ಕುರಬ ಸಮಾಜಕ್ಕೆ ST ಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸು CM
ಕೊಡತಗೇರಿ ಎಕ್ಸಪ್ರೆಸ್ ಡಿಜಿಟಲ್ ಹೌಸ್
ಕುರುಬ ಸಮುದಾಯಕ್ಕೆ ಎಸ್ ಟಿ ಗೆ ಸೇರಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಳ್ಳಲಿದ್ದು, ರಾಜ್ಯ ಸರ್ಕಾರ ಈಗಾಗಲೇ ತನ್ನ ಶಿಫಾರಸ್ಸನ್ನು ಕೇಂದ್ರಕ್ಕೆ ಸಲ್ಲಿಸಿದೆ. ಜಾತಿಗಣತಿ ವರದಿ ಇನ್ನೊಂದು ತಿಂಗಳ ಅವಧಿಯಲ್ಲಿ ಸಲ್ಲಿಕೆಯಾಗಲಿದ್ದು, ಸೂಕ್ತ ಚರ್ಚೆಯ ನಂತರ ಅಂಗೀಕರಿಸಿ ಜಾರಿಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ದೇವದುರ್ಗದ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ತಿಂಥಣಿ ಬ್ರಿಡ್ಜ್ ವತಿಯಿಂದ ಆಯೋಜಿಸಲಾಗಿದ್ದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಕನಕಗುರುಪೀಠ ಜಾತ್ಯಾತೀತ ಪೀಠವಾಗಿ ಕೆಲಸ ಮಾಡುತ್ತಿದ್ದು, ಗುರುಪೀಠದಲ್ಲಿ ಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರು ಶಿಕ್ಷಣ, ಆಧ್ಯಾತ್ಮ ಮತ್ತು ಜಾತ್ಯತೀತ ಮನೋಭಾವಕ್ಕೆ ಹೆಚ್ಚು ಒತ್ತು ನೀಡಿದ್ದರು ಎಂದರು.
ಕುರುಬ ಸಮುದಾಯಕ್ಕೆ ಮೊದಲ ಬಾರಿಗೆ ಕಾಗಿನೆಲೆ ಗುರುಪೀಠ 1992 ರಲ್ಲಿ ಸ್ಥಾಪಿತವಾಗಿ, ಶ್ರೀ ತಾರಕಾನಂದ ಸ್ವಾಮೀಜಿಯವರು ಅದರ ಮೊದಲ ಗುರುಗಳಾಗಿದ್ದರು. ಕಲ್ಯಾಣ ಕರ್ನಾಟಕ, ಬೆಂಗಳೂರು, ಮೈಸೂರು ಮುಂಬಯಿ ಕರ್ನಾಟಕ ವಿಭಾಗಗಳಿದ್ದು, ಈ ಎಲ್ಲಾ ವಿಭಾಗಗಳಿಗೂ ಪ್ರತ್ಯೇಕ ಗುರುಗಳಿದ್ದು, ಈ ವಿಭಾಗಕ್ಕೆ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರು ಗುರುಗಳಾಗಿದ್ದರು. ಗುರುಪೀಠದಲ್ಲಿ ಶಿಕ್ಷಣ, ಆಧ್ಯಾತ್ಮ, ಜಾತ್ಯಾತೀತ ಮನೋಭಾವಕ್ಕೆ ಹೆಚ್ಚು ಒತ್ತು ನೀಡಿದರು.
ಕಾಗಿನೆಲೆ ಗುರುಪೀಠ ಸ್ಥಾಪನೆಯ ಉದ್ದೇಶವೇ ಸಮಸಮಾಜ ನಿರ್ಮಾಣವಾಗಿದೆ. ಶ್ರೀಗಳ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬ ವರ್ಗ ಹಾಗೂ ಇಡೀ ಸಮಾಜಕ್ಕೆ ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಕನಕದಾಸರು ‘ಕುಲಕುಲವೆಂದು ಹೊಡೆದಾಡದಿರಿ’ ಎಂದಂತೆ, ಬುದ್ಧ ಬಸವಾದಿ ಶರಣರು ಜಾತಿವ್ಯವಸ್ಥೆಯನ್ನು ವಿರೋಧಿಸುತ್ತಾ ಬಂದಿದ್ದಾರೆ. ನಮ್ಮ ಸಮಾಜ ವಿವಿಧ ಜಾತಿ, ಧರ್ಮ, ವರ್ಗ, ಭಾಷೆಗಳಿಂದ ಕೂಡಿದೆ. ಮನುಜರೆಲ್ಲರೂ ಒಂದೇ ಕುಟುಂಬ ಎಂದು ಭಾವಿಸಬೇಕು. ಸಾಮಾಜಿಕ ಚಿಂತಕರಾದ ಲೋಹಿಯಾ ಅವರು ಮುಂದುವರಿದ ಜಾತಿಯವರು ಸಮಾಜವನ್ನು ದಾರಿತಪ್ಪಿಸುವ ಕೆಲಸವನ್ನು ಮಾಡುತ್ತಾರೆ ಎಂದಿದ್ದರು. ಸಮಾನ ಅವಕಾಶವಿರುವ ಸಮಸಮಾಜವನ್ನು ನಿರ್ಮಿಸುವುದು ಅವಶ್ಯಕ.
