ರಾಜ್ಯ ಮಟ್ಟದ  ಖೋ-ಖೋ ರೆಫರಿ ಪರೀಕ್ಷೆ

ಕೊಡತಗೇರಿ ಎಕ್ಸಪ್ರೆಸ್ ಸುದ್ದಿ

ಕೊಟ್ಟೂರು:ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯ ಖೋ ಖೋ ಸಂಸ್ಥೆ ಬೆಂಗಳೂರು, ವಿಜಯನಗರ ಜಿಲ್ಲಾ ಖೋ ಖೋ ಸಂಸ್ಥೆ ವಿಜಯನಗರ . ಶ್ರೀ ಗುರು ಕೊಟ್ಟೂರೇಶ್ವರ ಸ್ಪೋರ್ಟ್ಸ್ ಕ್ಲಬ್ ಕೊಟ್ಟೂರು ವತಿಯಿಂದ ರಾಜ್ಯಮಟ್ಟದ ಖೋ ಖೋ ರೆಫರಿ ಪರೀಕ್ಷೆ ದಿನಾಂಕ 9 ಆಗಸ್ಟ್ 2025 ರಿಂದ 10 ಆಗಸ್ಟ್ 2025 ರವರೆಗೆ ಎರಡು ದಿನ ಪರೀಕ್ಷೆ ನೆಡೆಸುವ ಕಾರ್ಯಕ್ರಮ ನಡೆಸಲಾಯಿತು.

ಈ ಕಾರ್ಯಕ್ರಮವನ್ನು ವಿಜಯನಗರ ಜಿಲ್ಲಾ ಖೋ ಖೋ ಸಂಸ್ಥೆ ಅಧ್ಯಕ್ಷರಾದ ಡಾ ರವೀಂದ್ರಗೌಡ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಬಿ ಬಿ ಶಿವಾನಂದ ರವರು ಗಿಡಕ್ಕೆ ನೀರು ಹಾಕುವುದರ ಮೂಲಕ ಉದ್ಘಾಟನೆ ಮಾಡಲಾಯಿತು.

ಈ ಸಂದರ್ಭದಲ್ಲಿ
ಮುಖ್ಯ ಅಥಿತಿಗಳಾಗಿ ಡಾ.ಚಂದ್ರಶೇಖರ್ ಅಂತರಾಷ್ಟೀಯ ಕ್ರೀಡಾಪಟುಗಳು ಹಾಗೂ ರೆಫರಿ ಬೋರ್ಡ್ ಮುಖ್ಯಸ್ಥರು ಇದ್ದರು.ಹಾಗೂ ಅತಿಥಿಗಳಾಗಿ ದೈಹಿಕ ಶಿಕ್ಷಣ ಪರಿವೀಕ್ಷಕರಾದ ಶ್ರೀಯುತ ಶಶಿಧರ್ ಮೈದೂರು, ಮುಖ್ಯಗುರುಗಳಾದ ಮಾಲಿನಿ‌ ಮೇಡಂ, ಅರ್ ಟಿ ಐ ಸದಸ್ಯರಾದ ಕೆ ಎಸ್ ಹರೀಶ್,
ನಂದಿನಿ ಒಡೆಯರ್,ಶಂಕರ್, ಲಿಂಗಾನಾಯ್ಕ ಇತರರು ಉಪಸ್ಥಿತರಿದ್ದರು.

