಾಗಿದೆ.

error: Content is protected !!