ಕೆಲವರು ಶಿಕ್ಷಣ ದೊರೆತರೂ ಗುಲಾಮಗಿರಿಯ ಮನಸ್ಥಿತಿಯಿಂದ ಹೊರಬಂದಿಲ್ಲ. ಸ್ವಾಭಿಮಾನಿಗಳಾಗಿ ಬದುಕುವುದು ಮುಖ್ಯ. ವೈಚಾರಿಕ ಮತ್ತು ವೈಜ್ಞಾನಿಕ ಶಿಕ್ಷಣ ಪಡೆದ ಯುವಪೀಳಿಗೆ ಸ್ವಾಭಿಮಾನ ಬೆಳೆಸಿಕೊಳ್ಳಬೇಕು. ಸ್ವಾತಂತ್ರ್ಯ ಬಂದ ಸಂದರ್ಭದಲ್ಲಿ ಶೇ. 15 ರಷ್ಟಿದ್ದ ಶಿಕ್ಷಣ ಈಗ ಶೇ.76 ಆಗಿದ್ದರೂ, ನಮ್ಮಲ್ಲಿ ಜಾತಿವ್ಯವಸ್ಥೆ ನಶಿಸಿಲ್ಲ. ಜಡತ್ವದಿಂದ ಕೂಡಿದ ಸಮಾಜಕ್ಕೆ ಚಲನೆ ಬರಲು ಆರ್ಥಿಕ , ಸಾಮಾಜಿಕ ಸಮಾನತೆ ಬೇಕು. ಸಮಾಜದ ಮೌಢ್ಯಗಳನ್ನು ಅಳಿಸುವ ಕಾರ್ಯದಲ್ಲಿ ಸ್ವಾಮೀಜಿಯವರು ತೊಡಗಿದ್ದರು.
ಜನರ ಆರ್ಶೀವಾದದಿಂದ 8 ಬಾರಿ ಗೆದ್ದು, ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನಾಡಿನ ಎಲ್ಲ ಜನರ ಪ್ರೀತಿಯಿಂದಲೇ ರಾಜಕೀಯದಲ್ಲಿಯೂ ಇಂದಿಗೂ ಬದುಕಿದ್ದೇನೆ. ಈ ಸಮಾಜದ ಪ್ರೀತಿಗೆ ಬೆಲೆಕಟ್ಟಲಾಗದು. ಧ್ವನಿಯಿಲ್ಲದವರ ಪರವಾಗಿ ಹೋರಾಡುವುದೇ ನನ್ನ ಪ್ರಥಮ ಕೆಲಸ.
ಇಡೀ ರಾಜ್ಯಕ್ಕೆ ಕನಕಗುರುಪೀಠ ಜಾತ್ಯಾತೀತ ಪೀಠವಾಗಿ ಕೆಲಸ ಮಾಡುತ್ತಿದೆ. ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ವಸತಿ ನಿಲಯ, ಯಾತ್ರಿನಿವಾಸ ಸೇರಿದಂತೆ ಹಲವು ಬೇಡಿಕೆಗಳಿಗೆ ಅನುದಾನ ನೀಡಲಾಗುವುದು. ಎಲ್ಲ ದಲಿತ ಹಾಗೂ ಹಿಂದುಳಿದ ವರ್ಗಗಳ ಮಠಗಳಿಗೆ ಬೆಂಗಳೂರಿನಲ್ಲಿ ಸುಮಾರು 50 ಎಕರೆ ಪ್ರದೇಶವನ್ನು ನೀಡಲು ಇತ್ತೀಚೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದರು.