ಚಿಗಟೇರಿ ಜಯಪ್ಪವರದಿ: 

You may have missed

ಸಿದ್ದರಾಮಯ್ಯ: ಅರಸು ದಾಖಲೆ ಸರಿಗಟ್ಟಿದ ‘ಅಹಿಂದ’ ಚಾಣಕ್ಯ – ಜನಪರ ಆಡಳಿತದ ಹೊಸ ಪರ್ವ ​ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ದೀರ್ಘಕಾಲ ಮುಖ್ಯಮಂತ್ರಿಯಾಗಿ ರಾಜ್ಯವಾಳಿದ ಕೀರ್ತಿ ಈವರೆಗೆ ದಿವಂಗತ ಡಿ. ದೇವರಾಜ ಅರಸು (7 ವರ್ಷ 239 ದಿನಗಳು) ಅವರಿಗೆ ಸಲ್ಲುತ್ತಿತ್ತು. ಆದರೆ, ಜನವರಿ 7, 2026ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಐತಿಹಾಸಿಕ ದಾಖಲೆಯನ್ನು ಮುರಿದು, ಕರ್ನಾಟಕದ ಇತಿಹಾಸದಲ್ಲಿ ಅತಿ ಸುದೀರ್ಘ ಕಾಲ ಆಡಳಿತ ನಡೆಸಿದ ನಾಯಕನಾಗಿ ಹೊರಹೊಮ್ಮಿದ್ದಾರೆ. ಇದು ಕೇವಲ ಅಂಕಿ-ಅಂಶಗಳ ಸಾಧನೆಯಲ್ಲ, ಬದಲಿಗೆ ಅವರ ಅಚಲ ಸಿದ್ಧಾಂತ ಮತ್ತು ಜನಪ್ರಿಯತೆಯ ಪ್ರತೀಕವಾಗಿದೆ. ​ಅರಸು ಮತ್ತು ಸಿದ್ದರಾಮಯ್ಯ: ಸಮಾಜಮುಖಿ ಹೋಲಿಕೆ ​ದೇವರಾಜ ಅರಸು ಅವರು ಹೇಗೆ ಭೂ ಸುಧಾರಣೆ ಮತ್ತು ಹಿಂದುಳಿದ ವರ್ಗಗಳ ಸಬಲೀಕರಣದ ಮೂಲಕ ‘ಕರ್ನಾಟಕದ ಕ್ರಾಂತಿಕಾರಿ ನಾಯಕ’ ಎನಿಸಿಕೊಂಡರೋ, ಸಿದ್ದರಾಮಯ್ಯನವರು ‘ಅಹಿಂದ’ (ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ) ವರ್ಗಗಳ ಧ್ವನಿಯಾಗಿ ಅದೇ ಹಾದಿಯಲ್ಲಿ ಮುನ್ನಡೆದಿದ್ದಾರೆ. ಮೈಸೂರು ಮಣ್ಣಿನ ಈ ಇಬ್ಬರು ನಾಯಕರು ಶೋಷಿತ ಸಮುದಾಯಗಳಿಗೆ ರಾಜಕೀಯ ಅಸ್ತಿತ್ವ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ​ಉತ್ತಮ ಆಡಳಿತದ ಪ್ರಮುಖ ಮೈಲಿಗಲ್ಲುಗಳು ​ಸಿದ್ದರಾಮಯ್ಯನವರ ಆಡಳಿತವನ್ನು ಶ್ಲಾಘಿಸಲು ಮುಖ್ಯ ಕಾರಣ ಅವರ ‘ಜನಪರ ಯೋಜನೆಗಳು’. ಅವರ ಆಡಳಿತ ವೈಖರಿಯಲ್ಲಿ ಆರ್ಥಿಕ ಶಿಸ್ತು ಮತ್ತು ಸಾಮಾಜಿಕ ಭದ್ರತೆಯ ಸುಂದರ ಸಮನ್ವಯವಿದೆ: ​ಭಾಗ್ಯಗಳ ಸರಣಿ: ಮೊದಲ ಅವಧಿಯಲ್ಲಿ (2013-18) ಜಾರಿಗೆ ತಂದ ‘ಅನ್ನಭಾಗ್ಯ’, ‘ಕ್ಷೀರಭಾಗ್ಯ’, ‘ಇಂದಿರಾ ಕ್ಯಾಂಟೀನ್’ನಂತಹ ಯೋಜನೆಗಳು