ಸಂಜೆಯೊಳಗೆ ಮಹೇಶ್‌ ಶೆಟ್ಟಿ ತಿಮರೋಡಿ ಅರೆಸ್ಟ್‌ ಮಾಡಲು ಪರಮೇಶ್ವರ್‌ ಸೂಚನೆ

ಸಂಜೆಯೊಳಗೆ ಮಹೇಶ್‌ ಶೆಟ್ಟಿ ತಿಮರೋಡಿ ಅರೆಸ್ಟ್‌ ಮಾಡಲು ಪರಮೇಶ್ವರ್‌ ಸೂಚನೆ

ಕೊಡತಗೇರಿ ಎಕ್ಸ್‌ಪ್ರೆಸ್‌ ಡಿಜಿಟಲ್ ಹೌಸ್ 

Thimarodi Mahesh Shetty

ಬೆಂಗಳೂರು: ಇಂದು ಸಂಜೆಯೊಳಗೆ ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Thimarod) ಅವರನ್ನು ಬಂಧಿಸುವಂತೆ ಗೃಹ ಸಚಿವ ಜಿ. ಪರಮೇಶ್ವರ್‌ (G Parameshwar) ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿಗಳು 24 ಕೊಲೆ ಮಾಡಿದ್ದಾರೆಂದು ತಿಮರೋಡಿ ಹೇಳಿಕೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಸೂಚನೆ ನೀಡಿದರು. ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿದ ಪರಮೇಶ್ವರ್‌ ಸಂಜೆಯೊಳಗೆ ಅರೆಸ್ಟ್‌ ಮಾಡುವಂತೆ ಸೂಚನೆ ನೀಡಿದರು. ಸಿಎಂ ವಿರುದ್ಧವೇ ಮಾತನಾಡಿದವನನ್ನಾ ಸುಮ್ನೆ ಬಿಡಬೇಕಾ ಅಂತಲೂ ಪ್ರಶ್ನೆ ಮಾಡಿದರು. ಈ ವೇಳೆ ಅಧಿಕಾರಿಗಳು ಅದು 2023ರ ಮೇನಲ್ಲಿ ಮಾತನಾಡಿದ್ದ ವಿಡಿಯೋ ಅಂತ ಗೃಹ ಸಚಿವರ ಗಮನಕ್ಕೆ ತಂದರು.

error: Content is protected !!