More Stories
ಗ್ರಾಮ ಸಮರಕ್ಕೆ ಮುಹೂರ್ತ ಫಿಕ್ಸ್: ಏಪ್ರಿಲ್-ಮೇ ತಿಂಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ
ಗ್ರಾಮ ಪಂಚಾಯಿತಿಗಳಲ್ಲಿ ಇನ್ನು ಆಡಳಿತಾಧಿಕಾರಿ ಪಾರುಪತ್ಯ: ಸರ್ಕಾರದ ಅಧಿಕೃತ ಆದೇಶ
ಸಿದ್ದರಾಮಯ್ಯ: ಅರಸು ದಾಖಲೆ ಸರಿಗಟ್ಟಿದ ‘ಅಹಿಂದ’ ಚಾಣಕ್ಯ – ಜನಪರ ಆಡಳಿತದ ಹೊಸ ಪರ್ವ ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ದೀರ್ಘಕಾಲ ಮುಖ್ಯಮಂತ್ರಿಯಾಗಿ ರಾಜ್ಯವಾಳಿದ ಕೀರ್ತಿ ಈವರೆಗೆ ದಿವಂಗತ ಡಿ. ದೇವರಾಜ ಅರಸು (7 ವರ್ಷ 239 ದಿನಗಳು) ಅವರಿಗೆ ಸಲ್ಲುತ್ತಿತ್ತು. ಆದರೆ, ಜನವರಿ 7, 2026ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಐತಿಹಾಸಿಕ ದಾಖಲೆಯನ್ನು ಮುರಿದು, ಕರ್ನಾಟಕದ ಇತಿಹಾಸದಲ್ಲಿ ಅತಿ ಸುದೀರ್ಘ ಕಾಲ ಆಡಳಿತ ನಡೆಸಿದ ನಾಯಕನಾಗಿ ಹೊರಹೊಮ್ಮಿದ್ದಾರೆ. ಇದು ಕೇವಲ ಅಂಕಿ-ಅಂಶಗಳ ಸಾಧನೆಯಲ್ಲ, ಬದಲಿಗೆ ಅವರ ಅಚಲ ಸಿದ್ಧಾಂತ ಮತ್ತು ಜನಪ್ರಿಯತೆಯ ಪ್ರತೀಕವಾಗಿದೆ. ಅರಸು ಮತ್ತು ಸಿದ್ದರಾಮಯ್ಯ: ಸಮಾಜಮುಖಿ ಹೋಲಿಕೆ ದೇವರಾಜ ಅರಸು ಅವರು ಹೇಗೆ ಭೂ ಸುಧಾರಣೆ ಮತ್ತು ಹಿಂದುಳಿದ ವರ್ಗಗಳ ಸಬಲೀಕರಣದ ಮೂಲಕ ‘ಕರ್ನಾಟಕದ ಕ್ರಾಂತಿಕಾರಿ ನಾಯಕ’ ಎನಿಸಿಕೊಂಡರೋ, ಸಿದ್ದರಾಮಯ್ಯನವರು ‘ಅಹಿಂದ’ (ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ) ವರ್ಗಗಳ ಧ್ವನಿಯಾಗಿ ಅದೇ ಹಾದಿಯಲ್ಲಿ ಮುನ್ನಡೆದಿದ್ದಾರೆ. ಮೈಸೂರು ಮಣ್ಣಿನ ಈ ಇಬ್ಬರು ನಾಯಕರು ಶೋಷಿತ ಸಮುದಾಯಗಳಿಗೆ ರಾಜಕೀಯ ಅಸ್ತಿತ್ವ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಉತ್ತಮ ಆಡಳಿತದ ಪ್ರಮುಖ ಮೈಲಿಗಲ್ಲುಗಳು ಸಿದ್ದರಾಮಯ್ಯನವರ ಆಡಳಿತವನ್ನು ಶ್ಲಾಘಿಸಲು ಮುಖ್ಯ ಕಾರಣ ಅವರ ‘ಜನಪರ ಯೋಜನೆಗಳು’. ಅವರ ಆಡಳಿತ ವೈಖರಿಯಲ್ಲಿ ಆರ್ಥಿಕ ಶಿಸ್ತು ಮತ್ತು ಸಾಮಾಜಿಕ ಭದ್ರತೆಯ ಸುಂದರ ಸಮನ್ವಯವಿದೆ: ಭಾಗ್ಯಗಳ ಸರಣಿ: ಮೊದಲ ಅವಧಿಯಲ್ಲಿ (2013-18) ಜಾರಿಗೆ ತಂದ ‘ಅನ್ನಭಾಗ್ಯ’, ‘ಕ್ಷೀರಭಾಗ್ಯ’, ‘ಇಂದಿರಾ ಕ್ಯಾಂಟೀನ್’ನಂತಹ ಯೋಜನೆಗಳು ಬಡವರ ಹಸಿವು ನೀಗಿಸುವಲ್ಲಿ ಮೈಲಿಗಲ್ಲಾದವು. ಪಂಚ ಗ್ಯಾರಂಟಿಗಳು: ಎರಡನೇ ಅವಧಿಯಲ್ಲಿ ಜಾರಿಗೆ ತಂದ ಐದು ಗ್ಯಾರಂಟಿಗಳು (ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ) ಇಂದು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಆಸರೆಯಾಗಿವೆ. ಆರ್ಥಿಕ ತಜ್ಞತೆ: ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ಅಂದರೆ 16 ಬಾರಿ ಬಜೆಟ್ ಮಂಡಿಸಿದ ಹೆಗ್ಗಳಿಕೆ ಇವರದು. ಆರ್ಥಿಕ ಕೊರತೆಯನ್ನು ಹತೋಟಿಯಲ್ಲಿಟ್ಟುಕೊಂಡು ಅಭಿವೃದ್ಧಿ ಕೆಲಸಗಳಿಗೆ ಹಣ ಮೀಸಲಿಡುವ ಇವರ ಚಾಣಕ್ಯತನ ಮೆಚ್ಚುವಂತದ್ದು. ನುಡಿದಂತೆ ನಡೆದ ಸರ್ಕಾರ: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಅವರು ತೋರಿದ ಬದ್ಧತೆ ಮತದಾರರಲ್ಲಿ ಅವರ ಮೇಲಿನ ವಿಶ್ವಾಸವನ್ನು ಹೆಚ್ಚಿಸಿದೆ. ತಳಮಟ್ಟದ ನಾಯಕತ್ವ ಸಿದ್ದರಾಮಯ್ಯನವರು ಯಾವುದೇ ‘ಹೈಕಮಾಂಡ್’ ನೆರಳಿನಲ್ಲದೆ, ಹಳ್ಳಿ ಹಳ್ಳಿಯ ಜನರೊಂದಿಗೆ ಬೆರೆತು ಬೆಳೆದ ನಾಯಕ. ಅವರ ನೇರ ನುಡಿ, ತರ್ಕಬದ್ಧ ಮಾತುಗಳು ಮತ್ತು ಸಂವಿಧಾನದ ಮೇಲಿನ ಗೌರವ ಅವರನ್ನು ಶ್ರೇಷ್ಠ ಸಂಸದೀಯ ಪಟುವನ್ನಾಗಿ ಮಾಡಿದೆ. ”ಅಧಿಕಾರ ಎನ್ನುವುದು ಕೇವಲ ಕುರ್ಚಿಯಲ್ಲ, ಅದು ಬಡವರ ಕಣ್ಣೀರು ಒರೆಸುವ ಅವಕಾಶ” ಎಂಬ ಸಿದ್ಧಾಂತದೊಂದಿಗೆ ಅವರು ಮುನ್ನಡೆಯುತ್ತಿರುವುದು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ. ಸಮಾರೋಪ ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಸಿದ್ದರಾಮಯ್ಯನವರು, ಕರ್ನಾಟಕದ ಸಾಮಾಜಿಕ ನಕ್ಷೆಯಲ್ಲಿ ತಮ್ಮದೇ ಆದ ಅಳಿಸಲಾಗದ ಛಾಪನ್ನು ಒತ್ತಿದ್ದಾರೆ. ಅವರ ಈ ಪಯಣ ಕೇವಲ ಸುದೀರ್ಘ ಅವಧಿಯದ್ದಷ್ಟೇ ಅಲ್ಲದೆ, ‘ಸಮ ಸಮಾಜ’ದ ನಿರ್ಮಾಣದ ಹಾದಿಯಲ್ಲಿ ಒಂದು ಭರವಸೆಯ ನಡಿಗೆಯಾಗಿದೆ.