ಬಡವರ ಹಸಿವು ನೀಗಿಸುವಲ್ಲಿ ಮೈಲಿಗಲ್ಲಾದವು. ​ಪಂಚ ಗ್ಯಾರಂಟಿಗಳು: ಎರಡನೇ ಅವಧಿಯಲ್ಲಿ ಜಾರಿಗೆ ತಂದ ಐದು ಗ್ಯಾರಂಟಿಗಳು (ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ) ಇಂದು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಆಸರೆಯಾಗಿವೆ. ​ಆರ್ಥಿಕ ತಜ್ಞತೆ: ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ಅಂದರೆ 16 ಬಾರಿ ಬಜೆಟ್ ಮಂಡಿಸಿದ ಹೆಗ್ಗಳಿಕೆ ಇವರದು. ಆರ್ಥಿಕ ಕೊರತೆಯನ್ನು ಹತೋಟಿಯಲ್ಲಿಟ್ಟುಕೊಂಡು ಅಭಿವೃದ್ಧಿ ಕೆಲಸಗಳಿಗೆ ಹಣ ಮೀಸಲಿಡುವ ಇವರ ಚಾಣಕ್ಯತನ ಮೆಚ್ಚುವಂತದ್ದು. ​ನುಡಿದಂತೆ ನಡೆದ ಸರ್ಕಾರ: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಅವರು ತೋರಿದ ಬದ್ಧತೆ ಮತದಾರರಲ್ಲಿ ಅವರ ಮೇಲಿನ ವಿಶ್ವಾಸವನ್ನು ಹೆಚ್ಚಿಸಿದೆ. ​ತಳಮಟ್ಟದ ನಾಯಕತ್ವ ​ಸಿದ್ದರಾಮಯ್ಯನವರು ಯಾವುದೇ ‘ಹೈಕಮಾಂಡ್’ ನೆರಳಿನಲ್ಲದೆ, ಹಳ್ಳಿ ಹಳ್ಳಿಯ ಜನರೊಂದಿಗೆ ಬೆರೆತು ಬೆಳೆದ ನಾಯಕ. ಅವರ ನೇರ ನುಡಿ, ತರ್ಕಬದ್ಧ ಮಾತುಗಳು ಮತ್ತು ಸಂವಿಧಾನದ ಮೇಲಿನ ಗೌರವ ಅವರನ್ನು ಶ್ರೇಷ್ಠ ಸಂಸದೀಯ ಪಟುವನ್ನಾಗಿ ಮಾಡಿದೆ. ​”ಅಧಿಕಾರ ಎನ್ನುವುದು ಕೇವಲ ಕುರ್ಚಿಯಲ್ಲ, ಅದು ಬಡವರ ಕಣ್ಣೀರು ಒರೆಸುವ ಅವಕಾಶ” ಎಂಬ ಸಿದ್ಧಾಂತದೊಂದಿಗೆ ಅವರು ಮುನ್ನಡೆಯುತ್ತಿರುವುದು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ. ​ಸಮಾರೋಪ ​ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಸಿದ್ದರಾಮಯ್ಯನವರು, ಕರ್ನಾಟಕದ ಸಾಮಾಜಿಕ ನಕ್ಷೆಯಲ್ಲಿ ತಮ್ಮದೇ ಆದ ಅಳಿಸಲಾಗದ ಛಾಪನ್ನು ಒತ್ತಿದ್ದಾರೆ. ಅವರ ಈ ಪಯಣ ಕೇವಲ ಸುದೀರ್ಘ ಅವಧಿಯದ್ದಷ್ಟೇ ಅಲ್ಲದೆ, ‘ಸಮ ಸಮಾಜ’ದ ನಿರ್ಮಾಣದ ಹಾದಿಯಲ್ಲಿ ಒಂದು ಭರವಸೆಯ ನಡಿಗೆಯಾಗಿದೆ.

error: Content is protected !!