ಅಕ್ರಮ ಅಕ್ಕಿ ಸಂಗ್ರಹ: 3.6 ಕ್ವಿಂಟಲ್ ಪಡಿತರ ಅಕ್ಕಿ ವಶಕ್ಕೆ: ಆರೋಪಿ ಅರೆಸ್ಟ್!

ಅಕ್ರಮ ಅಕ್ಕಿ ಸಂಗ್ರಹ: 3.6 ಕ್ವಿಂಟಲ್ ಪಡಿತರ ಅಕ್ಕಿ ವಶಕ್ಕೆ: ಆರೋಪಿ ಅರೆಸ್ಟ್!
ಕೊಡತಗೇರಿ ಎಕ್ಸ್‌ಪ್ರೆಸ್‌ ಡಿಜಿಟಲ್ ಹೌಸ್

ಗದಗ : ಗದಗ:- ಅಕ್ರಮ ಅಕ್ಕಿ ದಂಧೆಕೋರರ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ದಾಳಿ ಮಾಡಿರುವ ಘಟನೆ ಗದಗದ ಬೆಟಗೇರಿಯ ಮಂಜುನಾಥ ನಗರದಲ್ಲಿ ಜರುಗಿದೆ.
ಬೆಟಗೇರಿಯ ಪೊಲೀಸರು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಅಕ್ರಮ ಅಕ್ಕಿ ದಂಧೆಯಲ್ಲಿ ಪಾಲ್ಗೊಂಡಿದ್ದ ಆರೋಪಿ ಅಹ್ಮದ್ ಯಲಿಗಾರ ನನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೇ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 3.6 ಕ್ವಿಂಟಲ್‌ ಅಕ್ಕಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಬೆಟಗೇರಿ ಪೊಲೀಸ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಇನ್ನೂ ಗದಗ ಜಿಲ್ಲೆಯಲ್ಲಿ ಸಾಕಷ್ಟು ರೀತಿಯಲ್ಲಿ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಜಿಲ್ಲೆಯ ರೋಣ ,ಅಬ್ಬಿಗೇರಿ ಗಜೇಂದ್ರಗಡ ಸೇರಿದಂತೆ ಅನ್ನ ಭಾಗ್ಯದ ಅಕ್ಕಿ ಸಂಗ್ರಹ ಮಾಡಿ ಮಾರಾಟ ಮಾಡುತ್ತಿದ್ದು ಜಿಲ್ಲಾ ಆಹಾರ ಇಲಾಖೆಯಲ್ಲಿ ದೂರುಗಳಿದ್ದರು ಕೂಡ ಅಧಿಕಾರಿಗಳು ಅಕ್ರಮಕೊರರ ಜೊತೆ ಕೈ ಜೊಡಿಸಿರುವದು ಸಾಬಿತು ಆಗಿದೆ.ಬಡವರಿಗೆ ವಿತರಣೆ ಆಗಬೇಕಾಗಿರುವ ಪಡಿತರ ಅಕ್ಕಿಯನ್ನ ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಕೋಟ್ಯಾಂತರ ರೂ. ಕೊಳ್ಳೆ ಹೊಡೆಯುವ ಕೆಲಸ ಇಂದಿಗೂ ನಿಂತಿಲ್ಲ. ಇದಕ್ಕೆ ಕಡಿವಾಣ ಹಾಕುವ ಕೆಲಸದಲ್ಲಿ ಅಧಿಕಾರಿಗಳು ಮುಂದಾಗಬೇಕಿದೆ.

error: Content is protected !!